ಪೊಲೀಸರ ಮಿಂಚಿನ ಕಾರ್ಯಾಚರಣೆ; ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಬೆದರಿಕೆ ಒಡ್ಡಿದ್ದ ವ್ಯಕ್ತಿ ಅರೆಸ್ಟ್

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಕಳೆದ ವರ್ಷ ಮದುವೆ ಆದರು. ಇಬ್ಬರೂ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಈ ದಂಪತಿಗೆ ಕೊಲೆ ಬೆದರಿಕೆ ಬಂದಿದ್ದು ಸಾಕಷ್ಟು ಆತಂಕ ಮೂಡಿಸಿತ್ತು.  

ಪೊಲೀಸರ ಮಿಂಚಿನ ಕಾರ್ಯಾಚರಣೆ; ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಬೆದರಿಕೆ ಒಡ್ಡಿದ್ದ ವ್ಯಕ್ತಿ ಅರೆಸ್ಟ್
ವಿಕ್ಕಿ-ಕತ್ರಿನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 25, 2022 | 3:51 PM

ಕತ್ರಿನಾ ಕೈಫ್ (Katrina Kaif) ಹಾಗೂ ವಿಕ್ಕಿ ಕೌಶಲ್​ಗೆ (Vicky Kaushal) ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್​ಗೆ ಈತ ಕೊಲೆ ಬೆದರಿಕೆ ಹಾಕಿದ್ದ. ಪಂಜಾಬಿ ಗಾಯಕ ಸಿಧೂ ಮೂಸೆ ವಾಲಾ ಅವರ ಹತ್ಯೆ ನಂತರದಲ್ಲಿ ಸಾಕಷ್ಟು ಸೆಲೆಬ್ರಿಟಿಗಳಿಗೆ ಈ ರೀತಿಯ ಬೆದರಿಕೆಗಳು ಬಂದಿದ್ದವು. ಈ ಕಾರಣಕ್ಕೆ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

‘ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ’ ಎಂದು ಎಎನ್​ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಮೊದಲು ಈ ಪ್ರಕರಣದ ಸಂಬಂಧ ಪೊಲೀಸರು ಅನಾಮಧೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡ ಬಗ್ಗೆ ಮುಂಬೈ ಪೊಲೀಸರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.

ಇದನ್ನೂ ಓದಿ
Image
Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ; ಕೇಸ್​ ದಾಖಲಿಸಿ ತನಿಖೆ ಆರಂಭಿಸಿದ ಮುಂಬೈ ಪೊಲೀಸರು
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಕಳೆದ ವರ್ಷ ಮದುವೆ ಆದರು. ಇಬ್ಬರೂ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಈ ದಂಪತಿಗೆ ಕೊಲೆ ಬೆದರಿಕೆ ಬಂದಿದ್ದು ಸಾಕಷ್ಟು ಆತಂಕ ಮೂಡಿಸಿತ್ತು.   ಈ ಸಂಬಂಧ ವಿಕ್ಕಿ ಕೌಶಲ್ ಅವರು ದೂರು ದಾಖಲು ಮಾಡಿದ್ದರು.  ಈಗ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ವ್ಯಕ್ತಿ ಯಾವ ರೀತಿಯ ಉದ್ದೇಶ ಹೊಂದಿದ್ದ ಎಂಬುದು ವಿಚಾರಣೆ ನಂತರವೇ ಬಯಲಿಗೆ ಬರಬೇಕಿದೆ.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಮಾತ್ರವಲ್ಲದೆ ಇನ್ನೂ ಅನೇಕರಿಗೆ ಈ ರೀತಿಯ ಕೊಲೆ ಬೆದರಿಕೆ ಬಂದ ಉದಾಹರಣೆ ಇದೆ. ಜೂನ್ ತಿಂಗಳಲ್ಲಿ ಸ್ವರಾ ಭಾಸ್ಕರ್​ಗೆ ಇದೇ ರೀತಿಯ ಬೆದರಿಕೆ ಬಂದಿತ್ತು. ಮುಂಬೈನ ವರ್ಸೋವಾದಲ್ಲಿರುವ ಮನೆಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ಸ್ವರಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇತ್ತೀಚೆಗೆ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯ್ ಲಾರೆನ್ಸ್ ಗ್ಯಾಂಗ್​ನವರು ಕೊಲೆ ಬೆದರಿಕೆ ಹಾಕಿದ್ದರು.

ನಟಿ ಕಂಗನಾ ರಣಾವತ್ ಅವರು ಸದಾ ವಿವಾದದ ಮೂಲಕ ಗುರುತಿಸಿಕೊಳ್ಳುತ್ತಾರೆ. ಅವರು ಬಲಪಂಥೀಯ ಚಿಂತನೆಗಳಿಂದ ಹೆಚ್ಚು ಪ್ರಭಾವಕ್ಕೆ ಒಳಗಾಗಿದ್ದಾರೆ. 2021ರಲ್ಲಿ ಅವರಿಗೂ ಕೊಲೆ ಬೆದರಿಕೆ ಹಾಕಲಾಗಿತ್ತು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ