ಸಂಜಯ್ ಲೀಲಾ ಬನ್ಸಾಲಿ ನಿರ್ಮಾಣದ ಸಿನಿಮಾದಲ್ಲಿ ಮೃಣಾಲ್ ಠಾಕೂರ್ಗೆ ಅವಕಾಶ
ಖ್ಯಾತ ನಟಿ ಮೃಣಾಲ್ ಠಾಕೂರ್ ಅವರು ಅನೇಕ ಬಹುನಿರೀಕ್ಷಿತ ಪ್ರಾಜೆಕ್ಟ್ಗಳಲ್ಲಿ ನಟಿಸುತ್ತಿದ್ದಾರೆ. ‘ಫ್ಯಾಮಿಲಿ ಸ್ಟಾರ್’, ‘ಪೂಜಾ ಮೇರಿ ಜಾನ್’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿ ಇವೆ. ಈಗ ಅವರು ಸಂಜಯ್ ಲೀಲಾ ಬನ್ಸಾಲಿ ನಿರ್ಮಾಣದ ಹೊಸ ಸಿನಿಮಾದಲ್ಲಿ ನಟಿಸುವ ಚಾನ್ಸ್ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಅವರಿಗೆ ‘ಗಲ್ಲಿ ಬಾಯ್’ ಖ್ಯಾತಿಯ ಸಿದ್ಧಾಂತ್ ಚತುರ್ವೇದಿ ಜೋಡಿಯಾಗಲಿದ್ದಾರೆ.
ನಟಿ ಮೃಣಾಲ್ ಠಾಕೂರ್ (Mrunal Thakur) ಅವರು ದೇಶಾದ್ಯಂತ ಖ್ಯಾತಿ ಹೊಂದಿದ್ದಾರೆ. ಬಾಲಿವುಡ್ (Bollywood) ಮತ್ತು ಸೌತ್ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲಿ ಅವರಿಗೆ ಬೇಡಿಕೆ ಇದೆ. ‘ಸೂಪರ್ 30’, ‘ಸೀತಾ ರಾಮಂ’, ‘ಹಾಯ್ ನಾನ್ನ’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ. ದಿನದಿಂದ ದಿನಕ್ಕೆ ಅವರ ಡಿಮ್ಯಾಂಡ್ ಹೆಚ್ಚುತ್ತಿದೆ. ದೊಡ್ಡ ದೊಡ್ಡ ನಿರ್ಮ ಣ ಸಂಸ್ಥೆಗಳು ಮೃಣಾಲ್ ಠಾಕೂರ್ ಜೊತೆ ಕೆಲಸ ಮಾಡಲು ಆಸಕ್ತಿ ತೋರಿಸುತ್ತಿವೆ. ಈಗ ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ಮೃಣಾಲ್ ಠಾಕೂರ್ಗೆ ನಟಿಸುವ ಅವಕಾಶ ಸಿಕ್ಕಿದೆ ಎಂಬ ಸುದ್ದಿ ಕೇಳಿಬಂದಿದೆ.
ಸಂಜಯ್ ಲೀಲಾ ಬನ್ಸಾಲಿ ಅವರು ನಿರ್ದೇಶನದ ಜೊತೆ ನಿರ್ಮಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ‘ಬನ್ಸಾಲಿ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ಹಲವು ಹಿಟ್ ಸಿನಿಮಾಗಳು ನಿರ್ಮಾಣ ಆಗಿವೆ. ಈಗ ‘ಹೀರಾಮಂಡಿ’ ವೆಬ್ ಸರಣಿ ನಿರ್ಮಾಣವಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಅದರ ಜೊತೆಗೆ ‘ಲವ್ ಆ್ಯಂಡ್ ವಾರ್’ ಸಿನಿಮಾ ಕೂಡ ಮೂಡಿಬರುತ್ತಿದೆ. ಇಂಥ ಪ್ರಾಜೆಕ್ಟ್ಗಳ ಸಾಲಿಗೆ ಮತ್ತೊಂದು ರೊಮ್ಯಾಂಟಿಕ್ ಸಿನಿಮಾ ಸೇರ್ಪಡೆ ಆಗಲಿದ್ದು, ಅದರಲ್ಲಿ ಮೃಣಾಲ್ ಠಾಕೂರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ಕೊಡ್ತಾರಾ ಮೃಣಾಲ್ ಠಾಕೂರ್?
ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಮೃಣಾಲ್ ಠಾಕೂರ್ ಅವರು ಸಾಬೀತು ಮಾಡಿದ್ದಾರೆ. ಹಾಗಾಗಿ ಅವರನ್ನು ಸಂಜಯ್ ಲೀಲಾ ಬನ್ಸಾಲಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಸಿನಿಮಾಗೆ ‘ಮಾಮ್’ ಖ್ಯಾತಿಯ ರವಿ ಉದ್ಯಾವರ್ ನಿರ್ದೇಶನ ಮಾಡಲಿದ್ದಾರೆ. ಈಗಿನ ಕಾಲದ ಲವ್ ಸ್ಟೋರಿ ಈ ಸಿನಿಮಾದಲ್ಲಿ ಇರಲಿದೆ. ಅಲ್ಲದೇ ಇದು ಮ್ಯೂಸಿಕಲ್ ಸಿನಿಮಾ ಆಗಿರಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಟಾಲಿವುಡ್ನಲ್ಲಿ ಮತ್ತೊಂದು ಗೆಲುವಿಗಾಗಿ ಕಾದಿರುವ ನಟಿ ಮೃಣಾಲ್ ಠಾಕೂರ್
ಈ ಚಿತ್ರದಲ್ಲಿ ಮೃಣಾಲ್ ಠಾಕೂರ್ ಅವರ ಜೊತೆ ಸಿದ್ಧಾಂತ್ ಚತುರ್ವೇದಿ ನಟಿಸಲಿದ್ದಾರೆ. ಇವರಿಬ್ಬರದ್ದು ಫ್ರೆಶ್ ಕಾಂಬಿನೇಷನ್. ಆ ಕಾರಣದಿಂದಲೂ ಜನರಿಗೆ ನಿರೀಕ್ಷೆ ಮೂಡಲಿದೆ. ಸಿದ್ಧಾಂತ್ ಚತುರ್ವೇದಿ ಅವರು ಈಗಾಗಲೇ ಬಾಲಿವುಡ್ನಲ್ಲಿ ಫೇಮಸ್ ಆಗಿದ್ದಾರೆ. ‘ಗಲ್ಲಿ ಬಾಯ್’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ತುಂಬ ಫೇಮಸ್ ಆಗಿತ್ತು. ಈಗ ಅವರು ಸಂಜಯ್ ಲೀಲಾ ಬನ್ಸಾಲಿಯ ಪ್ರೊಡಕ್ಷನ್ ಹೌಸ್ನ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ