200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್ಗೆ ಜಾಕ್ವೆಲಿನ್ ಅರ್ಜಿ
ತಮ್ಮ ವಿರುದ್ಧದ ಎಫ್ಐಆರ್ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ‘ಸುಕೇಶ್ ಚಂದ್ರಶೇಖರ್ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್ ಫರ್ನಾಂಡಿಸ್ ಸಹಾಯ ಮಾಡಿಲ್ಲ. ಹಾಗಾಗಿ ನಟಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೊತೆ ಸ್ನೇಹ ಬೆಳೆಸಿದ್ದರಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಸುಕೇಶ್ ಮಾಡಿದ 200 ಕೋಟಿ ರೂ. ವಂಚನೆ ಕೇಸ್ನಲ್ಲಿ ಜಾಕ್ವೆಲಿನ್ (Jacqueline Fernandez) ಕೂಡ ಭಾಗಿ ಆಗಿದ್ದರು ಎಂಬ ಅನುಮಾನ ಇದೆ. ಇದರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ಎಫ್ಐಆರ್ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೆಸರನ್ನು ಸೇರಿಸಿದೆ. ಆದರೆ ತಮ್ಮ ವಿರುದ್ಧದ ಎಫ್ಐಆರ್ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ದೆಹಲಿ ಹೈಕೋರ್ಟ್ಗೆ (Delhi HC) ಅರ್ಜಿ ಸಲ್ಲಿಸಿದ್ದಾರೆ.
‘ಸುಕೇಶ್ ಚಂದ್ರಶೇಖರ್ ಮಾಡಿದ ಕುತಂತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂತ್ರಸ್ಥೆ ಆಗಿದ್ದಾರೆ. ವಂಚನೆಯಿಂದ ಹಣ ಗಳಿಸುವಲ್ಲಿ ಸುಕೇಶ್ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್ ಫರ್ನಾಂಡಿಸ್ ಸಹಾಯ ಮಾಡಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 3 ಮತ್ತು 4ರಲ್ಲಿ ಅವರಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಶ್ರೀಲಂಕನ್ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್ ಸೀರೆ ಫೋಟೋಶೂಟ್ ಕಂಡು ಫ್ಯಾನ್ಸ್ ಫಿದಾ
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆದ ಬಳಿಕ ಒಂದಷ್ಟು ಫೋಟೋಗಳು ಬಹಿರಂಗ ಆಗಿದ್ದವು. ಸುಕೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರು ಬಹಳ ಆಪ್ತವಾಗಿ ಕ್ಲಿಕ್ಕಿಸಿಕೊಂಡ ಫೋಟೋಗಳು ಲೀಕ್ ಆದವು. ಆ ಬಳಿಕ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಂಕಷ್ಟ ಹೆಚ್ಚಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.
ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾತು ಕೂಡ ಕೇಳಿಬಂದಿದೆ. ಸದ್ಯ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಅಲ್ಲಿಂದಲೇ ಜಾಕ್ವೆಲಿನ್ ಫರ್ನಾಂಡಿಸ್ಗೆ ಪತ್ರ ಬರೆಯುತ್ತಿದ್ದಾನೆ. ಈಗಾಗಲೇ ಅನೇಕ ಬಾರಿ ಆತ ಬರೆದ ಲವ್ ಲೆಟರ್ಗಳು ವೈರಲ್ ಆಗಿವೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.