ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ

Laal Singh Chaddha: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಒಂದು ಅತಿಥಿ ಪಾತ್ರಕ್ಕೆ ನಾಗ ಚೈತನ್ಯ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಟ್ರೇಲರ್​ನಲ್ಲಿ ಅವರು ಹೆಚ್ಚು ಕಾಣಿಸಿಲ್ಲ.

ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ
ನಾಗ ಚೈತನ್ಯ, ಆಮಿರ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: May 30, 2022 | 2:24 PM

ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಇಲ್ಲಿನ ಸ್ಟಾರ್​ ನಟರು ಹಿಂದಿ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಾರೆ. ಅದೇ ರೀತಿ ಬಾಲಿವುಡ್​ ಕಲಾವಿದರು ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿದ ಸಾಕಷ್ಟು ಉದಾಹರಣೆ ಇದೆ. ಆದರೆ ಈ ರೀತಿ ನಟಿಸಿದಾಗ ಪಾತ್ರಕ್ಕೆ ಸೂಕ್ತ ಮಹತ್ವ ಸಿಗಬೇಕು. ಇಲ್ಲದಿದ್ದರೆ ಅವರ ಫ್ಯಾನ್ಸ್​ ಬೇಸರ ಮಾಡಿಕೊಳ್ಳುವುದು ಗ್ಯಾರಂಟಿ. ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾದಲ್ಲಿ ಟಾಲಿವುಡ್ ನಟ ನಾಗ ಚೈತನ್ಯ ಅವರು ಒಂದು ಪಾತ್ರ ಮಾಡಿದ್ದಾರೆ. ಆದ್ದರಿಂದ ಈ ಚಿತ್ರದ ಬಗ್ಗೆ ತೆಲುಗು ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಟ್ರೇಲರ್​ ನೋಡಿದ ಬಳಿಕ ನಾಗ ಚೈತನ್ಯ (Naga Chaitanya) ಅಭಿಮಾನಿಗಳಿಗೆ ಬೇಸರ ಆಗಿದೆ. ತಮ್ಮ ನೆಚ್ಚಿನ ನಟನಿಗೆ ಹೆಚ್ಚಿನ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಾಗ ಚೈತನ್ಯ ಅಥವಾ ಆಮಿರ್​ ಖಾನ್​ (Aamir Khan) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಅಂತ ಕಾದು ನೋಡಬೇಕಿದೆ.

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬರುತ್ತಿದೆ. ಮೂಲ ಸಿನಿಮಾದಲ್ಲಿ ಟಾಮ್​ ಹ್ಯಾಂಕ್ಸ್​ ಮಾಡಿದ್ದ ಪಾತ್ರವನ್ನು ಬಾಲಿವುಡ್​ನಲ್ಲಿ ಆಮಿರ್​ ಖಾನ್​ ಮಾಡಿದ್ದಾರೆ. ಸಿನಿಮಾದಲ್ಲಿ ಬರುವ ಒಂದು ಅತಿಥಿ ಪಾತ್ರಕ್ಕೆ ನಾಗ ಚೈತನ್ಯ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಟ್ರೇಲರ್​ನಲ್ಲಿ ನಾಗ ಚೈತನ್ಯ ಹೆಚ್ಚು ಕಾಣಿಸಿಲ್ಲ. ಇಡೀ ಟ್ರೇಲರ್​ನಲ್ಲಿ ಆಮಿರ್​ ಖಾನ್​ ಪಾತ್ರವೇ ಆವರಿಸಿಕೊಂಡಿದೆ. ಇದರಿಂದ ನಾಗ ಚೈತನ್ಯ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ವೃತ್ತಿಜೀವನದಲ್ಲೂ ಮಾಜಿ ಗಂಡನಿಗೆ ಎದುರಾಳಿಯಾಗಿ ನಿಂತ ಸಮಂತಾ; ನಾಗ ಚೈತನ್ಯ ಚಿತ್ರಕ್ಕೆ ‘ಯಶೋದ’ ಫೈಟ್​

ಇದನ್ನೂ ಓದಿ
Image
Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಹಿಷ್ಕಾರಕ್ಕೆ ನೆಟ್ಟಿಗರ ಒತ್ತಾಯ; ಆಮಿರ್​ ಖಾನ್​ ಮಾಡಿದ ತಪ್ಪೇನು?
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
ಫ್ಯಾಮಿಲಿ ಜತೆ ಆಮಿರ್​ ಖಾನ್​ ಪುತ್ರಿ ಇರಾ ಖಾನ್​ ಬರ್ತ್​ಡೇ ಆಚರಣೆ; ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

ಇದೇ ಪಾತ್ರವನ್ನು ಮಾಡುವಂತೆ ಮೊದಲು ವಿಜಯ್​ ಸೇತುಪತಿ ಅವರಿಗೆ ಆಫರ್​ ನೀಡಲಾಗಿತ್ತು. ಕಾರಣಾಂತರಗಳಿಂದ ಅವರು ಒಪ್ಪಿಕೊಳ್ಳಲಿಲ್ಲ. ನಂತರ ಅದು ನಾಗ ಚೈತನ್ಯ ಪಾಲಾಯಿತು. ಒಟ್ಟಾರೆ ಸಿನಿಮಾದಲ್ಲಿ ಈ ಪಾತ್ರ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕಾತರ ಮೂಡಿದೆ. ಆಗಸ್ಟ್​ 11ರಂದು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

‘ಸೀಕ್ರೆಟ್​ ಸೂಪರ್​ ಸ್ಟಾರ್​’ ಖ್ಯಾತಿಯ ಅದ್ವೈತ್​ ಚಂದನ್​ ಅವರು ​ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕರೀನಾ ಕಪೂರ್​ ಖಾನ್​ ಮತ್ತು ಆಮಿರ್​ ಖಾನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಟ್ರೇಲರ್​ ನೋಡಿದ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್