‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?

Nag Ashwin: ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ನಾಗ್ ಅಶ್ವಿನ್, ‘ನಾನು ಆಲಿಯಾ ಭಟ್ ಜೊತೆಗೆ ಸಿನಿಮಾ ಮಾಡುತ್ತಿಲ್ಲ’ ಎಂದಿದ್ದಾರೆ.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 13, 2024 | 6:35 AM

‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಭರ್ಜರಿ ಖುಷಿ ಆಗಿದ್ದರು. ಆದರೆ, ಇದನ್ನು ನಾಗ್ ಅಶ್ವಿನ್ ಅಲ್ಲಗಳೆದಿದ್ದಾರೆ.

ನಾಗ್ ಅಶ್ವಿನ್ ಅವರ ಬೇಡಿಕೆ ಹೆಚ್ಚಿದೆ. ಇದಕ್ಕೆ ಕಾರಣ ಆಗಿರೋದು ‘ಕಲ್ಕಿ 2898 ಎಡಿ’ ಸಿನಿಮಾ. ಕಲ್ಪನೆಯಲ್ಲಿ ಮೂಡಿ ಬಂದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಸೀಕ್ವೆಲ್ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ಅವರು ಆಲಿಯಾ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.

ಇದನ್ನೂ ಓದಿ:ಆಲಿಯಾ ಭಟ್ ಬ್ಯಾಗ್ ಬೆಲೆ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ

ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್​ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ