AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ

‘ಲೋಕಃ’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. 270 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದ ಈ ಸಿನಿಮಾ ಒಟಿಟಿಗೆ ಬರಲು ಇನ್ನೂ ಸಮಯ ಬೇಕು ಎಂದು ದುಲ್ಕರ್ ಸಲ್ಮಾನ್ ತಿಳಿಸಿದ್ದಾರೆ. ಬೆಂಗಳೂರಿನ ಕೆಲವು ದೃಶ್ಯಗಳಿಗೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು. ಇದಕ್ಕೆ ತಂಡ ಕ್ಷಮೆ ಕೇಳಿತ್ತು.

‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ
ಕಲ್ಯಾಣಿ
ರಾಜೇಶ್ ದುಗ್ಗುಮನೆ
|

Updated on: Sep 22, 2025 | 7:27 AM

Share

‘ಲೋಕಃ: ಚಾಪ್ಟರ್ 1-ಚಂದ್ರ’ (Lokah) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದೆ.  ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಜೆಟ್ 30-40 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗುತ್ತಿದೆ. ಸಿನಿಮಾದ ಕಲೆಕ್ಷನ್ ಇದರ ಮೂರ್ನಾಲ್ಕು ಪಟ್ಟು ಹೆಚ್ಚಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 133 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 25 ದಿನಗಳು ಕಳೆದಿವೆ. ಈಗ ಚಿತ್ರದ ಒಟಿಟಿ ರಿಲೀಸ್ ಬಗ್ಗೆ ನಿರ್ಮಾಪಕರು ಅಪ್​ಡೇಟ್ ಕೊಟ್ಟಿದ್ದಾರೆ.

ಕಲ್ಯಾಣಿ ಪ್ರಿಯದರ್ಶನ್ ಅವರು ‘ಲೋಕಃ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಸ್ಲೇನ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ದುಲ್ಖರ್ ಸಲ್ಮಾನ್, ಸೌಬಿನ್ ಶಾಹಿರ್ ಸೇರಿದಂತೆ ಅನೇಕರು ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಕೇರಳ ಮಾತ್ರವಲ್ಲದೆ, ಕರ್ನಾಟಕದಲ್ಲೂ ಒಳ್ಳೆಯ ಗಳಿಕೆ ಮಾಡಿದೆ.

‘ಲೋಕಃ’ ಸಿನಿಮಾ ಈವರೆಗೆ 270 ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ. ಈ ಚಿತ್ರ ಮೋಹನ್ ಲಾಲ್ ಅವರ ‘ಲುಸಿಫರ್ 2’ ಚಿತ್ರದ ದಾಖಲೆಯನ್ನು ಮುರಿದಿದೆ. 25ನೇ ದಿನ ಸಿನಿಮಾ 4 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹೀಗಾಗಿ, ಸದ್ಯಕ್ಕಂತೂ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗೋದಿಲ್ಲ ಎಂದು ದುಲ್ಕರ್ ಮಾಹಿತಿ ನೀಡಿದ್ದಾಗಿ ವರದಿ ಆಗಿದೆ.

ಇದನ್ನೂ ಓದಿ
Image
ಬಾಲಿವುಡ್​ನಲ್ಲಿ ಗೆಲ್ಲೋ ಕನಸು ಕಂಡಿದ್ದ ಹರ್ಷಗೆ ಭಾರೀ ನಿರಾಸೆ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್

‘ಲೋಕಃ ಸಿನಿಮಾ ಸದ್ಯಕ್ಕಂತೂ ಒಟಿಟಿಗೆ ಬರಲ್ಲ. ಫೇಕ್ ಸುದ್ದಿಗಳನ್ನು ನಿರ್ಲಕ್ಷಿಸಿ. ಅಧಿಕೃತ ಘೋಷಣೆಗೆ ಕಾಯಿರಿ’ ಎಂದು ದುಲ್ಕರ್ ಅವರು ಮಾಹಿತಿ ನೀಡಿದ್ದಾರೆ. ದಸರಾ ಹಬ್ಬ ಆರಂಭ ಆಗಿದೆ. ಈ ವೇಳೆ ಹಲವು ರಜೆಗಳು ಸಿಗುತ್ತಿವೆ. ಈ ಸಮಯದಲ್ಲಿ ಸಿನಿಮಾ ಮತ್ತಷ್ಟು ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಲೋಕಃ’ ಸಿನಿಮಾ ಭರ್ಜರಿ ಕಲೆಕ್ಷನ್, ಲಾಭವನ್ನು ಹಂಚಲು ಮುಂದಾದ ನಿರ್ಮಾಪಕ

‘ಲೋಕಃ’ ಚಿತ್ರವನ್ನು ದುಲ್ಕರ್ ಸಲ್ಮಾನ್ ನಿರ್ಮಿಸಿದ್ದಾರೆ. ಈ ಸರಣಿಯಲ್ಲಿ ಒಟ್ಟೂ ಐದು ಚಿತ್ರಗಳು ಬರಲಿವೆಯಂತೆ. ಈ ಸಿನಿಮಾದ ಕಥೆ ಬೆಂಗಳೂರಿನಲ್ಲಿ ಸಾಗುತ್ತದೆ. ಈ ಸಿನಿಮಾದಿಂದ ಬೆಂಗಳೂರಿನವರಿಗೆ ಅವಮಾನ ಆಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆ ಬಳಿಕ ದೃಶ್ಯಕ್ಕೆ ಕತ್ತರಿ ಹಾಕಿ, ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ