The Vaccine War: ‘ದಿ ವ್ಯಾಕ್ಸಿನ್​ ವಾರ್​’ ಶೂಟಿಂಗ್​ ಶುರು; ವಿವೇಕ್​ ಅಗ್ನಿಹೋತ್ರಿ ಹೊಸ ಚಿತ್ರಕ್ಕೆ ಹೀರೋ ಯಾರು?

Vivek Agnihotri: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಚಿತ್ರೀಕರಣ ಆರಂಭ ಆಗಿದೆ. ವ್ಯಾಕ್ಸಿನ್​ ಕುರಿತಾದ ಕಥೆಯನ್ನು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಕೈಗೆತ್ತಿಕೊಂಡಿದ್ದಾರೆ.

The Vaccine War: ‘ದಿ ವ್ಯಾಕ್ಸಿನ್​ ವಾರ್​’ ಶೂಟಿಂಗ್​ ಶುರು; ವಿವೇಕ್​ ಅಗ್ನಿಹೋತ್ರಿ ಹೊಸ ಚಿತ್ರಕ್ಕೆ ಹೀರೋ ಯಾರು?
ವಿವೇಕ್ ಅಗ್ನಿಹೋತ್ರಿ
Follow us
TV9 Web
| Updated By: ಮದನ್​ ಕುಮಾರ್​

Updated on:Jan 01, 2023 | 4:30 PM

ಬಾಲಿವುಡ್​ನ ಖ್ಯಾತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು 2022ರಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಭೇಷ್​ ಎನಿಸಿಕೊಂಡಿತು. ಗಲ್ಲಾಪೆಟ್ಟಿಗೆ ದೃಷ್ಟಿಯಿಂದ ಮಾತ್ರವಲ್ಲದೇ ಬೇರೆ ಕಾರಣಗಳಿಂದಲೂ ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆ ಆಯಿತು. ಈಗ ವಿವೇಕ್​ ಅಗ್ನಿಹೋತ್ರಿ ಅವರು ಹೊಸ ಚಿತ್ರಕ್ಕೆ ಶೂಟಿಂಗ್​ ಆರಂಭಿಸಿದ್ದಾರೆ. ‘ದಿ ವ್ಯಾಕ್ಸಿನ್​ ವಾರ್’ (The Vaccine War) ಶೀರ್ಷಿಕೆಯ ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುವುದು ಯಾರು ಎಂಬ ಕೌತುಕ ಸಿನಿಪ್ರಿಯರಲ್ಲಿ ಇದೆ. ಹಿಂದಿ ಚಿತ್ರರಂಗದ ಖ್ಯಾತ ನಟ ನಾನಾ ಪಾಟೇಕರ್​ (Nana Patekar) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿಲ್ಲ.​

ನೈಜ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವಲ್ಲಿ ವಿವೇಕ್ ಅಗ್ನಿಹೋತ್ರಿ ಅವರು ಪರಿಣಿತರು. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಇಟ್ಟುಕೊಂಡು ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಮಾಡಿದ್ದರು. ಈಗ ವ್ಯಾಕ್ಸಿನ್​ ಕುರಿತಾದ ಕಥೆಯನ್ನು ಕೈಗೆತ್ತಿಕೊಂಡಿದ್ದಾರೆ. ಕೊರೊನಾ ವಿರುದ್ಧ ಭಾರತ ನಡೆಸಿದ ಹೋರಾಟದ ಕಹಾನಿ ಈ ಚಿತ್ರದಲ್ಲಿ ಇರಲಿದೆ.

ಕೆಲವೇ ದಿನಗಳ ಹಿಂದೆ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಶೂಟಿಂಗ್​ ಆರಂಭ ಆಯಿತು. ಹಾಗಿದ್ದರೂ ಕೂಡ ಪಾತ್ರವರ್ಗದ ಬಗ್ಗೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಸುಳಿವು ಬಿಟ್ಟುಕೊಟ್ಟಿಲ್ಲ. ಆದರೆ ನಾನಾ ಪಾಟೇಕರ್ ಅವರು ಮುಖ್ಯಭೂಮಿಕೆ ನಿಭಾಯಿಸುತ್ತಿರುವುದು ಮೂಲಗಳಿಂದ ತಿಳಿದುಬಂದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

ನಾನಾ ಪಾಟೇಕರ್​ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳ ಅನುಭವ ಇದೆ. ಅನೇಕ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಹೆಚ್ಚು ಚ್ಯೂಸಿ ಆಗಿದ್ದಾರೆ. ಅವರ ಜೊತೆ ವಿವೇಕ್​ ಅಗ್ನಿಹೋತ್ರಿ ಅವರು ಕೈ ಜೋಡಿಸಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಅವರ ಪಾತ್ರ ಯಾವ ರೀತಿ ಮೂಡಿಬರಹುದು ಎಂಬುದನ್ನು ತಿಳಿಯುವ ಕೌತುಕ ಸೃಷ್ಟಿಯಾಗಿದೆ. ಹೆಚ್ಚಿನ ಅಪ್​ಡೇಟ್​ಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ

ವಿವೇಕ್​ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡುವಾಗ ಹೆಚ್ಚಿನ ಒತ್ತಡ ಇರಲಿಲ್ಲ. ಆದರೆ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:30 pm, Sun, 1 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ