ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್

ಬಾಲಿವುಡ್​ನ ಸ್ಟಾರ್​ ನಟ ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಆಟೋ ಚಾಲಕನ ಬಗ್ಗೆ ಎಲ್ಲರಿಂದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ವಿಶೇಷ ಏನೆಂದರೆ, ಕೆಲವರು ಪ್ರಶಂಸೆಯ ಜೊತೆ ಬಹುಮಾನದ ರೂಪದಲ್ಲಿ ಹಣವನ್ನು ಕೂಡ ನೀಡುತ್ತಿದ್ದಾರೆ. ಗಾಯಕ ಮಿಕಾ ಸಿಂಗ್ ಅವರು 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್
Mika Singh, Saif Ali Khan, Bhajan Singh Rana
Follow us
ಮದನ್​ ಕುಮಾರ್​
|

Updated on: Jan 22, 2025 | 9:34 PM

ಏನಾದರೂ ಅವಘಡ ಸಂಭವಿಸಿದಾಗ ನಮಗೆ ಯಾಕೆ ಬೇಕಪ್ಪ ಅಂತ ಎಸ್ಕೇಪ್ ಆಗುವವರೇ ಜಾಸ್ತಿ. ಕಷ್ಟದ ಸಂದರ್ಭದಲ್ಲಿ ಸಹಾಯಕ್ಕೆ ಧಾವಿಸುವವರ ಸಂಖ್ಯೆ ವಿರಳ. ಆಪತ್ಕಾಲದಲ್ಲಿ ನೆರವು ನೀಡಲು ಬಂದವರನ್ನು ಮೆರೆಯಬಾರದು. ಸೈಫ್ ಅಲಿ ಖಾನ್ ಅವರಿಗೆ ಜನವರಿ 16ರಂದು ಚೂರಿ ಇರಿತ ಆಗಿತ್ತು. ಮೈಯೆಲ್ಲ ರಕ್ತ ಸುರಿಯುತ್ತಿತ್ತು. ಆ ಮಧ್ಯರಾತ್ರಿಯಲ್ಲಿ ಅವರಿಗೆ ಓರ್ವ ಆಟೋ ಚಾಲಕನಿಂದ ಸಹಾಯ ಸಿಕ್ಕಿತ್ತು. ಭಜನ್ ಸಿಂಗ್ ರಾಣ ಎಂಬ ಆ ಆಟೋ ಚಾಲಕನಿಗೆ ಈಗ ಎಲ್ಲರಿಂದ ಪ್ರಶಂಸೆಯ ಸುರಿಮಳೆ ಆಗುತ್ತಿವೆ.

ಗಾಯಕ ಮಿಕಾ ಸಿಂಗ್ ಅವರು ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಭಾರತದ ಅಚ್ಚುಮೆಚ್ಚಿನ ಸೂಪರ್​ ಸ್ಟಾರ್​ ನಟನ ಜೀವ ಉಳಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಕನಿಷ್ಠ 11 ಲಕ್ಷ ರೂಪಾಯಿ ಬಹುಮಾನವಾದರೂ ಸಿಗಬೇಕು. ಅವರ ಧೈರ್ಯದ ಕೆಲಸ ನಿಜಕ್ಕೂ ಶ್ಲಾಘನೀಯ. ಸಾಧ್ಯವಾದರೆ ಅವರನ್ನು ಸಂಪರ್ಕಿಸುವುದು ಹೇಗೆ ಎಂಬ ಮಾಹಿತಿಯನ್ನು ನನ್ನ ಬಳಿ ಹಂಚಿಕೊಳ್ಳಿ. ಮೆಚ್ಚುಗೆಯ ರೂಪದಲ್ಲಿ ನಾನು ಅವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಲು ಬಯಸುತ್ತೇನೆ’ ಎಂದು ಮಿಕಾ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ: ಜನವರಿ 16ರ ನಸುಕಿನ ವೇಳೆ ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳರು ನುಗ್ಗಿದ್ದರು. ಹಣ ದೋಚಲು ಬಂದ ಅವರನ್ನು ಹಿಡಿಯಲು ಸೈಫ್ ಅಲಿ ಖಾನ್ ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಸೈಫ್​ಗೆ ಚಾಕು ಇರಿಯಲಾಯಿತು. ಈ ಘಟನೆಯಿಂದ ಅವರು ಗಂಭೀರವಾಗಿ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಷ್ಟ ಆಯಿತು. ಮನೆ ಕೆಲಸದ ಮಹಿಳೆಯು ಮಧ್ಯ ರಸ್ತೆಗೆ ಬಂದು ಆಟೋ ಆಟೋ ಎಂದು ಕೂಗಿದರು. ಆಗ ಆಪದ್ಭಾಂದವನಂತೆ ಬಂದಿದ್ದು ಇದೇ ಆಟೋ ಚಾಲಕ ಭಜನ್ ಸಿಂಗ್ ರಾಣ.

ಇದನ್ನೂ ಓದಿ: ಆಸ್ಪತ್ರೆಗೆ ಕರೆದುಕೊಂಡ ಹೋಗಿ ಜೀವ ಉಳಿಸಿದ ಆಟೋ ಚಾಲಕನ ಭೇಟಿ ಮಾಡಿದ ಸೈಫ್

ಚೂರಿ ಇರಿತಕ್ಕೆ ಒಳಗಾದ ಸೈಫ್ ಅಲಿ ಖಾನ್ ಅವರಿಗೆ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಇಂದು (ಜನವರಿ 22) ಅವರು ಡಿಸ್ಚಾರ್ಜ್ ಆದರು. ಈ ವೇಳೆ ಆಟೋ ಚಾಲಕ ಭಜನ್ ಸಿಂಗ್ ರಾಣ ಅವರನ್ನು ಸೈಫ್ ಹಾಗು ಅವರ ಕುಟುಂಬದವರು ಭೇಟಿಯಾದರು. ಈ ಸಂದರ್ಭದ ಫೋಟೋಗಳು ವೈರಲ್ ಆಗುತ್ತಿವೆ. ಸೈಫ್ ಅವರು ಈಗ ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಚೂರಿ ಇರಿತದ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ