AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: 2023ರಲ್ಲಿ ಅತಿ ಹೆಚ್ಚು ಸರ್ಚ್​ ಆದ ಸೆಲೆಬ್ರಿಟಿ: ನಟಿ ಕಿಯಾರಾ ಅಡ್ವಾಣಿಗೆ ಮೊದಲ ಸ್ಥಾನ

Most Googled Person of 2023: ಕಿಯಾರಾ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವ ಮಟ್ಟದಲ್ಲೂ ಅವರ ಹೆಸರು ಟಾಪ್​ನಲ್ಲಿದೆ. ಈ ವರ್ಷ ಹೆಚ್ಚು ಸರ್ಚ್​ಗೆ ಒಳಗಾದ ನಟಿಯರ ಸಾಲಿನಲ್ಲಿ ಕಿಯಾರಾ ಮೊದಲಿದ್ದಾರೆ. ಈ ಮೂಲಕ ಹಲವು ಹಾಲಿವುಡ್ ನಾಯಕಿಯರನ್ನು ಅವರು ಹಿಂದಿಕ್ಕಿದ್ದಾರೆ. 

Kiara Advani: 2023ರಲ್ಲಿ ಅತಿ ಹೆಚ್ಚು ಸರ್ಚ್​ ಆದ ಸೆಲೆಬ್ರಿಟಿ: ನಟಿ ಕಿಯಾರಾ ಅಡ್ವಾಣಿಗೆ ಮೊದಲ ಸ್ಥಾನ
ಕಿಯಾರಾ
ರಾಜೇಶ್ ದುಗ್ಗುಮನೆ
|

Updated on: Dec 12, 2023 | 11:01 AM

Share

ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರಿಗೆ ಈ ವರ್ಷ ಸಖತ್ ವಿಶೇಷ ಎನಿಸಿಕೊಂಡಿದೆ. ಹಲವು ವರ್ಷಗಳ ಗೆಳೆಯ ಸಿದ್ದಾರ್ಥ ಮಲ್ಹೋತ್ರ ಜೊತೆ ಅವರು ಮದುವೆ ಆದರು. ಅದೇ ರೀತಿ, ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಸರ್ಚ್​ಗೆ ಒಳಪಟ್ಟ ಭಾರತೀಯ ಸೆಲೆಬ್ರಿಟಿಗಳಲ್ಲಿ ಕಿಯಾರಾ ಹೆಸರು ಮೊದಲ ಸ್ಥಾನದಲ್ಲಿದೆ. ಗೂಗಲ್ ಈ ಬಗ್ಗೆ ಪಟ್ಟಿ ಬಿಡುಗಡೆ ಮಾಡಿದೆ.

2023ನೇ ವರ್ಷ ಕೊನೆ ಆಗುವ ಹಂತಕ್ಕೆ ಬಂದಿದೆ. ಈ ವೇಳೆ ಒಂದು ವರ್ಷದಲ್ಲಿ ಏನೆಲ್ಲ ಆಯಿತು ಎನ್ನುವ ಬಗ್ಗೆ ಮೆಲುಕು ಹಾಕಲಾಗುತ್ತದೆ. ಈ ವರ್ಷ ಭಾರತೀಯರು ಗೂಗಲ್​ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಸೆಲೆಬ್ರಿಟಿ ಎಂದರೆ ಅದು ಕಿಯಾರಾ. ಈ ವರ್ಷ ಅವರ ಮದುವೆ ನೆರವೇರಿದೆ. ಈ ಕಾರಣದಿಂದಲೂ ಅವರ ಹೆಸರು ಹೆಚ್ಚು ಸರ್ಚ್​​ಗೆ ಒಳಗಾಗಿರಬಹುದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿಯಾರಾ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವ ಮಟ್ಟದಲ್ಲೂ ಅವರ ಹೆಸರು ಟಾಪ್​ನಲ್ಲಿದೆ. ಈ ವರ್ಷ ಹೆಚ್ಚು ಸರ್ಚ್​ಗೆ ಒಳಗಾದ ನಟಿಯರ ಸಾಲಿನಲ್ಲಿ ಕಿಯಾರಾ ಮೊದಲಿದ್ದಾರೆ. ಈ ಮೂಲಕ ಹಲವು ಹಾಲಿವುಡ್ ನಾಯಕಿಯರನ್ನು ಅವರು ಹಿಂದಿಕ್ಕಿದ್ದಾರೆ.  ಪ್ರಿಯಾಂಕಾ ಚೋಪ್ರಾ, ದೀಪಿಕಾ ಪಡುಕೋಣೆ, ಆಲಿಯಾ ಭಟ್ ಅವರು ಈ ಸಾಲಿನಲ್ಲಿ ಇಲ್ಲ ಅನ್ನೋದು ಬೇಸರದ ವಿಚಾರ.

ಇದನ್ನೂ ಓದಿ: ‘ಡಾನ್ 3’ ನಿರ್ದೇಶಕ ಫರ್ಹಾನ್ ಅಖ್ತರ್​ ನಿವಾಸಕ್ಕೆ ಕಿಯಾರಾ ಅಡ್ವಾಣಿ ಭೇಟಿ; ಅಭಿಮಾನಿಗಳಲ್ಲಿ ಮೂಡಿತು ಕುತೂಹಲ

ರಾಜಸ್ಥಾನದಲ್ಲಿ ಕಿಯಾರಾ ಅಡ್ವಾಣಿ ಅವರ ಮದುವೆ ಗ್ರ್ಯಾಂಡ್ ಆಗಿ ನಡೆಯಿತು. ಬಾಲಿವುಡ್ ನಟ ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು ಕಿಯಾರಾ ವರಿಸಿದರು. ಅವರ ನಟನೆಯ ‘ಸತ್ಯ ಪ್ರೇಮ್ ಕಿ ಕಥಾ’ ಸಿನಿಮಾ ರಿಲೀಸ್ ಆಯಿತು. ‘ಕಾಫಿ ವಿತ್ ಕರಣ್’ ಶೋನಲ್ಲೂ ಅವರು ಭಾಗಿ ಆಗಿದ್ದರು. ‘ವಾರ್ 2’ ಸಿನಿಮಾ ಸೇರಿ ಹಲವು ಚಿತ್ರಗಳು ಅವರ ಕೈಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು