AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ​, ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಉರ್ಫಿ ಜಾವೇದ್​ಗೆ ನವೀನ್ ಗಿರಿ ಎಂಬಾತ ವಾಟ್ಸಪ್​ ಮೂಲಕ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ್ದಾನೆ. ಅಲ್ಲದೇ, ಕೊಲೆ ಮತ್ತು ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಎದುರಾಗಿದೆ.

Urfi Javed: ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ​, ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ
ಉರ್ಫಿ ಜಾವೇದ್
TV9 Web
| Edited By: |

Updated on:Dec 22, 2022 | 4:26 PM

Share

ನಟಿ ಉರ್ಫಿ ಜಾವೇದ್​ (Urfi Javed) ಅವರು ತಮ್ಮ ಬಟ್ಟೆಯ ಕಾರಣಕ್ಕೆ ಫೇಮಸ್​ ಆಗಿದ್ದಾರೆ. ಚಿತ್ರ-ವಿಚಿತ್ರವಾದ ಬಟ್ಟೆಗಳನ್ನು ಧರಿಸುವ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ. ಉರ್ಫಿ ಜಾವೇದ್​ ಫೋಟೋಗಳು (Urfi Javed Photos) ಪ್ರತಿ ದಿನ ವೈರಲ್​ ಆಗುತ್ತವೆ. ಅವುಗಳಿಗೆ ಅನೇಕರು ಬಹಳ ಕೆಟ್ಟದಾಗಿ ಕಮೆಂಟ್​ ಮಾಡುತ್ತಾರೆ. ಇನ್ನೂ ಕೆಲವರು ಅತಿರೇಕದ ವರ್ತನೆ ತೋರುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ, ವ್ಯಕ್ತಿಯೊಬ್ಬ ಉರ್ಫಿ ಜಾವೇದ್​ಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ (Death Threat) ಹಾಕಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧನಕ್ಕೆ ಒಳಗಾಗಿರುವ ವ್ಯಕ್ತಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.

ಮುಂಬೈನಲ್ಲಿ ವಾಸಿಸುತ್ತಿರುವ ನವೀನ್ ಗಿರಿ ಎಂಬಾತನು ಉರ್ಫಿ ಜಾವೇದ್​ ಅವರಿಗೆ ವಾಟ್ಸಪ್​ ಮೂಲಕ ಹಲವು ಸಂದೇಶಗಳನ್ನು ಕಳುಹಿಸಿ, ಕಿರುಕುಳ ನೀಡಿದ್ದಾನೆ ಎಂಬ ಆರೋಪ ಎದುರಾಗಿದೆ. ವಾಟ್ಸಪ್​ ಮೂಲಕ ಕೊಲೆ ಮತ್ತು ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ ಎಂದು ಉರ್ಫಿ ಜಾವೇದ್​ ಅವರು ಪೊಲೀಸರಿಗೆ ದೂರು ನೀಡಿದ್ದರು. ಅದರ ಅನ್ವಯ ಆರೋಪಿ ನವೀನ್​ ಗಿರಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಐಪಿಸಿ ಸೆಕ್ಷನ್​ 354 (ಎ), 354 (ಡಿ), 506, 509 ಅಡಿಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Urfi Javed: ಚಿಕ್ಕ ಹುಡುಗರ ವಿರುದ್ಧ ಪೊಲೀಸರಿಗೆ​ ದೂರು ನೀಡಲು ಮುಂದಾದ ಉರ್ಫಿ ಜಾವೇದ್​; ಬಾಲಕರ ತಪ್ಪೇನು?

ಇದನ್ನೂ ಓದಿ
Image
ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
Image
ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ
Image
‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
Image
‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ವಿವಾದಕ್ಕೂ ಉರ್ಫಿ ಜಾವೇದ್​ ಅವರಿಗೆ ಬಹಳ ನಂಟು ಬೆಳೆದಿದೆ. ಅವರ ವಿರುದ್ಧ ಅನೇಕರು ಕೇಸ್​ ದಾಖಲು ಮಾಡಿದ್ದಾರೆ. ಇತ್ತೀಚೆಗೆ ಅವರು ದುಬೈನಲ್ಲಿ ಅರೆಬೆತ್ತಲಾಗಿ ಫೋಟೋಶೂಟ್​ ಮಾಡುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದರು ಎಂಬ ಸುದ್ದಿ ಹರಡಿತ್ತು. ಆ ಬಗ್ಗೆ ಮಾಧ್ಯಮಗಳಿಗೆ ಉರ್ಫಿ ಜಾವೇದ್​ ಸ್ಪಷ್ಟನೆ ನೀಡಿದ್ದಾರೆ. ಫೋಟೋಶೂಟ್​ ನಡೆಯುತ್ತಿದ್ದ ಸ್ಥಳದಲ್ಲಿ ಅನುಮತಿ ಪಡೆಯುವ ವಿಚಾರದಲ್ಲಿ ಪೊಲೀಸರು ಪ್ರಶ್ನೆ ಮಾಡಿದ್ದಾರೆಯೇ ಹೊರತು ಬಟ್ಟೆಯ ಬಗ್ಗೆ ಯಾವುದೇ ತಕರಾರು ವ್ಯಕ್ತವಾಗಿಲ್ಲ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

ಇದನ್ನೂ ಓದಿ: Urfi Javed: ಉರ್ಫಿ ಜಾವೇದ್​ ಜತೆ ಹಿಂದುಸ್ತಾನಿ ಭಾವು ಕಿರಿಕ್​; ಈ ರೀತಿ ಬಟ್ಟೆ ಧರಿಸಿದ್ದಕ್ಕೆ ನಟಿಗೆ ಬೆದರಿಕೆ

ಒಂದಷ್ಟು ದಿನಗಳ ಹಿಂದೆ ಉರ್ಫಿ ಜಾವೇದ್​ ಅವರು ಮಾದಕವಾಗಿ ಸೀರೆಯುಟ್ಟು ಮ್ಯೂಸಿಕ್​ ವಿಡಿಯೋ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅವರು ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂದು ಅವರ ವಿರುದ್ಧ ಕೆಲವರು ಕೇಸ್​ ಹಾಕಿದ್ದರು. ಆ ಬಗ್ಗೆ ಉರ್ಫಿ ಜಾವೇದ್​ ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: Urfi Javed: ಇದು ಬಟ್ಟೆಯೋ, ಬಲೆಯೋ? ಉರ್ಫಿ ಜಾವೇದ್​ ಹೊಸ ವೇಷ ನೋಡಿ ನೆಟ್ಟಿಗರಿಗೆ ಅನುಮಾನ

‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ. ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:26 pm, Thu, 22 December 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!