ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಲಾಕ್​ಡೌನ್​ನಿಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
ವಿವೇಕ್​-ಪಲ್ಲವಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Apr 05, 2022 | 4:13 PM

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files Movie) ಮೂಲಕ ವಿವೇಕ್​ ಅಗ್ನಿಹೋತ್ರಿ ಅವರು ಅಪಾರ ಖ್ಯಾತಿ ಗಳಿಸಿದ್ದಾರೆ. ಈ ವರ್ಷ ಸಾಕಷ್ಟು ಚರ್ಚೆಗೆ ಒಳಗಾದ ಸಿನಿಮಾಗಳ ಪೈಕಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮುಂಚೂಣಿಯಲ್ಲಿ ನಿಲ್ಲುತ್ತದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮೊದಲೇ ಘೋಷಣೆ ಮಾಡಿದಂತೆ, ‘ದಿ ದಿಲ್ಲಿ ಫೈಲ್ಸ್​’ (The Delhi Files)ವಿವೇಕ್ ಅವರ ಮುಂದಿನ ಸಿನಿಮಾ ಆಗಬೇಕಿತ್ತು. ಆದರೆ, ಅದಕ್ಕೂ ಮೊದಲೇ ಸೀಕ್ರೇಟ್ ಆಗಿ ಸಿನಿಮಾ ಒಂದನ್ನು ಶೂಟ್​ ಮಾಡಿ ಮುಗಿಸಿದ್ದಾರೆ ವಿವೇಕ್​ ಅಗ್ನಿಹೋತ್ರಿ (Vivek Agnihotri). ಈ ವಿಚಾರ ಈಗ ರಿವೀಲ್ ಆಗಿದೆ.

ವಿವೇಕ್ ಅಗ್ನಿಹೋತ್ರಿ ಮಾಡುವ ಸಿನಿಮಾಗಳ ಬಜೆಟ್​ ತುಂಬಾನೇ ಸಣ್ಣ ಮಟ್ಟದಲ್ಲಿರುತ್ತದೆ. ‘ದಿ ಕಾಶ್ಮೀರ್ ಫೈಲ್ಸ್​’ 20 ಕೋಟಿ ರೂಪಾಯಿಯಲ್ಲಿ ಸಿದ್ಧಗೊಂಡ ಚಿತ್ರ. ವಿಶೇಷ ಎಂದರೆ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಲಾಕ್​ಡೌನ್​ನಿಂದ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಈ ಸಿನಿಮಾಗೆ ‘ನೌಟಂಕಿ’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ದಿ ಕಾಶ್ಮೀರ್ ಫೈಲ್ಸ್​’ನಲ್ಲಿ ಬಹುಮುಖ್ಯ ಪಾತ್ರ ಮಾಡಿರುವ ಅನುಪಮ್​ ಖೇರ್​ ಅವರು ‘ನೌಟಂಕಿ’ಯಲ್ಲಿ ಲೀಡ್​​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಗೆಳೆಯ ಸತೀಶ್ ಕೌಶಿಕ್​ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರೂಮಿ ಜಫ್ರಿ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆದಿದ್ದಾರೆ. ವಿವೇಕ್​ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಿದ್ಧಗೊಂಡಿದ್ದು ಹೇಗೆ ಎನ್ನುವ ಬಗ್ಗೆ ವಿವೇಕ್​ ಮಾಹಿತಿ ನೀಡಿದ್ದಾರೆ.

‘2021ರ ಮಾರ್ಚ್​ ತಿಂಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿದ್ದೆವು. ಆ ಸಂದರ್ಭದಲ್ಲಿ ಕೊರೊನಾದಿಂದ ಲಾಕ್​ಡೌನ್​ ಘೋಷಣೆ ಆಯಿತು. ಅನುಪಮ್​ ಖೇರ್​ ಅವರು ಅಮೆರಿಕದಿಂದ ಶೂಟಿಂಗ್​ಗಾಗಿ ಭಾರತಕ್ಕೆ ಬಂದಿದ್ದರು. ಲಾಕ್​ಡೌನ್​ನಿಂದ ಅವರು ಕೂಡ ಇಲ್ಲೇ ಉಳಿಯಬೇಕಾಯಿತು. ಈ ಸಮಯವನ್ನು ಬಳಕೆ ಮಾಡಿಕೊಳ್ಳಲು ನಾವು ನಿರ್ಧರಿಸಿದೆವು. ಸ್ಕ್ರಿಪ್ಟ್​ ರೆಡಿ ಇತ್ತು. ಹೀಗಾಗಿ ಮತ್ತೊಂದು ಸಿನಿಮಾದ ಶೂಟಿಂಗ್​ಅನ್ನು ಭೋಪಾಲ್​ನಲ್ಲಿ​ ಪೂರ್ಣಗೊಳಿಸಿದೆವು’ ಎಂದಿದ್ದಾರೆ ವಿವೇಕ್​.

‘ನೌಟಂಕಿ’ ಸಿನಿಮಾ ತುಂಬಾ ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಸಿನಿಮಾ ಎನ್ನಲಾಗುತ್ತಿದೆ. ‘ಇದು ಕಲೆ, ಸೃಜನಶೀಲತೆ, ರಂಗಭೂಮಿ ಹಾಗೂ ಸಿನಿಮಾಗೆ ನಾವು ನೀಡುತ್ತಿರುವ ಟ್ರಿಬ್ಯೂಟ್’​ ಎಂದು ವಿವೇಕ್ ಹೇಳಿಕೊಂಡಿದ್ದಾರೆ.

‘ನೌಟಂಕಿ ನನಗೆ ವಿಶೇಷವಾಗಿದೆ. ನನ್ನ ಹಳೆಯ ಮತ್ತು ಆತ್ಮೀಯ ಸ್ನೇಹಿತ ಸತೀಶ್ ಕೌಶಿಕ್ ಈ ಬಾರಿ ನನ್ನ ಸಹನಟನಾಗಿ ನಟಿಸಿದ್ದಾರೆ. ನಾವು ಹಲವು ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದೇವೆ’ ಎಂದಿದ್ದಾರೆ ಅನುಪಮ್ ಖೇರ್​.

ಇದನ್ನೂ ಓದಿ: ‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ

‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿನಿಂದ ಆಹ್ವಾನ

Published On - 2:51 pm, Tue, 5 April 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ