‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ
ಶಾರುಖ್​ ಖಾನ್​, ಮನೋಜ್​ ದೇಸಾಯಿ
Follow us
ಮದನ್​ ಕುಮಾರ್​
|

Updated on:Aug 23, 2023 | 7:18 PM

ನಟ ಶಾರುಖ್​ ಖಾನ್​ (Shah Rukh Khan) ಅವರ ಬಹುನಿರೀಕ್ಷಿತ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಪ್ರದರ್ಶಕ ಮನೋಜ್​ ದೇಸಾಯಿ ಭವಿಷ್ಯ ನುಡಿದಿದ್ದಾರೆ. ಮುಂಬೈನಲ್ಲಿ ಮನೋಜ್​ ದೇಸಾಯಿ ಅವರು ಪ್ರಮುಖ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸಿದ್ಧ ‘ಮರಾಠಾ ಮಂದಿರ್​’ ಚಿತ್ರಮಂದಿರವನ್ನು ಅವರು ನಡೆಸುತ್ತಿದ್ದಾರೆ. ಸಾವಿರಾರು ಸಿನಿಮಾಗಳು ಈ ಚಿತ್ರಮಂದಿರದಲ್ಲಿ ಸೂಪರ್​ ಹಿಟ್​ ಆಗಿದೆ. ಬಾಲಿವುಡ್​ನ ಎಲ್ಲ ಸ್ಟಾರ್​ ನಟರು ಮತ್ತು ನಿರ್ಮಾಪಕರು ಮನೋಜ್​ ದೇಸಾಯಿ (Manoj Desai) ಜೊತೆ ನಂಟು ಹೊಂದಿದ್ದಾರೆ. ನಿರ್ಮಾಪಕರೂ ಆಗಿರುವ ಅವರಿಗೆ ಚಿತ್ರರಂಗದ ಬಗ್ಗೆ ತುಂಬ ಸ್ಪಷ್ಟವಾದ ಅಭಿಪ್ರಾಯ ಇದೆ. ಸಾಕಷ್ಟು ವರ್ಷಗಳ ಅನುಭವ ಅವರಿಗೆ ಇದೆ. ಆ ಅನುಭವದ ಆಧಾರದಲ್ಲಿ ಅವರು ಅನೇಕ ಸಿನಿಮಾಗಳ ಭವಿಷ್ಯ ನುಡಿದಿದ್ದುಂಟು. ಈಗ ಮನೋಜ್​ ದೇಸಾಯಿ ಅವರು ಜವಾನ್​’ (Jawan Movie) ಸಿನಿಮಾದ ಬಾಕ್ಸ್​ ಆಫೀಸ್​ ಗಳಿಕೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಸಿನಿಮಾ 500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ.

‘ಜವಾನ್​ ಸಿನಿಮಾ ಖಂಡಿತವಾಗಿಯೂ 500 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಪ್ರೇಕ್ಷಕರಿಗೆ ಇಷ್ಟವಾದರೆ ಮಾತ್ರ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಫ್ಲೇವರ್​ ಇದೆ. ಹಾಗಾಗಿ ಜನರಿಗೆ ಈ ಚಿತ್ರ ಇಷ್ಟ ಆಗಲಿದೆ’ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ. ‘ಬಾಲಿವುಡ್​ ಹಂಗಾಮಾ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನ ವಿದೇಶದಲ್ಲಿ 50 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ಜವಾನ್​’? ಜೋರಾಗಿದೆ ಲೆಕ್ಕಾಚಾರ

ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ನಯನತಾರಾ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದ ಕಲಾವಿದರು ‘ಜವಾನ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಹಾಲಿವುಡ್​ನ ಸಾಹಸ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ. ಚಿತ್ರಮಂದಿರದಲ್ಲಿ ‘ಜವಾನ್​’ ದೊಡ್ಡ ಧಮಾಕಾ ಸೃಷ್ಟಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆ ಆದ ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅದೇ ರೀತಿ ‘ಜವಾನ್​’ ಕೂಡ ಸದ್ದು ಮಾಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ‘ಜವಾನ್​’ ಚಿತ್ರಕ್ಕಾಗಿ ತಮ್ಮದೇ ಹಳೇ ನಿಯಮ ಮುರಿದುಕೊಂಡ್ರಾ ನಯನತಾರಾ?

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ. ಶಾರುಖ್​ ಖಾನ್​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ಧೂಳೆಬ್ಬಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Wed, 23 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ