AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malaika Arora: ಮಲೈಕಾ ಅರೋರಾ ಯೋಗಾಸನ ಪ್ರ್ಯಾಕ್ಟಿಸ್ ನೋಡಿ ಫಿದಾ ಆದ ಫ್ಯಾನ್ಸ್

ಮಲೈಕಾ ಅರೋರಾ ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಮಲೈಕಾ ನಿತ್ಯ ಜಿಮ್ ಮಾಡುತ್ತಾರೆ. ಇದರ ಜೊತೆಗೆ ಒಂದಷ್ಟು ಸಮಯ ಅವರು ಯೋಗಾಸನ ಕೂಡ ಮಾಡುತ್ತಾರೆ. ಹೀಗಾಗಿ ಮಲೈಕಾ ಗ್ಲಾಮರ್ ಹಾಳಾಗಿಲ್ಲ.

Malaika Arora: ಮಲೈಕಾ ಅರೋರಾ ಯೋಗಾಸನ ಪ್ರ್ಯಾಕ್ಟಿಸ್ ನೋಡಿ ಫಿದಾ ಆದ ಫ್ಯಾನ್ಸ್
ಮಲೈಕಾ
ರಾಜೇಶ್ ದುಗ್ಗುಮನೆ
|

Updated on: Apr 08, 2024 | 9:26 AM

Share

ನಟಿ ಮಲೈಕಾ ಅರೋರಾ (Malaika Arora) ಅವರಿಗೆ ಈಗ 50 ವರ್ಷ. 1973ರಲ್ಲಿ ಜನಿಸಿದ ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರ ಫಿಟ್ನೆಸ್ ನೋಡಿ ಅನೇಕರು ಮೆಚ್ಚಿಕೊಂಡಿದ್ದೂ ಇದೆ. ಮಲೈಕಾ ಅರೋರಾ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ಆಗಾಗ ವೈರಲ್ ಆಗುತ್ತವೆ. ಅವರು ಹಾಕೋ ಉಡುಗೆ ಗಮನ ಸೆಳೆಯುತ್ತದೆ. ಈಗ ಅವರ ಹೊಸ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಲ್​ಚಲ್ ಸೃಷ್ಟಿ ಮಾಡಿದೆ. ಈ ವಿಡಿಯೋದಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಮಲೈಕಾ ಅರೋರಾ ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಮಲೈಕಾ ನಿತ್ಯ ಜಿಮ್ ಮಾಡುತ್ತಾರೆ. ಇದರ ಜೊತೆಗೆ ಒಂದಷ್ಟು ಸಮಯ ಅವರು ಯೋಗಾಸನ ಕೂಡ ಮಾಡುತ್ತಾರೆ. ಇದೆಲ್ಲದರ ಜೊತೆಗೆ ಅವರು ಕಟ್ಟುನಿಟ್ಟಿನ ಆಹಾರ ಕ್ರಮ ಅನುಸರಿಸುತ್ತಾರೆ. ಹೀಗಾಗಿ ಮಲೈಕಾ ಗ್ಲಾಮರ್ ಹಾಳಾಗಿಲ್ಲ.

ಇದನ್ನೂ ಓದಿ: ಅರ್ಬಾಜ್ ​ಖಾನ್​​ನಿಂದ ಪಡೆದ ಜೀವನಾಂಶದಿಂದ ದುಬಾರಿ ಬಟ್ಟೆಗಳನ್ನು ಖರೀದಿಸಿದ್ದರಾ ಮಲೈಕಾ?

ಮಲೈಕಾ ಅ

ಭಾನುವಾರ (ಏಪ್ರಿಲ್ 8) ಮಲೈಕಾ ಅವರು ಒಂದು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ವಿಶ್ವ ಆರೋಗ್ಯ ದಿನ ಎನ್ನುವ ಕಾರಣಕ್ಕೆ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಯೋಗಾಸನ ಮಾಡುತ್ತಿದ್ದಾರೆ. ವಿವಿಧ ಆಸನಗಳನ್ನು ಅವರು ಪ್ರಯತ್ನಿಸಿದ್ದಾರೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ವರು ಡ್ಯಾನ್ಸರ್ ಆಗಿ, ನಿರ್ಮಾಪಕಿ ಆಗಿ, ನಟಿಯಾಗಿ ಹಾಗೂ ಕಿರುತೆರೆ ರಿಯಾಲಿಟಿ ಶೋಗಳ ಹೋಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ದೊಡ್ಡ ಪರದೆಮೇಲೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ನಿತ್ಯ ಅವರು ಜಿಮ್ ಹಾಗೂ ಯೋಗಾಸನಕ್ಕೆ ತೆರಳೋ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಾ ಇರುತ್ತವೆ. ಅವರು ನಟ ಅರ್ಜುನ್ ಕಪೂರ್ ಜೊತೆ ಪ್ರೀತಿಯಲ್ಲಿ ಇದ್ದಾರೆ. ಇವರು ಆಗಾಗ ಸುತ್ತಾಟ ನಡೆಸೋ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ