AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ: ಈಗಲಾದರು ಸಿನಿಮಾದ ಕಲೆಕ್ಷನ್ ಮೇಲೇರುತ್ತಾ?

Narendra Modi: 'ದಿ ಕಾಶ್ಮೀರ್ ಫೈಲ್ಸ್', 'ದಿ ಕೇರಳ ಸ್ಟೋರಿ' ಸಿನಿಮಾದ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು 'ದಿ ವ್ಯಾಕ್ಸಿನ್ ವಾರ್' ಸಿನಿಮಾದ ಬಗ್ಗೆ ಮಾತನಾಡಿದ್ದು, ಸಿನಿಮಾ ನಿರ್ಮಿಸಿರುವ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ: ಈಗಲಾದರು ಸಿನಿಮಾದ ಕಲೆಕ್ಷನ್ ಮೇಲೇರುತ್ತಾ?
ನರೇಂದ್ರ ಮೋದಿ
ಮಂಜುನಾಥ ಸಿ.
|

Updated on: Oct 05, 2023 | 7:16 PM

Share

ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶಿಸಿರುವ ‘ದಿ ವ್ಯಾಕ್ಸಿನ್ ವಾರ್’ (The Vaccine war) ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಈ ಸಿನಿಮಾವು ಕೋವಿಡ್​ಗೆ ಭಾರತೀಯ ವ್ಯಾಕ್ಸಿನ್ ತಯಾರಿಸಿದ ಘಟನೆಯನ್ನು ಆಧರಿಸಿದೆ. ಸಿನಿಮಾಕ್ಕೆ ಬಾಕ್ಸ್ ಆಫೀಸ್​ನಲ್ಲಿ ನೀರಸ ಪತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಚಿತ್ರಮಂದಿರಗಳಲ್ಲಿ ಎತ್ತಂಗಡಿಯಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಪ್ರಶಂಸಿದ್ದು, ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರನ್ನು ಅಭಿನಂದಿಸಿದ್ದಾರೆ.

ಜೋಧ್​ಪುರ್​ನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾಷಣದ ಮಧ್ಯೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಪ್ರಶಂಸಿದರು. ”ದಿ ವ್ಯಾಕ್ಸಿನ್ ವಾರ್’ ಹೆಸರಿನ ಸಿನಿಮಾ ಒಂದು ಇತ್ತೀಚೆಗೆ ಬಂದಿದೆ ಎಂದು ನಾನು ಕೇಳ್ಪಟ್ಟೆ. ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟಕ್ಕೆ ನಮ್ಮ ವಿಜ್ಞಾನಿಗಳು ಹಗಲು-ರಾತ್ರಿ ಪಟ್ಟ ಶ್ರಮ, ತಮ್ಮ ಲ್ಯಾಬ್​ನಲ್ಲಿ ಋಷಿಗಳ ರೀತಿಯಲ್ಲಿ ಮಾಡಿದ ಸಾಧನೆ, ಅದರಲ್ಲಿಯೂ ನಮ್ಮ ಮಹಿಳಾ ವಿಜ್ಞಾನಿಗಳು ಮಾಡಿರುವ ಸಾಧನೆಯನ್ನು ‘ದಿ ವ್ಯಾಕ್ಸಿನ ವಾರ್’ ಸಿನಿಮಾದಲ್ಲಿ ಅದ್ಭುತ ರೀತಿಯಲ್ಲಿ ತೋರಿಸಲಾಗಿದೆ. ಆ ಸಿನಿಮಾ ಇದೇ ವಾರ ತೆರೆಗೆ ಬಂದಿದೆ” ಎಂದಿದ್ದಾರೆ ಮೋದಿ.

”ನಮ್ಮ ವಿಜ್ಞಾನಿಗಳು ಇಷ್ಟು ಅದ್ಭುತವಾದ ಕಾರ್ಯ ಮಾಡಿದ್ದಾರೆಯೇ ಎಂದು ಆ ಸಿನಿಮಾ ನೋಡಿದ ಬಳಿಕ ಪ್ರತಿ ಭಾರತೀಯನಿಗೂ ಹೆಮ್ಮೆ ಎನಿಸುತ್ತಿದೆ. ಚಂದ್ರಯಾನ ನಡೆಯುತ್ತದೆ, ನಮ್ಮ ವಿಜ್ಞಾನಿಗಳ ಬಗ್ಗೆ ಗೌರವ ಹೆಚ್ಚುತ್ತದೆ. ವ್ಯಾಕ್ಸಿನ್ ನಿರ್ಮಾಣ ಆಗುತ್ತದೆ ನಮ್ಮ ವಿಜ್ಞಾನಿಗಳಿಗೆ ಗೌರವ ಸಂದಾಯವಾಗುತ್ತದೆ. ದೇಶದ ಯುವಕರು ವಿಜ್ಞಾನಿಗಳ ಬಗ್ಗೆ ವಿಜ್ಞಾನದ ಬಗ್ಗೆ ಆಕರ್ಷಿತರಾಗುತ್ತಿದ್ದಾರೆ” ಎಂದಿದ್ದಾರೆ ಮೋದಿ.

ಇದನ್ನೂ ಓದಿ:ಮತ್ತಷ್ಟು ತಗ್ಗಿತು ‘ದಿ ವ್ಯಾಕ್ಸಿನ್ ವಾರ್’ ಗಳಿಕೆ; ಎರಡನೇ ದಿನ ಕೆಲವೇ ಲಕ್ಷ ಗಳಿಸಿದ ವಿವೇಕ್ ಸಿನಿಮಾ

”ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ಮಿಸಿದ ತಂಡಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಸಿನಿಮಾ ಮೂಲಕ ನೀವು ದೇಶದ ವಿಜ್ಞಾನಿಗಳು ಹಾಗೂ ವಿಜ್ಞಾನಕ್ಕೆ ಮಹತ್ವ ನೀಡಿದ್ದೀರಿ. ಈ ನಿಮ್ಮ ಕಾರ್ಯವು ಮುಂಬರುವ ಪೀಳಿಗೆಗೆ ಉಪಯುಕ್ತವಾಗಲಿದೆ” ಎಂದಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆಯೂ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಪರವಾಗಿ ಮಾತನಾಡಿದ್ದರು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ದಿ ಕೇರಳ ಸ್ಟೋರಿ’ ಸಿನಿಮಾದ ಪರವಾಗಿಯೂ ಮಾತನಾಡಿದ್ದರು. ಈ ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಹಿಟ್ ಆಗುವ ಜೊತೆಗೆ ವಿವಾದವನ್ನೂ ಹುಟ್ಟು ಹಾಕಿದ್ದವು. ಸಮಾಜದಲ್ಲಿ ದ್ವೇಷ ಹುಟ್ಟಿಸುವ ಸಿನಿಮಾಗಳು ಇವಾಗಿವೇ ಎಂದು ಹಲವರು ಆರೋಪ ಹೊರಹಾಕಿದ್ದರು. ಕೆಲವು ರಾಜ್ಯಗಳು ಈ ಸಿನಿಮಾಕ್ಕೆ ವಿರೋಧ ವ್ಯಕ್ತಪಡಿಸಿ ಬ್ಯಾನ್ ಸಹ ಮಾಡಿದವು.

ಇದೀಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಬಾಕ್ಸ್ ಆಫೀಸ್​ನಲ್ಲಿ ಕುಸಿಯುತ್ತಿರುವ ಸಿನಿಮಾದ ಕಲೆಕ್ಷನ್ ಅನ್ನು ಮೇಲೆತ್ತುವ ನಿರೀಕ್ಷೆ ಹುಟ್ಟಿಸಿದೆ. ಈ ಹಿಂದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ವಿಷಯದಲ್ಲಿಯೂ ಇದೇ ರೀತಿ ಆಗಿತ್ತು. ಪ್ರಧಾನಿ ಮೋದಿಯವರು ಸಿನಿಮಾದ ಬಗ್ಗೆ ಮಾತನಾಡಿದ ಬಳಿಕ ಸಿನಿಮಾದ ಕಲೆಕ್ಷನ್ ಭಾರಿ ದೊಡ್ಡ ಮಟ್ಟದಲ್ಲಿ ಏರಿಕೆ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?