AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್‌ಗೆ ಗುಡ್‌ಬೈ; 3 ವರ್ಷಗಳ ಬಳಿಕ ಮತ್ತೆ ಸಿನಿಮಾ ನಿರ್ಮಾಣಕ್ಕೆ ಇಳಿಯುತ್ತಾರಾ ಎಂಎಸ್ ಧೋನಿ

ಐಪಿಎಲ್‌ನಿಂದ ನಿವೃತ್ತರಾಗಿರುವ ಎಂ.ಎಸ್. ಧೋನಿ ಅವರ ಪ್ರೊಡಕ್ಷನ್ ಹೌಸ್ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಮೊದಲ ಸಿನಿಮಾ ಬಿಡುಗಡೆಯಾಗಿ ಮೂರು ವರ್ಷಗಳು ಕಳೆದಿದ್ದರೂ, ಸಂಸ್ಥೆ ಮುಚ್ಚಿಲ್ಲ. ಬದಲಿಗೆ ಪ್ರಾದೇಶಿಕ ಕಂಟೆಂಟ್‌ಗಳು ಹಾಗೂ ಜಾಹೀರಾತುಗಳಲ್ಲಿ ಸಕ್ರಿಯವಾಗಿದ್ದು, ಧೋನಿ ಕಂಬ್ಯಾಕ್ ಮಾಡುವ ಕುರಿತು ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ಐಪಿಎಲ್‌ಗೆ ಗುಡ್‌ಬೈ; 3 ವರ್ಷಗಳ ಬಳಿಕ ಮತ್ತೆ ಸಿನಿಮಾ ನಿರ್ಮಾಣಕ್ಕೆ ಇಳಿಯುತ್ತಾರಾ ಎಂಎಸ್ ಧೋನಿ
ಧೋನಿ
ರಾಜೇಶ್ ದುಗ್ಗುಮನೆ
|

Updated on: Nov 18, 2026 | 7:33 AM

Share

ಮುಖ್ಯಾಂಶಗಳು

  • ಐಪಿಎಲ್ ನಿವೃತ್ತಿಯ ಬಳಿಕ ಧೋನಿ ಮುಂದಿನ ನಡೆ ಏನು?
  • ಮೂರು ವರ್ಷಗಳ ಹಿಂದೆ ಬಂದ 'ಎಲ್‌ಜಿಎಂ' ಸಿನಿಮಾ
  • ಸಿನಿಮಾಗಳಿಂದ ದೂರವಿದ್ದರೂ ತೆರೆಮರೆಯಲ್ಲಿ ಸಕ್ರಿಯ

ಭಾರತೀಯ ಕ್ರಿಕೆಟ್ ಲೋಕದ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಈಗ ಅವರ ಮುಂದಿನ ನಡೆಗಳ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಕ್ರಿಕೆಟ್ ಮೈದಾನದಿಂದ ದೂರ ಸರಿದಿರುವ ಧೋನಿ, ಈಗ ತಮ್ಮದೇ ಆದ ‘ಧೋನಿ ಎಂಟರ್‌ಟೈನ್‌ಮೆಂಟ್’ ಪ್ರೊಡಕ್ಷನ್ ಹೌಸ್ ಕಡೆಗೆ ಹೆಚ್ಚಿನ ಗಮನ ಹರಿಸಲಿದ್ದಾರೆಯೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ.

ಧೋನಿ ಎಂಟರ್‌ಟೈನ್‌ಮೆಂಟ್ ಸಂಸ್ಥೆಯನ್ನು ಸದ್ಯ ಧೋನಿ ಪತ್ನಿ ಸಾಕ್ಷಿ ಧೋನಿ ಅವರು ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ಸಾಕ್ಷಿ ಅವರ ತಾಯಿ ಶೀಲಾ ಸಿಂಗ್ ಅವರು ಸಿಇಒ ಆಗಿ ಮುನ್ನಡೆಸುತ್ತಿದ್ದಾರೆ. ಈ ಸಂಸ್ಥೆಯು ಈ ಹಿಂದೆ ರೋರ್ ಆಫ್ ದಿ ಲಯನ್’ ನಂತಹ ಉತ್ತಮ ಡಾಕ್ಯುಮೆಂಟರಿ ಹಾಗೂ ಡಿಜಿಟಲ್ ಕಂಟೆಂಟ್‌ಗಳನ್ನು ನಿರ್ಮಿಸಿ ಗಮನ ಸೆಳೆದಿತ್ತು.

2023ರಲ್ಲಿ ರಮೇಶ್ ತಮಿಳ್ಮಣಿ ನಿರ್ದೇಶನದ, ಹರೀಶ್ ಕಲ್ಯಾಣ್ ಮತ್ತು ಇವಾನಾ ಅಭಿನಯದ ‘ಲೆಟ್ಸ್ ಗೆಟ್ ಮ್ಯಾರೀಡ್’ ಎಂಬ ತಮಿಳು ಕೌಟುಂಬಿಕ ಸಿನಿಮಾದ ಮೂಲಕ ಧೋನಿ ಸಂಸ್ಥೆ ಮುಖ್ಯವಾಹಿನಿಯ ಚಲನಚಿತ್ರ ನಿರ್ಮಾಣಕ್ಕೆ ಪದಾರ್ಪಣೆ ಮಾಡಿತ್ತು. ಆದರೆ ಈ ಮೊದಲ ಸಿನಿಮಾ ಬಿಡುಗಡೆಯಾಗಿ ಈಗ ಬರೋಬ್ಬರಿ ಮೂರು ವರ್ಷಗಳು ಕಳೆದಿವೆ. ಅಂದಿನಿಂದ ಸಂಸ್ಥೆಯಿಂದ ಮತ್ತೊಂದು ದೊಡ್ಡ ಸಿನಿಮಾ ಘೋಷಣೆಯಾಗದ ಕಾರಣ, ಪ್ರೊಡಕ್ಷನ್ ಹೌಸ್ ಸ್ಥಗಿತಗೊಂಡಿದೆಯೇ ಎಂಬ ವದಂತಿಗಳೂ ಹಬ್ಬಿದ್ದವು.

ಇದನ್ನೂ ಓದಿ: ಸಿಎಸ್​​ಕೆ ನಾಯಕನಿಂದ ಮೆಂಟರ್​​ ವರೆಗೆ: ಮಹೇಂದ್ರ ಸಿಂಗ್​​ ಧೋನಿ ನಡೆದುಬಂದ ಐಪಿಎಲ್​​ ಹಾದಿ 

ಆದರೆ ವಾಸ್ತವದಲ್ಲಿ ಧೋನಿ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಸ್ಥಗಿತಗೊಂಡಿಲ್ಲ, ಬದಲಾಗಿ ತೆರೆಮರೆಯಲ್ಲಿ ಸಕ್ರಿಯವಾಗಿದೆ. ಸಂಸ್ಥೆಯು ಸದ್ಯ ಪ್ರಾದೇಶಿಕ ಕಂಟೆಂಟ್‌ಗಳ ಅಭಿವೃದ್ಧಿ, ಜಾಹೀರಾತು ಚಿತ್ರಗಳು ಹಾಗೂ ‘ಗರುಡ ಏರೋಸ್ಪೇಸ್’ ಸೇರಿದಂತೆ ವಿವಿಧ ಬ್ರಾಂಡ್‌ಗಳ ಪ್ರಚಾರ ಅಭಿಯಾನಗಳಲ್ಲಿ ತೊಡಗಿಸಿಕೊಂಡಿದೆ. ಈಗ ಧೋನಿ ಕೂಡ ಐಪಿಎಲ್‌ನಿಂದ ನಿವೃತ್ತರಾಗಿರುವುದರಿಂದ, ಪೂರ್ಣ ಪ್ರಮಾಣದಲ್ಲಿ ಸಿನಿಮಾ ನಿರ್ಮಾಣಕ್ಕೆ ಕಂಬ್ಯಾಕ್ ಮಾಡಿ ಹೊಸ ಚಿತ್ರಗಳನ್ನು ಘೋಷಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್