‘ಈ ರೀತಿಯ ಸಿನಿಮಾಗಳು ಹಾನಿಕರ’; ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ಟೀಕಿಸಿದ ನಸೀರುದ್ದೀನ್ ಶಾ

‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಈ ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದರು.

‘ಈ ರೀತಿಯ ಸಿನಿಮಾಗಳು ಹಾನಿಕರ’; ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ಟೀಕಿಸಿದ ನಸೀರುದ್ದೀನ್ ಶಾ
ನಸ್ರುದ್ದೀನ್​ ಶಾ-ಸನ್ನಿ ಡಿಯೋಲ್

Updated on: Sep 12, 2023 | 10:46 AM

ಬಾಲಿವುಡ್​ನಲ್ಲಿ ಸಾಲು ಸಾಲು ಸಿನಿಮಾ ಸೂಪರ್ ಹಿಟ್ ಆಗಿವೆ. ಹಲವು ಸಿನಿಮಾಗಳು ನೂರು ಕೋಟಿ ಬಿಸ್ನೆಸ್ ಮಾಡಿದ್ದರೆ ಇನ್ನೂ ಕೆಲವು ಚಿತ್ರಗಳು 200+ ಕೋಟಿ ರೂಪಾಯಿ ಬಾಚಿಕೊಂಡಿದೆ. ಸನ್ನಿ ಡಿಯೋಲ್ (Sunny Deol) ನಟನೆಯ ‘ಗದರ್ 2’ ಸಿನಿಮಾ 515 ಕೋಟಿ ರೂಪಾಯಿ ಬಾಚಿಕೊಂಡಿದೆ. ‘ಜವಾನ್’ ಸಿನಿಮಾ ರಿಲೀಸ್ ಆದ ಬಳಿಕ ಈ ಚಿತ್ರದ ಕಲೆಕ್ಷನ್ ಕಡಿಮೆ ಆಗಿದೆ. ‘ಗದರ್ 2’  (Gadar 2 Movie) ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದಾರೆ. ಈ ರೀತಿಯ ಸಿನಿಮಾಗಳು ಹಾನಿಕರ ಎಂದಿದ್ದಾರೆ.

ಫ್ರೀ ಪ್ರೆಸ್ ಜರ್ನಲ್​ಗೆ ನೀಡಿದ ಸಂದರ್ಶನದಲ್ಲಿ ನಸೀರುದ್ದೀನ್ ಶಾ ಮಾತನಾಡಿದ್ದಾರೆ. ‘ಅತಿಯಾದ ದೇಶಪ್ರೇಮ ಅಪಾಯಕಾರಿ. ಸಿನಿಮಾದ ಜನಪ್ರಿಯತೆ ಅನ್ನೋದು ಇದರಿಂದಲೇ ಪ್ರೇರಿತಗೊಂಡಿದೆ. ಇಂದು ನಿಮ್ಮ ದೇಶವನ್ನು ಪ್ರೀತಿಸಿದರೆ ಸಾಕಾಗುವುದಿಲ್ಲ, ಕಾಲ್ಪನಿಕ ಶತ್ರುಗಳನ್ನು ಸೃಷ್ಟಿಸಿಕೊಳ್ಳಬೇಕು. ದಿ ಕೇರಳ ಸ್ಟೋರಿ, ‘ಗದರ್ 2’ ಚಿತ್ರಗಳು ಸಾಕಷ್ಟು ಹಾನಿಕರ. ನಾನು ಆ ಚಿತ್ರಗಳನ್ನು ನೋಡಿಲ್ಲ. ಆದರೆ, ಅವು ಯಾವ ವಿಚಾರದ ಬಗ್ಗೆ ಇದೆ ಅನ್ನೋದು ಗೊತ್ತಿದೆ’ ಎಂದಿದ್ದಾರೆ ಅವರು.

‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಈ ಚಿತ್ರವನ್ನು ನಸೀರುದ್ದೀನ್ ಶಾ ಟೀಕಿಸಿದ್ದರು. ‘ಇದು ಡಿಸ್ಟರ್ಬಿಂಗ್ ಸಿನಿಮಾ’ ಎಂದು ಕರೆದಿದ್ದರು.

ಇದನ್ನೂ ಓದಿ:ಮ್ಯಾನೇಜರ್​ ವರ್ತನೆಯಿಂದ ದೊಡ್ಡ ಸಿನಿಮಾಗಳ ಆಫರ್​ ಕಳೆದುಕೊಂಡಿದ್ದ ‘ಗದರ್​ 2’ ನಟಿ ಅಮೀಷಾ ಪಟೇಲ್​ 

‘ಗದರ್ 2’ ಚಿತ್ರದ ಕಥೆಯೂ ಭಾರತ vs ಪಾಕಿಸ್ತಾನ ಎನ್ನುವ ರೀತಿ ಇದೆ. ಮಗನ ರಕ್ಷಣೆಗೆ ಪಾಕಿಸ್ತಾನಕ್ಕೆ ತೆರಳುವ ತಂದೆಯಾಗಿ ಸನ್ನಿ ಡಿಯೋಲ್ ಕಾಣಿಸಿಕೊಂಡಿದ್ದರು. ಅಮೀಷಾ ಪಟೇಲ್  ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅನಿಲ್ ಶರ್ಮಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us