ಹೀಗೆ ಮಾಡಿದ್ರೆ ಸರಿ ಇರಲ್ಲ; ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ ಅವರ ನಕಲಿ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅನುಮತಿಯಿಲ್ಲದೆ ಎಐ ಮೂಲಕ ಸೃಷ್ಟಿಸಿದ ಈ ಫೋಟೊಗಳನ್ನು ತಕ್ಷಣವೇ ತೆಗೆಯದಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಟಿ ಎಚ್ಚರಿಸಿದ್ದಾರೆ. ಸೈಬರ್ ಕಿಡಿಗೇಡಿಗಳ ವಿರುದ್ಧ ಸೂಕ್ತ ತನಿಖೆಯಾಗಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಹೀಗೆ ಮಾಡಿದ್ರೆ ಸರಿ ಇರಲ್ಲ; ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮೃಣಾಲ್ ಠಾಕೂರ್
ಮೃಣಾಲ್ ಠಾಕೂರ್

Updated on: Aug 04, 2026 | 10:58 AM

ಮುಖ್ಯಾಂಶಗಳು

  • ವೈರಲ್ ಫೋಟೊಗೆ ಮೃಣಾಲ್ ಗರಂ
  • ಸೈಬರ್ ಕಿಡಿಗೇಡಿಗಳಿಗೆ ಕಾನೂನು ಮುನ್ನೆಚ್ಚರಿಕೆ
  • ನಟಿಯರಿಗೆ ಮುಗಿಯದ ಎಐ ತಂತ್ರಜ್ಞಾನದ ಹಾವಳಿ

ಖಾಸಗಿ ಫೋಟೋ ವೈರಲ್ ಆದಾಗ ಅಥವಾ ಕೆಲವರು ಎಡಿಟ್ ಮಾಡಿದ ಫೋಟೋ ಹರಿದಾಡಿದಾಗ ನಟಿಯರು ಸುಮ್ಮನೆ ಇರೋದಿಲ್ಲ. ಈಗ ನಟಿ ಮೃಣಾಲ್ ಠಾಕೂರ್ (Mrunal Thakur) ಕೂಡ ಇದನ್ನೇ ಮಾಡಿದ್ದಾರೆ. ಅವರ ಎಐ ಫೋಟೋಗಳು ಸೋಶಿಶಯಲ್ ಮೀಡಿಯಾದಲ್ಲಿ ವೈರಲ್ ಆದ ತಕ್ಷಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸೈಬರ್ ಅಪರಾಧಿಗಳ ವಿರುದ್ಧ ಕಾನೂನು ಸಮರ ಸಾರಲು ಅವರು ಸಜ್ಜಾಗಿದ್ದಾರೆ. ತಿರುಚಲಾದ ಚಿತ್ರಗಳನ್ನು ತಕ್ಷಣವೇ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದ್ದಾರೆ. ಅಭಿಮಾನಿಗಳು ಕೂಡ ನಟಿಯ ಬೆಂಬಲಕ್ಕೆ ನಿಂತಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯೊಂದರಲ್ಲಿ ಮೃಣಾಲ್ ಅವರದ್ದು ಎನ್ನಲಾದ ಆಕ್ಷೇಪಾರ್ಹ ಚಿತ್ರಗಳನ್ನು ಹಂಚಿಕೊಳ್ಳಲಾಗಿತ್ತು. ಇದನ್ನು ಕಂಡು ನಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಫೋಟೊ ಹಂಚಿಕೊಳ್ಳುವುದು ಸಂಪೂರ್ಣವಾಗಿ ಕಾನೂನುಬಾಹಿರ. ತಕ್ಷಣವೇ ಈ ಪೋಸ್ಟ್ ಡಿಲೀಟ್ ಮಾಡಬೇಕು. ಇಲ್ಲದಿದ್ದರೆ ಸೈಬರ್ ಪೊಲೀಸ್ ದೂರು ನೀಡುವುದಾಗಿ ಮೃಣಾಲ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಚಿತ್ರರಂಗದ ನಟಿಯರಿಗೆ ಎಐ ತಂತ್ರಜ್ಞಾನದ ದುರ್ಬಳಕೆ ದೊಡ್ಡ ತಲೆನೋವಾಗಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ನಟಿಯರು ಇದೇ ರೀತಿಯ ಡಿಜಿಟಲ್ ಕಿರುಕುಳಕ್ಕೆ ಒಳಗಾಗಿದ್ದರು. ಎಚ್ಚರಿಕೆ ನೀಡಿದ ಮೇಲೆಯೂ ಈ ಚಿತ್ರಗಳು ಜಾಲತಾಣದಲ್ಲಿ ಇವೆ. ಹೀಗಾಗಿ ಮುಂದಿನ ಕಾನೂನು ಕ್ರಮಗಳ ಮೇಲೆ ಎಲ್ಲರ ಕಣ್ಣಿದೆ.

ಇದನ್ನೂ ಓದಿ: ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಹುಟ್ಟಿದೆ ವದಂತಿ

ಇತ್ತೀಚೆಗೆ ‘ಹೇ ಜವಾನಿ ತೋ ಇಷ್ಕ್ ಹೊನಾ ಹೇ’ ಮತ್ತು ‘ಡಕಾಯತ್’ ಸಿನಿಮಾಗಳ ಮೂಲಕ ಮೃಣಾಲ್ ಗಮನ ಸೆಳೆದಿದ್ದಾರೆ. ಸದ್ಯ ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಅಲ್ಲು ಅರ್ಜುನ್ ಅವರ ಮುಂದಿನ ‘ರಾಕಾ’ ಸಿನಿಮಾದಲ್ಲೂ ಅವರು ಅಭಿನಯಿಸಲಿದ್ದಾರೆ ಎನ್ನಲಾಗಿದೆ. ವೃತ್ತಿಜೀವನದಲ್ಲಿ ಬ್ಯುಸಿಯಾಗಿರುವ ನಟಿಗೆ ಈಗ ಈ ನಕಲಿ ಫೋಟೊಗಳ ಕಿರಿಕಿರಿ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us