AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣಿನ ವೇಷದಲ್ಲಿ ಬಂದ ಸ್ಟಾರ್ ನಟ; ಯಾರು ಎಂದು ಗುರುತಿಸುತ್ತೀರಾ?

‘ಹಡ್ಡಿ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಬೆಳ್ಳಿ ಬಣ್ಣದ ಡ್ರೆಸ್ ಹಾಕಿದ್ದಾರೆ ನವಾಜುದ್ದೀನ್. ಅವರ ಪಾತ್ರದ ಹೆಸರು ಹಡ್ಡಿ.

ಹೆಣ್ಣಿನ ವೇಷದಲ್ಲಿ ಬಂದ ಸ್ಟಾರ್ ನಟ; ಯಾರು ಎಂದು ಗುರುತಿಸುತ್ತೀರಾ?
ಹಡ್ಡಿ ಸಿನಿಮಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 23, 2022 | 6:15 PM

Share

ಸಿನಿಮಾ ರಂಗಕ್ಕೆ ಕಾಲಿಟ್ಟ ನಂತರದಲ್ಲಿ ಕೆಲ ಕಲಾವಿದರು ನಿರ್ಬಂಧ ಹೇರಿಕೊಂಡಿರುತ್ತಾರೆ. ತಾವು ಹಾಕಿಕೊಂಡ ಚೌಕಟ್ಟನ್ನು ದಾಟಿ ಅವರು ಎಂದಿಗೂ ಹೊರ ಬರುವುದಿಲ್ಲ. ಆದರೆ, ಅನೇಕ ಕಲಾವಿದರು ಸಿಕ್ಕ ಎಲ್ಲಾ ಪಾತ್ರಗಳನ್ನು ಮಾಡಲು ರೆಡಿ ಇರುತ್ತಾರೆ. ಪ್ರಯೋಗಾತ್ಮಕ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಈಗ ಬಾಲಿವುಡ್​ನಲ್ಲಿ ‘ಹಡ್ಡಿ’ Haddi Movie) ಹೆಸರಿನ ಸಿನಿಮಾ ಬರುತ್ತಿದೆ. ಈ ಚಿತ್ರದಲ್ಲಿ ಬಾಲಿವುಡ್​ನ ಸ್ಟಾರ್ ಕಲಾವಿದ ನವಾಜುದ್ದೀನ್ ಸಿದ್ಧಿಕಿ (Nawazuddin Siddiqui) ಅವರು ಹೆಣ್ಣಿನ ಅವತಾರ ತಾಳಿದ್ದಾರೆ. ಸದ್ಯ ಈ ಫೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ನವಾಜುದ್ದೀನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಎರಡು ದಶಕಗಳು ಕಳೆದಿವೆ. ಅವರು ಇಲ್ಲಿಯವರೆಗೆ ಹಲವು ಭಿನ್ನ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಸಿನಿಮಾ ಜತೆಗೆ ‘ಸೇಕ್ರೆಡ್​ ಗೇಮ್ಸ್’ ರೀತಿಯ ವೆಬ್ ಸೀರಿಸ್​ಗಳ ಮೂಲಕವೂ ಗಮನ ಸೆಳೆದಿದ್ದಾರೆ. ಅವರು ಪ್ರತಿ ಸಿನಿಮಾದಲ್ಲೂ ಭಿನ್ನ ಪಾತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ಈಗ ನವಾಜುದ್ದೀನ್ ಹೊಸ ಅವತಾರ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅವರನ್ನು ಮಹಿಳೆಯ ಅವತಾರದಲ್ಲಿ ನೋಡಿ ಎಲ್ಲರೂ ಅಚ್ಚರಿ ಹೊರ ಹಾಕಿದ್ದಾರೆ. ಈ ಪೋಸ್ಟರ್​ಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Nawazuddin Siddiqui Birthday: ನವಾಜುದ್ದೀನ್ ಸಿದ್ದಿಕಿ ನಟನೆಯ ಈ ಕಿರುಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
Image
ಕನ್ನಡ ಚಿತ್ರರಂಗ ಉದಾಹರಿಸಿ ಬಾಲಿವುಡ್​ ಕಿವಿಹಿಂಡಿದ ನವಾಜುದ್ದೀನ್ ಸಿದ್ದಿಕಿ; ‘ಸೇಕ್ರೆಡ್ ಗೇಮ್ಸ್’ ನಟ ಹೇಳಿದ್ದೇನು?
Image
47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

‘ಹಡ್ಡಿ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಬೆಳ್ಳಿ ಬಣ್ಣದ ಡ್ರೆಸ್ ಹಾಕಿದ್ದಾರೆ ನವಾಜುದ್ದೀನ್. ಅವರ ಪಾತ್ರದ ಹೆಸರು ಹಡ್ಡಿ ಎಂಬುದಾಗಿದೆ. ಇದೊಂದು ರಿವೇಂಜ್ ಡ್ರಾಮಾ ಕಥೆ ಆಗಿದೆ. ಜೀ ಸ್ಟುಡಿಯೋಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಅಕ್ಷತ್ ಅಜಯ್ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ

‘ನಾನು ಹಲವು ಭಿನ್ನ ಪಾತ್ರಗಳನ್ನು ಮಾಡಿದ್ದೇನೆ. ಆದರೆ, ‘ಹಡ್ಡಿ’ ನಾನು ಹಿಂದೆಂದೂ ಮಾಡಿರದ ರೀತಿಯ ಪಾತ್ರ. ಚಿತ್ರದ ಶೂಟಿಂಗ್ ಆರಂಭಕ್ಕಾಗಿ ಕಾದಿದ್ದೇನೆ’ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ ನವಾಜುದ್ದೀನ್ ಸಿದ್ದಿಕಿ. ಈ ಸಿನಿಮಾ ಅನ್ನು ಪಶ್ಚಿಮ ಉತ್ತರ ಪ್ರದೇಶದಲ್ಲಿ ಶೂಟ್ ಮಾಡಲಾಗುತ್ತದೆ. 2023ರಲ್ಲಿ ಸಿನಿಮಾ ತೆರೆಗೆ ಬರಲಿದೆ. ಇದಲ್ಲದೆ, ಇನ್ನೂ ಹಲವು ಸಿನಿಮಾ ಕೆಲಸಗಳಲ್ಲಿ ನವಾಜುದ್ದೀನ್ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ಬಗೆಗಿನ ಅಪ್​ಡೇಟ್ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

Published On - 5:15 pm, Tue, 23 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ