AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯ ‘ದೃಶ್ಯಂ 3’ ಸಿನಿಮಾ ನೋಡಿ ಫಿದಾ ಆದ ನಟ ಮೋಹನ್‌ಲಾಲ್

ಮೋಹನ್‌ಲಾಲ್ ನಟಿಸಿದ ಮಲಯಾಳಂನ ‘ದೃಶ್ಯಂ 3’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ ಹಿಂದಿಯ ‘ದೃಶ್ಯಂ 3’ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರೆ. ಪ್ರೇಕ್ಷಕರು ಮಾತ್ರವಲ್ಲದೇ ಸ್ಟಾರ್ ನಟ ಮೋಹನ್‌ಲಾಲ್ ಕೂಡ ಫಿದಾ ಆಗಿದ್ದಾರೆ. ವಿಡಿಯೋ ಹಂಚಿಕೊಳ್ಳುವ ಮೂಲಕ ಅವರು ಅಭಿನಂದನೆ ತಿಳಿಸಿದ್ದಾರೆ.

ಹಿಂದಿಯ ‘ದೃಶ್ಯಂ 3’ ಸಿನಿಮಾ ನೋಡಿ ಫಿದಾ ಆದ ನಟ ಮೋಹನ್‌ಲಾಲ್
Mohanlal, Ajay DevgnImage Credit source: Star Studio18
ಮದನ್​ ಕುಮಾರ್​
|

Updated on: Oct 12, 2026 | 10:03 PM

Share

ಮೂಲ ಸಿನಿಮಾದಲ್ಲಿ ಪಾತ್ರಕ್ಕೆ ಜೀವ ತುಂಬಿದ ನಟನೇ ಹಿಂದಿ ರಿಮೇಕ್ ಅಥವಾ ಮುಂದಿನ ಭಾಗವನ್ನು ನೋಡಿ ಮೆಚ್ಚುಗೆ ಸೂಚಿಸಿದರೆ ಆ ಚಿತ್ರತಂಡಕ್ಕಾಗುವ ಸಂತೋಷವೇ ಬೇರೆ. ಮಲಯಾಳಂ ಮೂಲ ಚಿತ್ರವಾದ ‘ದೃಶ್ಯಂ’ ಸಿನಿಮಾದಲ್ಲಿ ಜಾರ್ಜ್‌ಕುಟ್ಟಿ ಪಾತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ಹಿರಿಯ ನಟ ಮೋಹನ್‌ಲಾಲ್ ಅವರು ಈಗ ಹಿಂದಿಯ ‘ದೃಶ್ಯಂ: ದಿ ಕನ್‌ಕ್ಲೂಷನ್’ ಸಿನಿಮಾ ನೋಡಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಜಯ್ ದೇವಗನ್ ನಟನೆಯ ಈ ಸಿನಿಮಾದಲ್ಲಿ ಕಥೆಯನ್ನು ಮುಗಿಸಿರುವ ರೀತಿ ತಮಗೆ ತುಂಬಾ ಇಷ್ಟವಾಗಿದೆ ಎಂದು ಮೋಹನ್‌ಲಾಲ್ ಅವರು ತಿಳಿಸಿದ್ದಾರೆ.

ವಿಶೇಷ ವಿಡಿಯೋ ಒಂದನ್ನು ಹಂಚಿಕೊಂಡಿರುವ ಮೋಹನ್‌ಲಾಲ್, ‘ನಾನು ದೃಶ್ಯಂ 3 ಸಿನಿಮಾ ನೋಡಿದೆ. ಪ್ರೇಕ್ಷಕರು ಅಪಾರವಾಗಿ ಪ್ರೀತಿಸಿದ ಈ ಪಯಣಕ್ಕೆ ಅತ್ಯಂತ ಸೂಕ್ತ ಹಾಗೂ ಅದ್ಭುತ ಅಂತ್ಯ ನೀಡಿದ ರೀತಿ ನನಗೆ ನಿಜಕ್ಕೂ ತುಂಬಾ ಇಷ್ಟವಾಯಿತು. ನಿರ್ದೇಶಕ ಅಭಿಷೇಕ್ ಪಾಠಕ್, ನಿರ್ಮಾಪಕ ಕುಮಾರ್ ಮಂಗತ್ ಪಾಠಕ್, ನಟ ಅಜಯ್ ದೇವಗನ್ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದು ಶುಭ ಹಾರೈಸಿದ್ದಾರೆ.

ಮಲಯಾಳಂನ ‘ದೃಶ್ಯಂ’ ಸರಣಿಗೆ ಭಾರತದಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವಿದೆ. ಆದರೆ, ಮಲಯಾಳಂನ ಮೂರನೇ ಭಾಗದ ಕಥೆಯನ್ನೇ ಅನುಸರಿಸುವ ಬದಲು ಹಿಂದಿ ಚಿತ್ರತಂಡ ತನ್ನದೇ ಆದ ಹೊಸ ರೀತಿಯಲ್ಲಿ ಕಥೆಯನ್ನು ಮುಕ್ತಾಯಗೊಳಿಸಿದೆ. ಈ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ಮಲಯಾಳಂ ಆವೃತ್ತಿಗಿಂತ ಹಿಂದಿಯ ಚಿತ್ರವೇ ಹೆಚ್ಚು ರೋಚಕವಾಗಿದೆ ಎಂದು ಅನೇಕ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

‘ದೃಶ್ಯಂ: ದಿ ಕನ್‌ಕ್ಲೂಷನ್’ ಚಿತ್ರವು ಪ್ರೇಕ್ಷಕರ ಪ್ರಶಂಸೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಜಾಗತಿಕವಾಗಿ ಸರಿ ಸುಮಾರು 480 ಕೋಟಿ ರೂಪಾಯಿ ಗಳಿಸಿದ್ದು, ಭಾರತದಲ್ಲೇ 370.80 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದೆ. ಸಿನಿಮಾದಲ್ಲಿ ಅಜಯ್ ದೇವಗನ್ ಅವರು ತಮ್ಮ ಚಾಣಾಕ್ಷತನದಿಂದ ಪೊಲೀಸರ ಕಣ್ಣಿಗೆ ಮಣ್ಣೆರಚುವ ವಿಜಯ್ ಸಾಲ್ಗಾಂವ್ಕರ್ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಹೇಗಿದೆ ‘ದೃಶ್ಯಂ 3’: ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ

ಅಜಯ್ ದೇವಗನ್ ಅವರೊಂದಿಗೆ ಟಬು, ಶ್ರಿಯಾ ಸರನ್, ರಜತ್ ಕಪೂರ್, ಪ್ರಕಾಶ್ ರಾಜ್, ಇಶಿತಾ ದತ್ತಾ, ಕಮಲೇಶ್ ಸಾವಂತ್ ಹಾಗೂ ಮೃಣಾಲ್ ಜಾಧವ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಭಾಗದಲ್ಲಿ ಎಸ್‌ಪಿ ರಾಜ್‌ವೀರ್ ಸಿಂಗ್ ತೋಮರ್ ಪಾತ್ರದಲ್ಲಿ ಜೈದೀಪ್ ಅಹ್ಲಾವತ್ ಹೊಸ ಸೇರ್ಪಡೆಯಾಗಿದ್ದು, ವಿಜಯ್ ಸಾಲ್ಗಾಂವ್ಕರ್ ಮತ್ತು ರಾಜ್‌ವೀರ್ ನಡುವಿನ ಜಿದ್ದಾಜಿದ್ದಿನ ದೃಶ್ಯಗಳು ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು