‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ

ವಿವಾದಿತ ಗೋದ್ರಾ ಹತ್ಯಾಕಾಂಡದ ವಿಷಯವನ್ನು ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮಾಡಲಾಗಿದೆ. ಇಂದು (ಡಿಸೆಂಬರ್​ 2) ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಬಳಿಕ ಅವರು ಸೋಶಿಯಲ್ ಮೀಡಿಯಾ ಮೂಲಕ ಚಿತ್ರತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಮೋದಿ
Follow us
ಮದನ್​ ಕುಮಾರ್​
|

Updated on: Dec 02, 2024 | 8:08 PM

ಬಾಲಿವುಡ್​ ನಟ ವಿಕ್ರಾಂತ್ ಮಾಸಿ ಪ್ರಮುಖ ಪಾತ್ರ ಮಾಡಿರುವ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವೀಕ್ಷಿಸಿದ್ದಾರೆ. ಇಂದು (ಡಿಸೆಂಬರ್​ 2) ಸಂಸತ್ ಭವನದ ಬಾಲಯೋಗಿ ಸಭಾಂಗಣದಲ್ಲಿ ಅವರು ಸಿನಿಮಾ ನೋಡಿದರು. ಅವರ ಜೊತೆ ಅನೇಕ ಸಚಿವರು, ಸಂಸದರು ಹಾಗೂ ಚಿತ್ರತಂಡದವರು ಕೂಡ ಭಾಗಿ ಆಗಿದ್ದರು. ಸಿನಿಮಾ ವೀಕ್ಷಿಸಿದ ನಂತರ ಸೋಶಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ ಅವರು ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡಕ್ಕೆ ಭೇಷ್​ ಎಂದಿದ್ದಾರೆ.

ಧೀರಜ್ ಅವರು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​, ಶೋಭಾ ಕಪೂರ್​, ಅಮೂಲ್ ವಿ. ಮೋಹನ್, ಅನ್ಶೂಲ್ ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿಧಿ ಡೋಗ್ರ, ಬರ್ಕಾ ಸಿಂಗ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರತಂಡದ ಪ್ರಯತ್ನವನ್ನು ಮೋದಿ ಹೊಗಳಿದ್ದಾರೆ.

ಸಿನಿಮಾ ವೀಕ್ಷಿಸಿದ ನಂತರ ನರೇಂದ್ರ ಮೋದಿ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಎನ್​ಡಿಎ ಸಂಸದರ ಜೊತೆಗೂಡಿ ದಿ ಸಾಬರಮತಿ ರಿಪೋರ್ಟ್​ ಸಿನಿಮಾ ನೋಡಿದೆ. ಚಿತ್ರತಂಡದ ಪ್ರಯತ್ನಕ್ಕೆ ನಾನು ಶ್ಲಾಘನೆ ವ್ಯಕ್ತಪಡಿಸುತ್ತೇನೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ. ಅವರಿಂದ ಈ ಹೊಗಳಿಕೆ ಸಿಕ್ಕದ್ದಕ್ಕೆ ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡದವರಿಗೆ ತುಂಬ ಖುಷಿ ಆಗಿದೆ.

ನರೇಂದ್ರ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಚಿವ ಜೆಪಿ ನಡ್ಡಾ ಕೂಡ ಸಿನಿಮಾ ವೀಕ್ಷಿಸಿದರು. ಚಿತ್ರತಂಡದವರಾದ ವಿಕ್ರಾಂತ್ ಮಾಸಿ, ಏಕ್ತಾ ಕಪೂರ್​, ರಿದ್ಧಿ ಡೋಗ್ರ, ನಿರ್ದೇಶಕ ಧೀರಜ್ ಮುಂತಾದವರು ಸಹ ಮೋದಿ ಜೊತೆ ಕುಳಿತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಕ್ರಾಂತ್ ಮಾಸಿ ಅವರು, ‘ಇದು ತುಂಬ ಭಿನ್ನ ಅನುಭವ. ನನಗೆ ತುಂಬ ಖುಷಿ ಆಗಿದೆ. ಈ ಅನುಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿ ಜೊತೆ ಕುಳಿತು ಸಿನಿಮಾ ನೋಡಿದ್ದು, ನನ್ನ ವೃತ್ತಿಜೀವನದ ಉತ್ತುಂಗ ಕ್ಷಣ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಬಿಡುಗಡೆ ಆದಾಗ ಕೂಡ ಮೋದಿ ಅವರು ಟ್ವೀಟ್ ಮಾಡಿದ್ದರು. ‘ಜನಸಾಮಾನ್ಯರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲದವರೆಗೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಅಂತಿಮವಾಗಿ ಸತ್ಯ ಹೊರಗೆ ಬರುತ್ತದೆ’ ಎಂದು ಅವರು ಪೋಸ್ಟ್ ಮಾಡಿದ್ದರು. 2002ರ ಫೆಬ್ರವರಿ 27ರಂದು ನಡೆದ ಗೋದ್ರಾ ರೈಲು ದುರಂತದ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮೂಡಿಬಂದಿದೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು