ಬಾಲಿವುಡ್ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಶನಿವಾರ (ಫೆಬ್ರವರಿ 10) ಮುಂಜಾನೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತು. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
ಮಿಥುನ್ ಚಕ್ರವರ್ತಿ ಆರೋಗ್ಯದ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಕುಟುಂಬದವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆಸ್ಪತ್ರೆ ಕಡೆಯಿಂದಲೂ ಯಾವುದೇ ಸುತ್ತೋಲೆ ಬಂದಿಲ್ಲ. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.
ಮಿಥುನ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರು 1976ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಚಿತ್ರದಲ್ಲೇ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದರು. ಹೀರೋ ಆಗಿ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನೂರಾರು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ಆಯ್ಕೆಯಲ್ಲೂ ಅವರು ಚ್ಯೂಸಿ ಆಗಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ಮಿಥುನ್ ಚಕ್ರವರ್ತಿ ತೆರಳುತ್ತಿದ್ದ ಟೆಂಪೋ ನಿಲ್ಲಿಸಿ ಕಾರಿನಲ್ಲಿ ಡ್ರಾಪ್ ಕೊಟ್ಟಿದ್ದ ಅಮಿತಾಭ್ ಬಚ್ಚನ್
ಜನವರಿ ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಮಿಥುನ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಭಾರತ ಸರ್ಕಾರ ನೀಡುವ ಮೂರನೇ ಅತ್ಯುತ್ತನತ ಪ್ರಶಸ್ತಿ ಇದು. ಆಗ ಎಲ್ಲರೂ ಅವರಿಗೆ ಶುಭಾಶಯ ಹೇಳಿದ್ದರು. ಈಗ ಅವರ ಆರೋಗ್ಯದ ಬಗ್ಗೆ ಆತಂಕ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:22 am, Sat, 10 February 24