AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಮನೆಗೆ ನುಗ್ಗಿದ ಯುವಕ; ಬಾಂದ್ರಾ ಪೊಲೀಸರಿಂದ ಬಂಧನ

ಅಭಿಮಾನಿ ಎಂದು ಹೇಳಿಕೊಂಡು ಬಂದಿರುವ 23 ವರ್ಷದ ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ನುಗ್ಗಿದ್ದಾನೆ. ಬಾಂದ್ರಾದಲ್ಲಿ ಇರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ನುಗ್ಗಿರುವ ಆತನನ್ನು ಪೊಲೀಸರು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ಭದ್ರತೆ ನೀಡಿದ್ದರೂ ಕೂಡ ಇಂಥ ಘಟನೆಗಳು ನಡೆದಿದ್ದು, ಫ್ಯಾನ್ಸ್​ಗೆ ಆತಂಕ ಮೂಡಿದೆ.

ಸಲ್ಮಾನ್ ಖಾನ್ ಮನೆಗೆ ನುಗ್ಗಿದ ಯುವಕ; ಬಾಂದ್ರಾ ಪೊಲೀಸರಿಂದ ಬಂಧನ
Salman Khan
ಮದನ್​ ಕುಮಾರ್​
|

Updated on:May 22, 2025 | 3:17 PM

Share

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಈಗಾಗಲೇ ಜೀವ ಬೆದರಿಕೆ ಇದೆ. ಹಾಗಾಗಿ ಅವರ ಮನೆಗೆ ಭದ್ರತೆ ನೀಡಲಾಗಿದೆ. ಆದರೂ ಕೂಡ ಭದ್ರತಾ ಲೋಪ ಆಗಿದೆ. ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್ (Galaxy Apartment) ಒಳಗೆ ನುಗ್ಗಿದ್ದಾನೆ. ಕೂಡಲೇ ಆತನನ್ನು ಬಂಧಿಸಲಾಗಿದೆ. ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡುವ ಸಲುವಾಗಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದಾಗಿ ಆತ ಹೇಳಿಕೊಂಡಿದ್ದಾನೆ. ಸದ್ಯಕ್ಕೆ ಬಾಂದ್ರಾ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ. ಈ ಘಟನೆ ಬಳಿಕ ಸಲ್ಮಾನ್ ಖಾನ್ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಈ ಘಟನೆ ನಡೆದಿರುವುದು ಮೇ 20ರ ಸಂಜೆ 7.15ರ ಸುಮಾರಿಗೆ. ಸಲ್ಮಾನ್ ಖಾನ್ ಅವರ ಅಪಾರ್ಟ್​ಮೆಂಟ್​ಗೆ ನುಗ್ಗಿರುವ ವ್ಯಕ್ತಿಯನ್ನು 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಛತ್ತಿಸ್​ಗಡ ಮೂಲದವನು. ಆತನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಆತ ಈ ರೀತಿ ನಡೆದುಕೊಂಡಿದ್ದರ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ಈ ಮೊದಲು ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆ ನಡೆದ ನಂತರ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ಭದ್ರತೆ ನೀಡಲಾಯಿತು. ಇಷ್ಟೆಲ್ಲ ಸೆಕ್ಯುರಿಟಿ ನೀಡಲಾಗಿದ್ದರೂ ಕೂಡ ಅಪರಿಚಿತ ವ್ಯಕ್ತಿಯು ಗ್ಯಾಲಕ್ಸಿ ಅಪಾರ್ಟ್​ಮೆಂಟ್ ಒಳಗೆ ನುಗ್ಗಿದ್ದಾನೆ. ಇದರಿಂದ ಭದ್ರತಾ ಲೋಪ ಆಗಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಈ ಸುದ್ದಿ ಕೇಳಿದ ಬಳಿಕ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಆದ್ದರಿಂದ ಸಲ್ಮಾನ್ ಖಾನ್ ಅವರು ಯಾವಾಗಲೂ ಜೀವ ಭಯದಲ್ಲೇ ಇರುವಂತಾಗಿದೆ. ಅದರ ನಡುವೆ ಕೆಲವರು ಮನೆಗೆ ನುಗ್ಗಲು ಯತ್ನಿಸಿರುವುದರಿಂದ ಅನುಮಾನ ಹೆಚ್ಚಾಗಿದೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಬಗ್ಗೆ ಸಲ್ಮಾನ್ ಖಾನ್ ಮೌನ; ಕದನ ವಿರಾಮಕ್ಕೆ ಖುಷಿ: ಜಾಡಿಸಿದ ನೆಟ್ಟಿಗರು

ಇದಲ್ಲದೇ ಮಹಿಳೆಯೊಬ್ಬರು ಕೂಡ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​​ಮೆಮೆಂಟ್​ಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆಕೆಯನ್ನು ಕೂಡ ಬಂಧಿಸಲಾಗಿದೆ. ಈ ಬಗ್ಗೆ ಎಎನ್​ಐ ವರದಿ ಮಾಡಿದೆ. ಮಹಿಳೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Thu, 22 May 25

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!