Breaking: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ

Asha Bhosle passed away: ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ.

Breaking: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Asha Bhosle1

Updated on: Apr 12, 2026 | 1:31 PM

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ, ಡಾ ಪ್ರತೀಕ್ ಸಂಧಾನಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ’ ಎಂದಿದ್ದಾರೆ.

ನಿನ್ನೆ (ಏಪ್ರಿಲ್ 11) ರಂದು ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಂಗೀತ ಕ್ಷೇತ್ರದ ಸೆಲಬ್ರಿಟಿಗಳು, ಆಶಾ ಭೋಸ್ಲೆ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದರು, ಆದರೆ ಪ್ರಾರ್ಥನೆ ಫಲ ನೀಡಿಲ್ಲ. ಆಶಾ ಭೋಸ್ಲೆ ಅವರು ನಿಧನ ಹೊಂದಿದ್ದು, ಭಾರತೀಯ ಚಿತ್ರರಂಗ ಅದ್ಭುತ ಗಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್​​ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು. ಸುಮಾರು ಲಕ್ಷಕ್ಕೂ ಹೆಚ್ಚು ಹಾಡುಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಆಶಾ ಭೊಸ್ಲೆ ಅವರು ಭಾರತದ ಲಿಜೆಂಡರಿ ಗಾಯಕಿ, ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ ಅವರ ಸಹೋದರಿ. ಆಶಾ ಭೊಸ್ಲೆ ಅವರಿಗೆ ಮೂವರು ಮಕ್ಕಳು ಮತ್ತು ಕೆಲ ಮೊಮ್ಮಕ್ಕಳು ಇದ್ದಾರೆ. ಖ್ಯಾತ ಗಾಯಕಿ ಆಗಿರುವ ಜೊತೆಗೆ ಉದ್ಯಮಿಯೂ ಆಗಿದ್ದ ಆಶಾ ಭೋಸ್ಲೆ ಅವರು ರೆಸ್ಟಾರೆಂಟ್ ಉದ್ಯಮವನ್ನೂ ಸಹ ಹೊಂದಿದ್ದರು. ಅವರ ‘ಆಶಾಸ್’ ಕಿಚನ್ ದುಬೈ, ಕುವೈತ್ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಜೀವನ್ಮುಖಿ ಆಗಿರುತ್ತಿದ್ದ ಆಶಾ ಭೋಸ್ಲೆ ತಮ್ಮ 90ನೇ ವಯಸ್ಸಿನ ವರೆಗೂ ಲೈವ್ ಶೋಗಳನ್ನು ನೀಡುತ್ತಿದ್ದರು, ಹಾಡಿ ರಂಜಿಸುತ್ತಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sun, 12 April 26

Follow Us