AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳೆಬ್ಬಿಸಿದ ‘ಲೈಗರ್​’ ಗ್ಲಿಂಪ್ಸ್​ ವಿಡಿಯೋ; ವಿಜಯ್​ ದೇವರಕೊಂಡಗೆ ಭಾರೀ ಮೆಚ್ಚುಗೆ

ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ಗ್ಲಿಂಪ್ಸ್​​ ವಿಡಿಯೋ ರಿಲೀಸ್​ ಆಗಿತ್ತು. ಈ ವಿಡಿಯೋ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಬರೋಬ್ಬರಿ 2.5 ಕೋಟಿ ಡಿಜಿಟಲ್​ ವೀವ್ಸ್​ ಆಗಿದೆ. 5

ಧೂಳೆಬ್ಬಿಸಿದ ‘ಲೈಗರ್​’ ಗ್ಲಿಂಪ್ಸ್​ ವಿಡಿಯೋ; ವಿಜಯ್​ ದೇವರಕೊಂಡಗೆ ಭಾರೀ ಮೆಚ್ಚುಗೆ
ವಿಜಯ್​ ದೇವರಕೊಂಡ
TV9 Web
| Edited By: |

Updated on:Jan 04, 2022 | 1:40 PM

Share

ನಟ ವಿಜಯ್​ ದೇವರಕೊಂಡ (Vijay Devarakonda) ‘ಅರ್ಜುನ್​ ರೆಡ್ಡಿ’ (Arjun Reddy) ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು. ಅವರ ನಟನೆಯ ‘ಗೀತ ಗೋವಿಂದಂ’ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ಆ ಬಳಿಕ ಅವರ ಹಲವು ಸಿನಿಮಾಗಳು ತೆರೆಗೆ ಬಂದವು. ಈಗ ಅವರು ‘ಲೈಗರ್​’ ಸಿನಿಮಾ (Liger Movie) ಮೂಲಕ ಮತ್ತೆ ತೆರೆಮೇಲೆ ಬರೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಮೂಲಕ ಅವರು ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ವಿಜಯ್​ ಹಿಂದಿ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲೇ ಅದ್ಭುತ ಸ್ವಾಗತ ಸಿಕ್ಕಿದೆ. ಇತ್ತೀಚೆಗೆ ರಿಲೀಸ್​ ಆದ ‘ಲೈಗರ್​’ ಚಿತ್ರದ ಗ್ಲಿಂಪ್ಸ್​ ವಿಡಿಯೋ ಭಾರೀ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಆಗಸ್ಟ್ ತಿಂಗಳಲ್ಲಿ ‘ಲೈಗರ್​’ ಸಿನಿಮಾ ತೆರೆಗೆ ಬರುತ್ತಿದೆ. ಇದಕ್ಕೆ ಇನ್ನೂ 8 ತಿಂಗಳು ಬಾಕಿ ಇದೆ. ಈಗ ಸಿನಿಮಾ ಬಗ್ಗೆ ಒಂದೊಂದೇ ಅಪ್​ಡೇಟ್​ ನೀಡಲಾಗುತ್ತಿದೆ. ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ವಿಡಿಯೋ ರಿಲೀಸ್​ ಆಗಿತ್ತು. ಈ ವಿಡಿಯೋದಲ್ಲಿ ವಿಜಯ್​ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇನ್ನೂ ಕೆಲವರು ಅಚ್ಚರಿ ಹೊರಹಾಕಿದ್ದಾರೆ.

ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ಗ್ಲಿಂಪ್ಸ್​​ ವಿಡಿಯೋ ರಿಲೀಸ್​ ಆಗಿತ್ತು. ಈ ವಿಡಿಯೋ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಬರೋಬ್ಬರಿ 2.5 ಕೋಟಿ ಡಿಜಿಟಲ್​ ವೀವ್ಸ್​ ಆಗಿದೆ. 55.9 ಲಕ್ಷ ಜನರು ಈ ವಿಡಿಯೋಗೆ ಲೈಕ್ಸ್​ ಒತ್ತಿದ್ದಾರೆ. 15 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಬಂದಿವೆ. ಈ ವಿಚಾರ ‘ಲೈಗರ್​’ ತಂಡಕ್ಕೆ ಖುಷಿ ನೀಡಿದೆ.

ಈ ಸಿನಿಮಾದಲ್ಲಿ ಮೈಕಟ್​ ಟೈಸನ್​ ನಟಿಸುತ್ತಿರುವ ವಿಚಾರ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಬಾಕ್ಸಿಂಗ್​ ಜಗತ್ತಿನಲ್ಲಿ ಅಮೆರಿಕದ ಮೈಕ್​ ಟೈಸನ್​ ಅವರದ್ದು ದೊಡ್ಡ ಹೆಸರು. ಎದುರಾಳಿಗಳಿಗೆ ನಡುಕ ಹುಟ್ಟಿಸುವ ಅವರ ಬಾಕ್ಸಿಂಗ್​ ಪರಾಕ್ರಮಕ್ಕೆ ಸರಿಸಾಟಿ ಆಗಬಲ್ಲ ಮತ್ತೊಬ್ಬ ವ್ಯಕ್ತಿಯೇ ಇಲ್ಲ. ಇದೇ ಮೊದಲ ಬಾರಿಗೆ ಅವರು ಭಾರತೀಯ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೈಕ್​ ಟೈಸನ್​ ಮುಖಾಮುಖಿ ಆಗುವ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ.

ಈ ಸಿನಿಮಾವನ್ನು ಪುರಿ ಜಗನ್ನಾಥ್​, ಕರಣ್​ ಜೋಹರ್​, ಚಾರ್ಮಿ ಕೌರ್​, ಅಪೂರ್ವ ಮೆಹ್ತಾ, ಹೀರೂ ಯಶ್​ ಜೋಹರ್​ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಈ ಸಿನಿಮಾದ ಬಜೆಟ್​ 125 ಕೋಟಿ ರೂಪಾಯಿಗೂ ಅಧಿಕವಾಗಿದೆ. ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Liger First Glimpse: 24 ಗಂಟೆಯಲ್ಲಿ 16 ಮಿಲಿಯನ್ ವೀಕ್ಷಣೆ ಪಡೆದು ದಾಖಲೆ ಬರೆದ ವಿಜಯ್ ದೇವರಕೊಂಡ ನಟನೆಯ ಲೈಗರ್ 

20 ಮಿಲಿಯನ್​ ವೀವ್ಸ್​, 5 ಲಕ್ಷ ಲೈಕ್ಸ್​ ಪಡೆದ ‘ಲೈಗರ್​’ ಗ್ಲಿಂಪ್ಸ್​; ವಿಜಯ್​ ದೇವರಕೊಂಡಗೆ ಫ್ಯಾನ್ಸ್​ ಉಘೇ ಉಘೇ

Published On - 1:39 pm, Tue, 4 January 22

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ