Mission Majnu: ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಿಷನ್​ ಮಜ್ನು’ ಸಿನಿಮಾ; ರಶ್ಮಿಕಾ ನಟನೆಗೂ ಮೆಚ್ಚುಗೆ

Mission Majnu Twitter Review: ‘ಮಿಷನ್​ ಮಜ್ನು’ ಚಿತ್ರದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಗಣರಾಜ್ಯೋತ್ಸವಕ್ಕೆ ಕೆಲವೇ ದಿನ ಬಾಕಿ ಇರುವಾಗ ಈ ಸಿನಿಮಾ ರಿಲೀಸ್​ ಆಗಿದ್ದು ಪ್ಲಸ್​ ಪಾಯಿಂಟ್​ ಆಗಿದೆ.

Mission Majnu: ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಿಷನ್​ ಮಜ್ನು’ ಸಿನಿಮಾ; ರಶ್ಮಿಕಾ ನಟನೆಗೂ ಮೆಚ್ಚುಗೆ
ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ದಾರ್ಥ್ ಮಲ್ಹೋತ್ರ, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Jan 20, 2023 | 4:06 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಸಿನಿಮಾ (Mission Majnu Movie) ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಸಿನಿಮಾ ಒಟಿಟಿ ಹಾದಿ ಹಿಡಿಯಿತು. ಈ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರ (Sidharth Malhotra) ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಇಂದು (ಜ.20) ಬಹುನಿರೀಕ್ಷಿತ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ ಆಗಿದೆ. ಸ್ಪೈ-ಥ್ರಿಲ್ಲರ್​ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶಾಂತನು ಭಾಗ್ಚಿ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ನೋಡಿದ ಪ್ರೇಕ್ಷಕರು ಈ ಸಿನಿಮಾವನ್ನು ‘ರಾಜಿ’ ಚಿತ್ರಕ್ಕೆ ಹೋಲಿಸಿದ್ದರು. ಆದರೆ ಈಗ ಪೂರ್ತಿ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರ ಭಾವನೆ ಬದಲಾಗಿದೆ. ತಮ್ಮ ವಿಮರ್ಶೆ (Mission Majnu Review) ಏನು ಎಂಬುದನ್ನು ಟ್ವಿಟರ್​ ಮೂಲಕ ಜನರು ತಿಳಿಸುತ್ತಿದ್ದಾರೆ.

ನೈಜ ಘಟನೆಗಳನ್ನು ಆಧರಿಸಿ ‘ಮಿಷನ್​ ಮಜ್ನು’ ಚಿತ್ರ ಮೂಡಿಬಂದಿದೆ. ರೆಟ್ರೋ ಶೈಲಿಯ ಮೇಕಿಂಗ್​ ಈ ಸಿನಿಮಾದಲ್ಲಿದೆ. ಸಿದ್ದಾರ್ಥ್​ ಮಲ್ಹೋತ್ರ ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅನೇಕರು ಇದನ್ನು ಮಾಸ್ಟರ್​ ಪೀಸ್​ ಎಂದು ಕರೆದಿದ್ದಾರೆ. ಅಷ್ಟರಮಟ್ಟಿಗೆ ಜನರಿಗೆ ಈ ಸಿನಿಮಾ ಇಷ್ಟ ಆಗಿದೆ. ಕೊನೆಯ ದೃಶ್ಯದವರೆಗೂ ಕೌತುಕಭರಿತವಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ಕಳೆದ ವರ್ಷ ಬಾಲಿವುಡ್​ ಸಿನಿಮಾಗಳಿಗೆ ಥಿಯೇಟರ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಲಿಲ್ಲ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ‘ಥ್ಯಾಂಕ್​ ಗಾಡ್​’ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಗುಡ್​ ಬೈ’ ಚಿತ್ರ ಸೋತವು. ಅದರ ಪರಿಣಾಮವಾಗಿ ‘ಮಿಷನ್​ ಮಜ್ನು’ ಚಿತ್ರತಂಡದವರು ಥಿಯೇಟರ್​ ಸಹವಾಸ ಬೇಡ ಅಂತ ನೇರವಾಗಿ ಒಟಿಟಿಯಲ್ಲಿ ಈ ಸಿನಿಮಾವನ್ನು ರಿಲೀಸ್​ ಮಾಡಿದ್ದಾರೆ. ಒಂದು ವೇಳೆ ಚಿತ್ರಮಂದಿರದಲ್ಲಿ ರಿಲೀಸ್​ ಆಗಿದ್ದರೆ ಸುಲಭವಾಗಿ 100 ಕೋಟಿ ರೂಪಾಯಿ ಕಲೆಕ್ಷನ್​ ಆಗುತ್ತಿತ್ತು ಎಂದು ಕೂಡ ಪ್ರೇಕ್ಷಕರು ಹೇಳುತ್ತಿದ್ದಾರೆ.

‘ಮಿಷನ್​ ಮಜ್ನು’ ಚಿತ್ರದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಗಣರಾಜ್ಯೋತ್ಸವಕ್ಕೆ ಕೆಲವೇ ದಿನ ಬಾಕಿ ಇರುವಾಗ ಈ ಸಿನಿಮಾ ರಿಲೀಸ್​ ಆಗಿದ್ದು ಪ್ಲಸ್​ ಪಾಯಿಂಟ್​ ಆಗಿದೆ. ‘ಈ ಚಿತ್ರದಿಂದ 2023ರಲ್ಲಿ ಬಾಲಿವುಡ್​ಗೆ ಉತ್ತಮ ಆರಂಭ ಆಗಿದೆ’ ಎಂದು ಕೆಲವರು ಟ್ವೀಟ್​ ಮಾಡಿದ್ದಾರೆ. ಎಲ್ಲ ಕಡೆಗಳಿಂದ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದನ್ನೂ ಓದಿ: Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂಧ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅವರ ನಟನೆಯನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ಬಾಲಿವುಡ್​ನಲ್ಲಿ ರಶ್ಮಿಕಾ ಅವರಿಗೆ ಇನ್ನಷ್ಟು ಒಳ್ಳೆಯ ಆಫರ್​ಗಳು ಸಿಗಲಿವೆ. ಈಗ ಅವರು ರಣಬೀರ್​ ಕಪೂರ್​ ನಟನೆಯ ‘ಅನಿಮಲ್’ ಚಿತ್ರಕ್ಕೆ ನಾಯಕಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ