AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತೃಭೂಮಿ’ ಚಿತ್ರತಂಡಕ್ಕೆ ಲಕ್ಷಾಂತರ ರೂ. ಬೆಲೆಯ ವಾಚ್ ಉಡುಗೊರೆ ನೀಡಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ‘ಮಾತೃಭೂಮಿ’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಯಿತು. ಆ ಬಳಿಕ ಚಿತ್ರತಂಡದವರನ್ನು ಸಲ್ಮಾನ್ ಖಾನ್ ಅವರು ತಮ್ಮ ತೋಟದ ಮನೆಗೆ ಕರೆಸಿಕೊಂಡಿದ್ದಾರೆ. ಚಿತ್ರತಂಡದ ಸದಸ್ಯರಿಗೆ ಲಕ್ಷಾಂತರ ರೂ. ಬೆಲೆಯ ವಾಚ್ ಉಡುಗೊರೆ ನೀಡಿದ್ದಾರೆ.

‘ಮಾತೃಭೂಮಿ’ ಚಿತ್ರತಂಡಕ್ಕೆ ಲಕ್ಷಾಂತರ ರೂ. ಬೆಲೆಯ ವಾಚ್ ಉಡುಗೊರೆ ನೀಡಿದ ಸಲ್ಮಾನ್ ಖಾನ್
Maatrubhumi Team
ಮದನ್​ ಕುಮಾರ್​
|

Updated on: Nov 17, 2026 | 10:29 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ತಮ್ಮ ಉದಾರ ಸ್ವಭಾವಕ್ಕೆ ಮತ್ತೊಮ್ಮೆ ಹೆಸರುವಾಸಿಯಾಗಿದ್ದಾರೆ. ಬಹುನಿರೀಕ್ಷಿತ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ತಾರಾಗಣ ಹಾಗೂ ತಂತ್ರಜ್ಞರಿಗೆ ಸಲ್ಮಾನ್ ಖಾನ್ ಅವರು ಅಚ್ಚರಿಯೊಂದನ್ನು ನೀಡಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ, ಮುಂಬೈನ ಪನ್ವೆಲ್‌ನಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಚಿತ್ರತಂಡಕ್ಕಾಗಿ ವಿಶೇಷ ಗೆಟ್‌ಟುಗೆದರ್ ಆಯೋಜಿಸಿದ್ದ ಸಲ್ಮಾನ್, ಇಡೀ ತಂಡಕ್ಕೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಐಷಾರಾಮಿ ವಾಚ್​ಗಳನ್ನು ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ನವೆಂಬರ್ 12ರಂದು ನಡೆದ ಈ ಸಭೆಯ ಬಗ್ಗೆ ಚಿತ್ರತಂಡಕ್ಕೆ ಆರಂಭದಲ್ಲಿ ಕೇವಲ ಸಿನಿಮಾದ ಪ್ರಚಾರದ ಯೋಜನೆಗಳ ಬಗ್ಗೆ ಚರ್ಚಿಸಲು ಕರೆಯಲಾಗಿದೆ ಎಂದಷ್ಟೇ ತಿಳಿಸಲಾಗಿತ್ತು. ಆದರೆ, ಇದು ಕೇವಲ ಕೆಲಸದ ಸಭೆಯಾಗದೆ ಭರ್ಜರಿ ಸೆಲೆಬ್ರೇಷನ್ ಆಗಿ ಬದಲಾಯಿತು. ಸಿನಿಮಾದ ಕಷ್ಟದ ದಿನಗಳಲ್ಲಿ ಹಾಗೂ ಏಳು-ಬೀಳುಗಳಲ್ಲಿ ತಮ್ಮೊಂದಿಗೆ ಗಟ್ಟಿಯಾಗಿ ನಿಂತ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸಲ್ಮಾನ್ ಖಾನ್ ಈ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ.

ವರದಿಗಳ ಪ್ರಕಾರ, ‘ಕಪೂರ್ ವಾಚ್ ಕಂಪನಿ’ಯಿಂದ ಸುಮಾರು 20ರಿಂದ 25 ಐಷಾರಾಮಿ ವಾಚ್​ಗಳನ್ನು ಖರೀದಿಸಲಾಗಿದ್ದು, ಪ್ರತಿಯೊಂದು ವಾಚ್‌ನ ಬೆಲೆಯೂ 2 ಲಕ್ಷದಿಂದ 6 ಲಕ್ಷ ರೂಪಾಯಿಯವರೆಗೆ ಇದೆ ಎಂದು ತಿಳಿದುಬಂದಿದೆ. ಚಿತ್ರತಂಡದಲ್ಲಿರುವ ಪುರುಷ ಮತ್ತು ಮಹಿಳಾ ಸಿಬ್ಬಂದಿಗಾಗಿ ಸಲ್ಮಾನ್ ಖಾನ್ ಪ್ರತ್ಯೇಕ ಬ್ರ್ಯಾಂಡ್‌ಗಳ ಕೈಗಡಿಯಾರಗಳನ್ನು ಆಯ್ಕೆ ಮಾಡಿದ್ದರು.

ನವೆಂಬರ್ 10ರಂದು ಮುಂಬೈನಲ್ಲಿ ಈ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿತ್ತು. ಇದರ ಬೆನ್ನಲ್ಲೇ ನವೆಂಬರ್ 12ರಂದು ನಡೆದ ಈ ಕೂಟದಲ್ಲಿ ನಿರ್ದೇಶಕ ಅಪೂರ್ವ ಲಖಿಯಾ, ನಟಿ ಚಿತ್ರಾಂಗದಾ ಸಿಂಗ್, ನಟರಾದ ಅಂಕುರ್ ಭಾಟಿಯಾ, ವಿಪಿನ್ ಭಾರದ್ವಾಜ್, ತನ್ಯಾ ದೇಸಾಯಿ ಹಾಗೂ ಸಂಭಾಷಣೆಕಾರ ಚಿಂತನ್ ಶಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಚಿತ್ರತಂಡದ ಕೆಲ ಸದಸ್ಯರು ಈ ಸುಂದರ ಸಂಜೆಯ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್ ಕ್ಲಾಶ್ ನಡುವೆಯೂ ಶ್ರದ್ಧಾ ಕಪೂರ್ ಚಿತ್ರಕ್ಕೆ ಶುಭ ಹಾರೈಸಿದ ಸಲ್ಮಾನ್ ಖಾನ್

ಅಪೂರ್ವ ಲಖಿಯಾ ನಿರ್ದೇಶನದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಒಂದು ಪೂರ್ಣ ಪ್ರಮಾಣದ ಯುದ್ಧದ ಕಥಾಹಂದರವನ್ನು ಹೊಂದಿರುವ ಸಿನಿಮಾವಾಗಿದೆ. ನಿರ್ಮಾಣ ಹಂತದಲ್ಲಿ ಹಲವು ಏರಿಳಿತಗಳನ್ನು ಕಂಡಿರುವ ಈ ಸಿನಿಮಾ ಸಲ್ಮಾನ್ ಖಾನ್ ಅವರ ಈ ವರ್ಷದ ಏಕೈಕ ಚಿತ್ರವಾಗಿದೆ. ಡಿಸೆಂಬರ್ 4ರಂದು ದೇಶಾದ್ಯಂತ ತೆರೆಕಾಣಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು