Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

Shah Rukh Khan | Narendra Modi: ಶಾರುಖ್​ ಖಾನ್​ ಅವರ ಫ್ಯಾನ್​ ಪೇಜ್​ಗಳಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ
ಶಾರುಖ್ ಖಾನ್, ನರೇಂದ್ರ ಮೋದಿ
Follow us
ಮದನ್​ ಕುಮಾರ್​
|

Updated on: Feb 09, 2023 | 3:36 PM

ನಟ ಶಾರುಖ್​ ಖಾನ್​ (Shah Rukh Khan) ಅವರ ‘ಪಠಾಣ್​’ ಸಿನಿಮಾ ಎಲ್ಲೆಲ್ಲೂ ಧೂಳೆಬ್ಬಿಸಿದೆ. ವಿಶ್ವಾದ್ಯಂತ ಈ ಚಿತ್ರ ಉತ್ತಮ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಮಾತ್ರವಲ್ಲದೇ ಹಲವಾರು ಸೆಲೆಬ್ರಿಟಿಗಳು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲೂ ‘ಪಠಾಣ್​’ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಇದು ಶಾರುಖ್​ ಖಾನ್​ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ. ಈಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಂಸತ್ತಿನಲ್ಲಿ ಆಡಿದ ಒಂದು ಮಾತು ಸಖತ್​ ವೈರಲ್​ ಆಗಿದೆ. ‘ದಶಕಗಳ ಬಳಿಕ ಶ್ರೀನಗರದಲ್ಲಿ ಚಿತ್ರಮಂದಿರಗಳು ಹೌಸ್​ಫುಲ್​ ಆಗಿವೆ’ ಎಂದು ಅವರು ಹೇಳಿದ್ದಾರೆ. ‘ಪಠಾಣ್​’ (Pathaan Movie) ಚಿತ್ರವನ್ನೇ ಉದ್ದೇಶಿಸಿ ಅವರು ಈ ಮಾತು ಹೇಳಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮೊದಲಿನ ಪರಿಸ್ಥಿತಿ ಹೇಗಿತ್ತು? ಈಗ ಹೇಗಿದೆ ಎಂಬುದರ ಕುರಿತು ಮಾತನಾಡುವಾಗ ನರೇಂದ್ರ ಮೋದಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಎಷ್ಟೋ ವರ್ಷಗಳ ಬಳಿಕ ಅಲ್ಲಿನ ಚಿತ್ರಮಂದಿರಗಳಲ್ಲಿ ಸಿನಿಮಾಗಳು ಹೌಸ್​​ ಫುಲ್ ಪ್ರದರ್ಶನ ಕಾಣುತ್ತಿವೆ. ಅಷ್ಟರಮಟ್ಟಿಗೆ ಅಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಆದರೆ ಅವರು ‘ಪಠಾಣ್​’ ಚಿತ್ರದ ಹೆಸರನ್ನು ಪ್ರಸ್ತಾಪಿಸಿಲ್ಲ. ಇತ್ತೀಚಿನ ದಿನಗಳಲ್ಲಿ ‘ಪಠಾಣ್​’ ಚಿತ್ರವೇ ಅಲ್ಲಿ ಹೌಸ್​ ಫುಲ್​ ಆಗಿರುವುದರಿಂದ ಮೋದಿ ಮಾತನಾಡಿರುವುದು ಈ ಸಿನಿಮಾದ ಕುರಿತಾಗಿಯೇ ಎಂದು ಫ್ಯಾನ್ಸ್​ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರ ಫ್ಯಾನ್​ ಪೇಜ್​ಗಳಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮೋದಿ ಹೇಳಿದ ಮೇಲೆ ಎಲ್ಲರೂ ಒಪ್ಪಲೇಬೇಕು’ ಎನ್ನುತ್ತಿದ್ದಾರೆ ನೆಟ್ಟಿಗರು. ‘ಇದು ನಮ್ಮ ಶಾರುಖ್​ ಖಾನ್​ ತಾಕತ್ತು’ ಎಂದು ಅಪ್ಪಟ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’:

‘ಪಠಾಣ್​’ ಸಿನಿಮಾ ಗೆಲ್ಲಲಿ ಎಂಬುದು ಅಭಿಮಾನಿಗಳ ಬಯಕೆ ಮತ್ತು ಹಾರೈಕೆ ಆಗಿತ್ತು. ಈ ಸಿನಿಮಾ ಗೆದ್ದಿರುವುದು ಮಾತ್ರವಲ್ಲದೇ ಅನೇಕ ದಾಖಲೆಗಳನ್ನು ಕೂಡ ಬರೆಯುತ್ತಿದೆ. ‘ಕೆಜಿಎಫ್​ 2’ ಚಿತ್ರ ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ ಒಟ್ಟು ಹಣ 434.70 ಕೋಟಿ ರೂಪಾಯಿ. ಈ ದಾಖಲೆಯನ್ನು ಮುರಿಯುವಲ್ಲಿ ‘ಪಠಾಣ್​’ ಸಿನಿಮಾ ಯಶಸ್ವಿ ಆಗಿದೆ. ಮಂಗಳವಾರವೇ (ಫೆ.7) ಈ ಸಿನಿಮಾದ ಗಳಿಕೆ 430.25 ಕೋಟಿ ರೂಪಾಯಿ ಆಗಿತ್ತು. ಬುಧವಾರ ಕೂಡ ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿರುವುದರಿಂದ ಅನಾಯಾಸವಾಗಿ ‘ಕೆಜಿಎಫ್​ 2’ ಚಿತ್ರವನ್ನು ಇದು ಹಿಂದಿಕ್ಕಿದೆ ಎಂದು ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ