AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೀವನದ ಬಗ್ಗೆ ಮತ್ತೊಂದು ಸಿನಿಮಾ, ಮೋದಿ ಆಗಲಿದ್ದಾರೆ ಮಲಯಾಳಂ ನಟ

Movie on Narendra Modi: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಇಂದು (ಸೆಪ್ಟೆಂಬರ್ 17) ಹಲವಾರು ಮಂದಿ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳು ಮೋದಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಜೀವನ ಆಧರಿಸಿದ ಸಿನಿಮಾ ಒಂದನ್ನು ಘೋಷಣೆ ಮಾಡಲಾಗಿದೆ.

ಮೋದಿ ಜೀವನದ ಬಗ್ಗೆ ಮತ್ತೊಂದು ಸಿನಿಮಾ, ಮೋದಿ ಆಗಲಿದ್ದಾರೆ ಮಲಯಾಳಂ ನಟ
Maa Vande
ಮಂಜುನಾಥ ಸಿ.
|

Updated on: Sep 17, 2025 | 12:05 PM

Share

ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಜನ್ಮದಿನ ಇಂದು (ಸೆಪ್ಟೆಂಬರ್ 17). ಮೋದಿ ಅವರ ಹುಟ್ಟುಹಬ್ಬದಂದು ಅವರ ಬಯೋಪಿಕ್ ಘೋಷಣೆ ಮಾಡಲಾಗಿದೆ. ಈಗಾಗಲೇ ನರೇಂದ್ರ ಮೋದಿ ಜೀವನ ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಸಿನಿಮಾ 2019 ರಲ್ಲಿ ಬಿಡುಗಡೆ ಆಗಿತ್ತು. ನರೇಂದ್ರ ಮೋದಿ ಪಾತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸಿದ್ದರು. ಇದೀಗ ಮತ್ತೊಮ್ಮೆ ನರೇಂದ್ರ ಮೋದಿ ಜೀವನ ಬೆಳ್ಳಿ ಪರದೆಗೆ ಬರಲಿದೆ. ಈ ಬಾರಿ ಮಲಯಾಳಂ ನಟರೊಬ್ಬರು ನರೇಂದ್ರ ಮೋದಿ ಪಾತ್ರದಲ್ಲಿ ನಟಿಸಲಿದ್ದಾರೆ.

ಈ ಹಿಂದೆ ‘ಲೀಗಲಿ ವೀರ್’ ಹೆಸರಿನ ತೆಲುಗು ಸಿನಿಮಾ ನಿರ್ಮಾಣ ಮಾಡಿದ್ದ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆ ಇದೀಗ ಮೋದಿ ಕುರಿತ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದೆ. ಸಿನಿಮಾ ಬಗ್ಗೆ ಇಂದು (ಸೆಪ್ಟೆಂಬರ್ 17) ಘೋಷಣೆ ಮಾಡಲಾಗಿದ್ದು, ಸಿನಿಮಾಕ್ಕೆ ‘ಮಾ ವಂದೇ’ ಎಂದು ಹೆಸರಿಡಲಾಗಿದೆ. ವೀರ್ ರೆಡ್ಡಿ ಎಂ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ.

‘ಮಾ ವಂದೇ’ ಸಿನಿಮಾವನ್ನು ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶನ ಮಾಡಲಿದ್ದಾರೆ. ನರೇಂದ್ರ ಮೋದಿ ಅವರ ಬಾಲ್ಯದಿಂದ ಹಿಡಿದು ಪ್ರಧಾನಿ ಆಗುವವರೆಗಿನ ಪಯಣವನ್ನು ಸಿನಿಮಾನಲ್ಲಿ ತೋರಿಸಲಾಗುವುದು ಎಂದಿದೆ ನಿರ್ಮಾಣ ಸಂಸ್ಥೆ. ಮೋದಿ ಅವರ ವೈಯಕ್ತಿಕ ಜೀವನ ಹಾಗೂ ರಾಜಕೀಯ ಜೀವನದ ಸತ್ಯ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ಕನ್ನಡಿಗ ರವಿ ಬಸ್ರೂರು ಅವರು ಸಂಗೀತ ನೀಡಲಿರುವುದು ವಿಶೇಷ.

ಇದನ್ನೂ ಓದಿ:ನರೇಂದ್ರ ಮೋದಿಗೆ ಪ್ರೀತಿಯಿಂದ ಬರ್ತ್​ಡೇ ವಿಶ್ ಮಾಡಿದ ಅನುಪಮ್ ಖೇರ್

ನಿರ್ಮಾಪಕ ವೀರ್ ರೆಡ್ಡಿ ಮಾತನಾಡಿ, ‘ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು, ನಮ್ಮ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಅವರ ಜೀವನ ಚರಿತ್ರೆ ‘ಮಾ ವಂದೇ’ ಘೋಷಿಸುತ್ತಿದ್ದೇವೆ. ಈ ಚಿತ್ರವು ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಒಳಗೊಂಡಿರಲಿದೆ. ‘ಮಾ ವಂದೇ’ ಚಿತ್ರವನ್ನು ಎಲ್ಲಾ ಪ್ಯಾನ್-ಇಂಡಿಯಾ ಭಾಷೆಗಳಲ್ಲಿ ಹಾಗೂ ಇಂಗ್ಲಿಷ್‌ನಲ್ಲಿಯೂ ನಿರ್ಮಿಸಲಾಗುವುದು. ಮೋದಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸುವ ಆಲೋಚನೆ ಇದೆ. ರಾಷ್ಟ್ರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕನ ಗಮನಾರ್ಹ ಪ್ರಯಾಣವನ್ನು ನಾವು ಪ್ರೇಕ್ಷಕರಿಗೆ ತರುತ್ತಿದ್ದೇವೆ” ಎಂದಿದ್ದಾರೆ.

ನರೇಂದ್ರ ಮೋದಿ ಜೀವನದ ಬಗ್ಗೆ ನಿರ್ಮಾಣ ಆಗುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮಲಯಾಳಂ ಇತ್ತೀಚೆಗಿನ ಹಿಟ್ ಸಿನಿಮಾಗಳಾದ ‘ಮಾರ್ಕೊ’, ‘ಮಲ್ಲಿಕಾಪುರಂ’ ಇನ್ನೂ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಉನ್ನಿ ಮುಕುಂದನ್ ಅವರು ಸಿನಿಮಾನಲ್ಲಿ ಮೋದಿಯ ಪಾತ್ರದಲ್ಲಿ ನಟಿಸಲಿದ್ದಾರೆ. ಪ್ರಸ್ತುತ ಅವರು ‘ಮಂಡಿಯುಮ್ ಪರಂಜುಮ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ