ಆಲಿಯಾ ಭಟ್ ಮನೆಯಲ್ಲಿ ನಿತ್ಯವೂ ಪ್ಲೇ ಆಗುತ್ತೆ ‘ನಾಟು ನಾಟು..’ ಹಾಡು

Alia Bhatt: ಆಲಿಯಾ ಭಟ್ ಮನೆಯಲ್ಲಿ ಪ್ರತಿ ದಿನವೂ ‘ಆರ್​ಆರ್​ಆರ್’ ಸಿನಿಮಾದ ನಾಟು-ನಾಟು ಹಾಡು ಪ್ಲೇ ಆಗುತ್ತದೆಯಂತೆ. ಸ್ವತಃ ಆಲಿಯಾ ಭಟ್ ಸಹ ಪ್ರತಿದಿನ ನಾಟು-ನಾಟು ಹಾಡಿಗೆ ಡ್ಯಾನ್ಸ್ ಮಾಡುತ್ತಾರಂತೆ. ಏಕೆ?

ಆಲಿಯಾ ಭಟ್ ಮನೆಯಲ್ಲಿ ನಿತ್ಯವೂ ಪ್ಲೇ ಆಗುತ್ತೆ ‘ನಾಟು ನಾಟು..’ ಹಾಡು
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Oct 10, 2024 | 9:53 AM

ಬಾಲಿವುಡ್ ನಟಿ ಆಲಿಯಾ ಭಟ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರ ನಟನೆಯ ‘ಜಿಗ್ರಾ’ ಚಿತ್ರವು ಈ ವಾರ ಬಿಡುಗಡೆ ಕಾಣುತ್ತಿದೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿಗೂ ಡಬ್ ಆಗಿ ಬಿಡುಗಡೆ ಕಾಣುತ್ತಿದೆ. ‘ಏಷ್ಯನ್ ಸುರೇಶ್ ಎಂಟರ್ಟೇನ್ಮೆಂಟ್ಸ್’ ಈ ಚಿತ್ರವನ್ನು ತೆಲುಗಿನಲ್ಲಿ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 11ರಂದು ರಿಲೀಸ್ ಆಗಲಿರುವ ಈ ಚಿತ್ರದ ಪ್ರಚಾರಕ್ಕಾಗಿ ಆಲಿಯಾ ಭಟ್ ಅವರು ಹೈದರಾಬಾದ್​ಗೆ ಬಂದಿದ್ದರು. ಈ ವೇಳೆ ಅವರು ನೀಡಿದ ಹೇಳಿಕೆ ಗಮನ ಸೆಳೆದಿದೆ.

ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಅಭಿನಯಿಸಿದ್ದ ‘ಬ್ರಹ್ಮಾಸ್ತ್ರ’ ಚಿತ್ರವು ತೆಲುಗಿಗೆ ಡಬ್ ಆಗಿ ರಿಲೀಸ್ ಆಗಿತ್ತು. ರಾಜಮೌಳಿ ಅವರು ನಿರ್ದೇಶನ ಮಾಡಿದ್ದ ‘ಆರ್ಆರ್ಆರ್’ ಚಿತ್ರದಲ್ಲಿ ಆಲಿಯಾ ಅವರು ನಟಿಸಿದ್ದರು. ಆಲಿಯಾ ನಿರ್ಮಾಣ ಮಾಡಿದ ಚಿತ್ರವು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು.

ಈ ಕಾರಣದಿಂದ ಹೈದರಾಬಾದ್​ನಲ್ಲಿ ಆಲಿಯಾ ಭಟ್ ಅವರು ‘ಜಿಗ್ರಾ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಸಮಂತಾ ಅವರು ಅತಿಥಿಯಾಗಿ ಆಗಮಿಸಿದ್ದರು. ಆಲಿಯಾ ಅವರು ‘ನಾಟು ನಾಟು..’ ಹಾಡಿನ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: ಮತ್ತೊಂದು ತೆಲುಗು ಸಿನಿಮಾದಲ್ಲಿ ಆಲಿಯಾ ಭಟ್? ನಿರ್ದೇಶಕ ಯಾರು?

‘ನಮ್ಮ ಮನೆಯಲ್ಲಿ ಯಾವಾಗಲೂ ನಾಟು ನಾಟು ಹಾಡನ್ನು ಪ್ಲೇ ಮಾಡುತ್ತೇವೆ. ನಮ್ಮ ಮಗಳು ರಹಾ ಈ ಹಾಡಿನ ದೊಡ್ಡ ಅಭಿಮಾನಿ. ಅವಳಿಗೆ ಹಾಡು ಕೇಳೋದು ಮಾತ್ರವಲ್ಲ, ಡ್ಯಾನ್ಸ್ ಮಾಡೋದು ಇಷ್ಟ. ನಾನು ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡೋದನ್ನು ನೋಡಿದ್ದಾಳೆ. ಈ ಕಾರಣಕ್ಕೆ ಅವಳೂ ಡ್ಯಾನ್ಸ್ ಮಾಡುತ್ತಾಳೆ. ಹೀಗಾಗಿ, ಹಾಡು ನನಗೆ ವಿಶೇಷ’ ಎಂದು ಆಲಿಯಾ ಹೇಳಿದ್ದಾರೆ.

ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರವು ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಪ್ರೆಗ್ನೆನ್ಸಿ ಬಳಿಕ ಆಲಿಯಾ ದೊಡ್ಡ ಬ್ರೇಕ್ ಪಡೆದಿಲ್ಲ. ಈಗ ಅವರ ನಟನೆಯ ‘ಜಿಗ್ರಾ’ ರಿಲೀಸ್ ಆಗುತ್ತಿದೆ. ಇದಲ್ಲದೆ, ‘ಲವ್ ಆ್ಯಂಡ್ ವಾರ್’ ಸಿನಿಮಾದಲ್ಲಿ ನಟಿಸುತ್ತಿದ್ದು, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಈ ಚಿತ್ರಕ್ಕೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?