‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು
ರಾಜ್​ ಕುಂದ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 02, 2021 | 7:28 PM

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ರಾಜ್​ ಕುಂದ್ರಾ ಅವರು ಬಾಂಬೇ ಹೈಕೋರ್ಟ್​ ಮೊರೆ ಹೋಗಿದ್ದಾರೆ. ತಮಗೆ ಜಾಮೀನು ನೀಡುವಂತೆ ಕೋರಿದ್ದಾರೆ. ಆದರೆ, ಈ ಅರ್ಜಿಯನ್ನು ವಜಾ ಮಾಡುವಂತೆ ಮುಂಬೈ ಪೊಲೀಸರ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾಕ್ಷ್ಯ ನಾಶದ ಗಂಭೀರ ಆರೋಪವನ್ನು ಕೂಡ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದರಲ್ಲಿ ಇವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ಈ ಕುರಿತು ಮುಂಬೈ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

‘ರಾಜ್​ ಕುಂದ್ರಾ ಹಾಗೂ ರಯಾನ್​ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದಾರೆ. ಎಷ್ಟು ಡೇಟಾ ಡಿಲೀಟ್​ ಮಾಡಲಾಗಿದೆ ಎಂಬುದು ಗೊತ್ತಿಲ್ಲ. ಡಿಲೀಟ್​ ಆದ ಡೇಟಾಗಳನ್ನು ನಾವು ಮರಳಿ ಪಡೆಯೋಕೆ ಪ್ರಯತ್ನಿಸುತ್ತಿದ್ದೇವೆ. ಆರೋಪಿಯು ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡುತ್ತಿದ್ದಾನೆ ಎಂದಾದರೆ ತನಿಖಾ ಸಂಸ್ಥೆಯು ಇದನ್ನು ಸುಮ್ಮನೆ ನೋಡುತ್ತಿರಬೇಕೇ? ಇದು ಸಾಧ್ಯವಿಲ್ಲ’ ಎಂದು ಸರ್ಕಾರದ ಪರ ವಕೀಲೆ ಅರುಣಾ ಪೈ ಕೋರ್ಟ್​ಗೆ ಹೇಳಿದ್ದಾರೆ.

ರಾಜ್​ ಕುಂದ್ರಾ ಪರ ವಕೀಲರು ಸಾಕ್ಷ್ಯ ನಾಶದ ಹೇಳಿಕೆಯನ್ನು ನಿರಾಕರಿಸಿದ್ದಾರೆ. ‘ರಾಜ್​ ಕುಂದ್ರಾಗೆ ಸಂಬಂಧಿಸಿದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ಶೋಧದ ಸಮಯದಲ್ಲೇ ವಶಪಡಿಸಿಕೊಂಡಿದ್ದಾರೆ. ಹೀಗಿರುವಾಗ ಸಾಕ್ಷ್ಯ ನಾಶ ಮಾಡೋಕೆ ಹೇಗೆ ಸಾಧ್ಯ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಲ್ಯಾಪ್​ಟಾಪ್​ನಿಂದ ಅಶ್ಲೀಲ ಸಿನಿಮಾಗಳು, ಹಣಕಾಸಿನ ಯೋಜನೆ ಮೊದಲಾದ ಕೆಲ ಪ್ರಮುಖ ಮಾಹಿತಿಯನ್ನು ಮುಂಬೈ ಕ್ರೈಮ್​ ಬ್ರ್ಯಾಂಚ್​ ವಶಕ್ಕೆ ಪಡೆದಿದೆ. ಇದರ ಜತೆಗೆ ರಾಜ್​ ಕುಂದ್ರಾ ಹಾಗೂ ಅವರ ಭಾವ ಪ್ರದೀಪ್​ ಭಕ್ಷಿ ಜತೆ ನಡೆದ ಇಮೇಲ್​ ಸಂಭಾಷಣೆ ಕೂಡ ಪೊಲೀಸರಿಗೆ ಸಿಕ್ಕಿದೆ. ಕೆಲವು ಮಾಹಿತಿಗಳು ಡಿಲೀಟ್​ ಆಗಿವೆ’ ಎಂದು ಅರುಣಾ ಪೈ ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

Published On - 7:22 pm, Mon, 2 August 21

ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ