AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ

18ರ ಪ್ರಾಯದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಮದುವೆ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಫರ್ಮಾನ್ ಖಾನ್ ಜೊತೆ ವಿವಾಹ ಮಾಡಿಕೊಂಡಿರುವ ಮೊನಾಲಿಸಾ ಅವರು ಮತಾಂತರ ಆಗುತ್ತಾರಾ ಎಂಬ ಪ್ರಶ್ನೆ ಹಲವರಿಗೆ ಕಾಡಿದೆ. ಅದಕ್ಕೆ ಸುದ್ದಿಗೋಷ್ಠಿಯಲ್ಲಿ ನವ ದಂಪತಿ ಉತ್ತರ ನೀಡಿದ್ದಾರೆ.

ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ
Farman Khan, Monalisa Bhosle
ಮದನ್​ ಕುಮಾರ್​
|

Updated on: Mar 12, 2026 | 9:31 PM

Share

ಪ್ರಯಾಗ್‌ರಾಜ್ ಕುಂಭಮೇಳದ ಸಂದರ್ಭದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದ 18 ವರ್ಷದ ಮೊನಾಲಿಸಾ ಭೋಸ್ಲೆ (Monalisa Bhosle) ತಮ್ಮ ಪ್ರಿಯಕರ ಫರ್ಮಾನ್ ಖಾನ್ ಅವರೊಂದಿಗೆ ಕೇರಳದಲ್ಲಿ ವಿವಾಹವಾಗಿದ್ದಾರೆ. ಕೇರಳದ ಪೂವಾರ್ ಸಮೀಪದ ಅರುಮನೂರಿನ ನಯನಾರ್ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಈ ಜೋಡಿ ಮದುವೆಯಾಗಿದೆ. ಈ ಮದುವೆ ಬಳಿಕ ಮೊನಾಲಿಸಾ ಬೋಸ್ಲೆ ಅವರು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆಗುತ್ತಾರಾ ಎಂಬ ಪ್ರಶ್ನೆಗೆ ಕೆಲವರಿಗೆ ಮೂಡಿದೆ. ಅದಕ್ಕೆ ಈ ಜೋಡಿ ಉತ್ತರ ನೀಡಿದೆ.

ಮದುವೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೊನಾಲಿಸಾ, ‘ನಾವು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ. ನಾನು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿಲ್ಲ. ಹಾಗಾಗಿ ಇದು ಲವ್ ಜಿಹಾದ್ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಹಣೆಯ ಮೇಲೆ ಸಿಂಧೂರ ಧರಿಸಿದ್ದ ಅವರು, ‘ಫರ್ಮಾನ್ ಈ ಮದುವೆಗೆ ಮೊದಲು ಒಪ್ಪಿರಲಿಲ್ಲ. ನಾನೇ ಒತ್ತಾಯ ಮಾಡಿ ಮದುವೆ ಆಗುವಂತೆ ಮಾಡಿದೆ’ ಎಂದು ಹೇಳಿಕೆ ನೀಡಿದ್ದಾರೆ.

ಈ ವೇಳೆ ಫರ್ಮಾನ್ ಖಾನ್ ಮಾತನಾಡಿ, ‘ನಾವಿಬ್ಬರೂ ಕಲಾವಿದರು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಪ್ರೀತಿಯಲ್ಲಿ ಧರ್ಮ ಬದಲಾಯಿಸುವ ಅಗತ್ಯವಿಲ್ಲ’ ಎಂದಿದ್ದಾರೆ. ಆ ಮೂಲಕ ತಮ್ಮ ಪತ್ನಿ ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಈ ಜೋಡಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಗುತ್ತಿದೆ.

ಮೊನಾಲಿಸಾ ಅವರು ಕೇರಳದಲ್ಲಿ ಚಿತ್ರೀಕರಣಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ರಕ್ಷಣೆ ಕೋರಿ ತಿರುವನಂತಪುರಂ ಪೊಲೀಸರನ್ನು ಸಂಪರ್ಕಿಸಿದ್ದರು. ತಂದೆ ತನ್ನನ್ನು ಬಲವಂತವಾಗಿ ಊರಿಗೆ ಕರೆದೊಯ್ದು, ಸೋದರ ಸಂಬಂಧಿಯೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದರು. ‘ನನಗೆ ನನ್ನ ಸೋದರ ಸಂಬಂಧಿಯನ್ನು ಮದುವೆಯಾಗಲು ಇಷ್ಟವಿಲ್ಲ, ಅದಕ್ಕಾಗಿಯೇ ನಾನು ಪ್ರೀತಿಸಿದವನ ಜೊತೆ ಮದುವೆಯಾಗಿದ್ದೇನೆ’ ಎಂದು ಅವರು ಪೊಲೀಸರ ಬಳಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಮೊನಾಲಿಸಾ ಮದುವೆ ಆದ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಮೊನಾಲಿಸಾ ವಯಸ್ಕಳಾ ಅಥವಾ ಅಪ್ರಾಪ್ತಳಾ ಎಂಬ ಗೊಂದಲವಿತ್ತು. ಆದರೆ ಸುದ್ದಿಗೋಷ್ಠಿಯಲ್ಲಿ ತಮ್ಮ ಜನ್ಮ ದಾಖಲೆಗಳನ್ನು ಪ್ರದರ್ಶಿಸಿದ ಅವರು, ತಮಗೆ ಈಗಷ್ಟೇ 18 ವರ್ಷ ತುಂಬಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ‘ಅವರು ವಯಸ್ಕರಾಗಿರುವುದರಿಂದ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ