AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳ ‘ಮೊನಾಲಿಸಾ’ಳ ಮೊದಲ ಸಿನಿಮಾ ಬಂದ್, ನಿರ್ದೇಶಕನಿಂದ ಮೋಸ?

Monalisa Bhosle: ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಲಿಸಾ ಬಾಲಿವುಡ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಆ ಸಿನಿಮಾ ನಿಂತು ಹೋಗಿದೆ ಎನ್ನಲಾಗುತ್ತಿದ್ದೆ. ಮೊನಲಿಸಾಗೆ ಸಿನಿಮಾ ಆಫರ್ ನೀಡಿದ ನಿರ್ದೇಶಕ, ಆಕೆಯನ್ನು ಟ್ರ್ಯಾಪ್ ಮಾಡಿದ್ದಾನೆ ಎಂಬ ಆತಂಕಕಾರಿ ಹೇಳಿಕೆಯನ್ನು ಸಿನಿಮಾದ ನಿರ್ಮಾಪಕ ನೀಡಿದ್ದಾರೆ.

ಕುಂಭಮೇಳ ‘ಮೊನಾಲಿಸಾ’ಳ ಮೊದಲ ಸಿನಿಮಾ ಬಂದ್, ನಿರ್ದೇಶಕನಿಂದ ಮೋಸ?
Monalisa Bhosle
Follow us
ಮಂಜುನಾಥ ಸಿ.
|

Updated on:Feb 20, 2025 | 3:08 PM

ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಯುವತಿಯ ಚಿತ್ರ ಕಳೆದ ತಿಂಗಳು ವೈರಲ್ ಆಗಿತ್ತು. ಯುವತಿಯ ನಗು, ಚೂಪಾದ ಕಣ್ಣಿನ ನೋಟಕ್ಕೆ ಜನ ಮಾರುಹೋದರು. ಫೋಟೊ ವೈರಲ್ ಆಗುತ್ತಿದ್ದಂತೆ ಆ ಯುವತಿಯ ಅದೃಷ್ಟವೇ ಬದಲಾಗಿ ಹೋಯ್ತು. ಯುವತಿ ಮೇಕೋವರ್ ಮಾಡಿ ಮಾಡೆಲಿಂಗ್​ ಮಾಡಿಸಲಾಯ್ತು, ಕೆಲ ಜಾಹೀರಾತುಗಳಲ್ಲಿ ಯುವತಿ ನಟಿಸಿದರು. ಕೆಲ ಪ್ರೊಮೋಷನಲ್ ಇವೆಂಟ್​ಗಳಲ್ಲಿ ಅದ್ಧೂರಿಯಾಗಿ ಯುವತಿ ಕಾಣಿಸಿಕೊಂಡರು. ಗ್ಲಾಮರಸ್ ಆದ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಹಂಚಿಕೊಳ್ಳಲಾಯ್ತು. ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ಯುವತಿ ನಾಯಕಿಯಾಗಿ ನಟಿಸಲಿದ್ದಾಳೆ ಎಂಬ ಸುದ್ದಿ ಹೊರಬಿದ್ದಿತ್ತು. ಆದರೆ ಆಕೆಯ ಮೊದಲ ಸಿನಿಮಾ ಚಿತ್ರೀಕರಣ ಪ್ರಾರಂಭ ಆಗುವುದಕ್ಕೆ ಮುಂಚೆಯೇ ನಿಂತು ಹೋಗಿದೆ.

‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದ ನಿರ್ಮಾಪಕ ಜಿತೇಂಧರ್ ನಾರಾಯಣ್ ಸಿಂಗ್ ಅಲಿಯಾಸ್ ವಸೀಮ್ ರಿಜ್ವಿ ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದ ನಿರ್ದೇಶಕ ಸನೋಜ್ ಮಿಶ್ರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಸನೋಜ್ ಮಿಶ್ರಾ ಒಬ್ಬ ಸುಳ್ಳುಗಾರ, ಮೋಸಗಾರ, ಮಹಾನ್ ಕುಡುಕ, ಆತ ಸುಳ್ಳು ಹೇಳಿ ಹಲವರಿಗೆ ಮೋಸ ಮಾಡಿದ್ದಾನೆ. ಯುವತಿಯರಿಗೆ ಸಿನಿಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಈಗ ಕುಂಭಮೇಳ ಮೊನಲಿಸಾಗೂ ಮೋಸ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಸನೋಜ್ ಮಿಶ್ರಾ ನಿರ್ದೇಶನ ಮಾಡಿರುವ ಯಾವೊಂದು ಸಿನಿಮಾ ಸಹ ಈ ವರೆಗೆ ಬಿಡುಗಡೆ ಆಗಿಲ್ಲ. ಆತ ಮೊನಲಿಸಾಳಿಗೆ ತರಬೇತಿ ನೀಡುವ ನೆಪದಲ್ಲಿ ಆಕೆಯನ್ನು ಬೇರೆ ಬೇರೆ ಇವೆಂಟ್​ಗಳಿಗೆ ಕಳಿಸಿ ತಾನು ಹಣ ಮಾಡಿಕೊಳ್ಳುತ್ತಿದ್ದಾನೆ. ಮೊನಲಿಸಾಳ ಕುಟುಂಬದವರು ಆ ವ್ಯಕ್ತಿಯ ಬಗ್ಗೆ ಜಾಗೃತೆಯಿಂದ ಇರಬೇಕು ಎಂದು ಎಚ್ಚರಿಕೆ ಹೇಳಿದ್ದಾರೆ ನಿರ್ಮಾಪಕ ಜಿತೇಂಧರ್ ನಾರಾಯಣ್ ಸಿಂಗ್. ಸನೋಜ್ ಮಿಶ್ರಾ, ಮೊನಲಿಸಾಗೆ ನಟನೆಯ ತರಬೇತಿ ನೀಡುತ್ತಿರುವ ಚಿತ್ರಗಳು, ವಿಡಿಯೋಗಳು ಇತ್ತೀಚೆಗೆ ವೈರಲ್ ಆಗಿದ್ದವು. ಈಗ ನೋಡಿದರೆ ಸಿನಿಮಾದ ನಿರ್ಮಾಪಕರೇ ನಿರ್ದೇಶಕರ ವಿರುದ್ಧ ಹೀಗೋಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:Fact Check: ಗ್ಲಾಮರಸ್ ಲುಕ್​ನಲ್ಲಿ ಮಹಾಕುಂಭದ ವೈರಲ್ ಹುಡುಗಿ ಮೊನಾಲಿಸಾ?

ಇನ್ನು ಮೊನಲಿಸಾ ಸಹ ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಾನು ಮಧ್ಯ ಪ್ರದೇಶದಲ್ಲಿ ನಟನಾ ತರಬೇತಿಯಲ್ಲಿ ನಿರತವಾಗಿದ್ದು, ಅದರ ಜೊತೆಗೆ ಕಲಿಕೆಯಲ್ಲೂ ತೊಡಗಿಕೊಂಡಿದ್ದೇನೆ ಎಂದಿದ್ದಾರೆ. ಅಲ್ಲದೆ ಸನೋಜ್ ಮಿಶ್ರಾ ತಮ್ಮನ್ನು ಮಗಳ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದು, ಯಾರೂ ಸಹ ನನ್ನ ಸುರಕ್ಷತೆ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

ಮೊನಲಿಸಾ ಭೋಸ್ಲೆ ಬಡ ಕುಟುಂಬದ ಯುವತಿ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದಾಗ ಯಾರೋ ವ್ಯಕ್ತಿ ಆಕೆಯ ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆ ಚಿತ್ರ ಸಖತ್ ವೈರಲ್ ಆಯ್ತು. ಇದರಿಂದ ಬಂದ ಜನಪ್ರಿಯತೆಯನ್ನು ಮೊನಾಸಿಲಾ ಭೋಸ್ಲೆ ಚೆನ್ನಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕೇರಳದ ಆಭರಣ ಮಳಿಗೆಯೊಂದರ ಉದ್ಘಾಟನೆಗೆ ತೆರಳಿದ್ದ ಈ ಚೆಲುವೆ ಅದಕ್ಕಾಗಿ ತೆಗೆದುಕೊಂಡಿದ್ದು ಬರೋಬ್ಬರಿ 14 ಲಕ್ಷ ರೂಪಾಯಿಗಳು. ಇದೀಗ ಸಿನಿಮಾದಲ್ಲಿಯೂ ನಟಿಸಲು ತಯಾರಿ ತೆಗೆದುಕೊಳ್ಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:26 pm, Thu, 20 February 25

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು