ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ನ ಖ್ಯಾತ ನಿರ್ದೇಶಕ
ಮಧುರ್ ಭಂಡಾರ್ಕರ್ ಅವರ ಹೆಸರು ಸಿನಿಪ್ರಿಯರಿಗೆ ತಿಳಿದಿರುತ್ತದೆ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಚಿತ್ರಕಥೆ ಬರಹಗಾರನಾಗಿ ಅವರು ಬಾಲಿವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದು ವಿಶೇಷ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ತುಂಬಾನೇ ಫೇಮಸ್. ಚಿತ್ರರಂಗದ ಅನೇಕರು ಇಲ್ಲಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ಬರುತ್ತಾರೆ. ಈಗ, ಬಾಲಿವುಡ್ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಮಧುರ್ ಭಂಡಾರ್ಕರ್ (Madhur Bhandarkar) ಅವರು ಇಂದು (ಜೂನ್ 23) ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ವಿಶೇಷ ಕ್ಷಣದ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
ಮಧುರ್ ಭಂಡಾರ್ಕರ್ ಅವರ ಹೆಸರು ಸಿನಿಪ್ರಿಯರಿಗೆ ತಿಳಿದಿರುತ್ತದೆ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಚಿತ್ರಕಥೆ ಬರಹಗಾರನಾಗಿ ಅವರು ಬಾಲಿವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ‘2008’ರಲ್ಲಿ ತೆರೆಗೆ ಬಂದ ಕಂಗನಾ ಹಾಗೂ ಪ್ರಿಯಾಂಕಾ ಚೋಪ್ರಾ ನಟನೆಯ ‘ಫ್ಯಾಷನ್’ ಸೇರಿ ಅನೇಕ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಈಗ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದು ವಿಶೇಷ.
ಸೋಶಿಯಲ್ ಮೀಡಿಯಾದಲ್ಲಿ ಮಧುರ್ ಅವರು ಎರಡು ಫೋಟೋ ಹಂಚಿಕೊಂಡಿದ್ದಾರೆ. ಒಂದರಲ್ಲಿ ದೇವಾಲಯದ ಫೋಟೋ ಇದ್ದು, ಮತ್ತೊಂದು ಫೋಟೋದಲ್ಲಿ ದೇವಾಲಯದ ಆವರಣದಲ್ಲಿ ತಾವು ನಿಂತಿರುವ ಚಿತ್ರ ಹಂಚಿಕೊಂಡಿದ್ದಾರೆ. ಇದಕ್ಕೆ ಕರ್ನಾಟಕದ ಫ್ಯಾನ್ಸ್ ಖುಷಿ ವ್ಯಕ್ತಪಡಿಸಿದ್ದಾರೆ.
ನಿರ್ದೇಶನದಲ್ಲಿ ಮಧುರ್ ಭಂಡಾರ್ಕರ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಾಕಷ್ಟು ಸಮಯ ತೆಗೆದುಕೊಂಡು ಅವರು ಸಿನಿಮಾ ನಿರ್ದೇಶನ ಮಾಡುತ್ತಾರೆ. ‘ಇಂದೂ ಸರ್ಕಾರ್’ (2017), ‘ಕ್ಯಾಲೆಂಡರ್ ಗರ್ಲ್ಸ್’ (2015) ‘ಹೀರೋಯಿನ್’ (2012), ‘ದಿಲ್ ತೋ ಬಚ್ಚಾ ಹೈ ಜಿ’ (2011), ‘ಜೈಲ್’ (2009) ಸೇರಿದಂತೆ ಹಲವು ಸಿನಿಮಾಗಳನ್ನು ಬಾಲಿವುಡ್ಗೆ ನೀಡಿದ್ದಾರೆ. ಇವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2007ರಲ್ಲಿ ‘ಟ್ರಾಫಿಕ್ ಸಿಗ್ನಲ್’ ಸಿನಿಮಾಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಸಿಕ್ಕಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಕಿಚ್ಚ ಸುದೀಪ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಅವರು ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಸಮೇತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ್ದರು. ಈ ಮೂವರು ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದಿದ್ದರು. ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠೆ ಸೇವೆ ಸಲ್ಲಿಸಿದ್ದರು. ನಂತರ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ಇದನ್ನೂ ಓದಿ: ಮುಂಬೈನಲ್ಲಿ ಸುದೀಪ್ ಜತೆ ರಕ್ಕಮ್ಮ ಜಾಕ್ವೆಲಿನ್ ಫರ್ನಾಂಡಿಸ್ ಮಿರಿಮಿರಿ ಮಿಂಚಿಂಗ್
ರಕ್ಷಿತ್ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್
Published On - 6:11 pm, Thu, 23 June 22