‘ಜವಾನ್​’ ತಂಡದಲ್ಲಿ ಕಿರಿಕ್​? ನಯನತಾರಾ ಮುನಿಸಿಗೆ ಪ್ರತಿಕ್ರಿಯೆ ನೀಡಿದ ಶಾರುಖ್​ ಖಾನ್​

ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನರ್ಮದಾ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇ​ಸ್​ ಸಿಕ್ಕಿಲ್ಲ ಎಂಬ ಬೇಸರ ಅವರಿಗೆ ಇದೆ ಎಂದು ಗಾಸಿಪ್​ ಹಬ್ಬಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅವರ ಪೋಸ್ಟ್​ ವೈರಲ್​ ಆಗಿದೆ.

‘ಜವಾನ್​’ ತಂಡದಲ್ಲಿ ಕಿರಿಕ್​? ನಯನತಾರಾ ಮುನಿಸಿಗೆ ಪ್ರತಿಕ್ರಿಯೆ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​, ನಯನತಾರಾ
Follow us
ಮದನ್​ ಕುಮಾರ್​
|

Updated on: Sep 23, 2023 | 12:14 PM

ಗಲ್ಲಾಪೆಟ್ಟಿಗೆಯಲ್ಲಿ ‘ಜವಾನ್​’ ಸಿನಿಮಾ (Jawan Movie) ಅನೇಕ ಹೊಸ ದಾಖಲೆಗಳನ್ನು ಬರೆದಿದೆ. ವಿಶ್ವಾದ್ಯಂತ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಜಾಗತಿಕ ಮಾರುಕಟ್ಟೆಯಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವ ಹಂತದಲ್ಲಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್​ 532 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲರ ಖ್ಯಾತಿ ಹೆಚ್ಚಾಗಿದೆ. ‘ಪಠಾಣ್​’ ಬಳಿಕ ಶಾರುಖ್​ ಖಾನ್​ ಅವರಿಗೆ ಮತ್ತೊಂದು ಬಿಗ್​ ಸಕ್ಸಸ್​ ಸಿಕ್ಕಂತಾಗಿದೆ. ‘ಜವಾನ್​’ (Jawan) ಚಿತ್ರದಲ್ಲಿ ನಟಿಸಿದ ಬಳಿಕ ನಯನತಾರಾ ಅವರು ಹಿಂದಿ ಸಿನಿಪ್ರಿಯರ ವಲಯದಲ್ಲೂ ಫೇಮಸ್​ ಆಗಿದ್ದಾರೆ. ಹಾಗಿದ್ದರೂ ಕೂಡ ಅವರಿಗೆ ಒಂದು ಅಸಮಾಧಾನ ಇದೆ ಎಂಬ ಬಗ್ಗೆ ಇತ್ತೀಚೆಗೆ ವರದಿ ಆಗಿತ್ತು. ಅದಕ್ಕೆ ಸಾಕ್ಷಿ ನೀಡುವ ರೀತಿಯಲ್ಲಿ ಶಾರುಖ್​ ಖಾನ್​ (Shah Rukh Khan) ಕೂಡ ಪರೋಕ್ಷವಾಗಿ ಒಂದು ಪೋಸ್ಟ್​ ಮಾಡಿದ್ದಾರೆ. ಅದು ವೈರಲ್​ ಆಗುತ್ತಿದೆ.

ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನರ್ಮದಾ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇ​ಸ್​ ಸಿಕ್ಕಿಲ್ಲ ಎಂಬ ಬೇಸರ ಅವರಿಗೆ ಇದೆ ಎಂದು ಗಾಸಿಪ್​ ಹಬ್ಬಿದೆ. ನಯನತಾರಾ ಅವರ ಪಾತ್ರದ ಬದಲು ದೀಪಿಕಾ ಪಡುಕೋಣೆ ನಿರ್ವಹಿಸಿದ ಪಾತ್ರವನ್ನು ಹೆಚ್ಚು ಹೈಲೈಟ್​ ಮಾಡಲಾಗಿದೆ ಎಂಬುದು ಅವರ ಬೇಸರಕ್ಕೆ ಕಾರಣ. ನರ್ಮದಾ ಎಂಬ ಪಾತ್ರಕ್ಕೆ ಸೂಕ್ತ ಪ್ರಮಾಣದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬುದನ್ನು ಶಾರುಖ್​ ಖಾನ್​ ಕೂಡ ಒಪ್ಪಿಕೊಂಡಿದ್ದಾರೆ! ಆ ಮೂಲಕ ನಯನತಾರಾ ಅವರ ಮುನಿಸಿಗೆ ಶಾರುಖ್​ ಉತ್ತರ ನೀಡಿದಂತಾಗಿದೆ.

‘ಜವಾನ್​’ ಚಿತ್ರದ ಬಳಿಕ ನಯನತಾರಾಗೆ ಸಿಗುತ್ತಾ ಮತ್ತೊಂದು ಗೆಲುವು?

ನಯನತಾರಾ ಮಾಡಿದ ನರ್ಮದಾ ಎಂಬ ಪಾತ್ರದ ಬಗ್ಗೆ ಅಭಿಮಾನಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ಒಂಟಿಯಾಗಿ ಮಗುವನ್ನು ಸಾಕುತ್ತಿರುವ ನರ್ಮದಾ ಎಂಬ ಮಹಿಳೆಯ ಪಾತ್ರ ತುಂಬ ಸೂಕ್ಷ್ಮವಾಗಿ ಮೂಡಿಬಂದಿದೆ. ಎಲ್ಲ ಕ್ಷೇತ್ರದ ಮಹಿಳೆಯರನ್ನು ಪ್ರತಿನಿಧಿಸುವಂತಹ ಪಾತ್ರಗಳನ್ನು ಸಿನಿಮಾದಲ್ಲಿ ತೋರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅಭಿಮಾನಿಯು ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಶಾರುಖ್ ಖಾನ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಸಿಂಗಲ್​ ಮದರ್​ ಆಗಿ ನರ್ಮದಾ ಪಾತ್ರದ ಕಥೆ ನನಗೂ ಅದ್ಭುತ ಎನಿಸಿತು. ದುರಾದೃಷ್ಟ ಏನೆಂದರೆ, ಆ ಪಾತ್ರಕ್ಕೆ ಒಟ್ಟಾರೆಯಾಗಿ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿಲ್ಲ. ಹಾಗಿದ್ದರೂ ಕೂಡ ಅದು ತುಂಬ ಚೆನ್ನಾಗಿ ಮೂಡಿಬಂದಿದೆ’ ಎಂದು ಶಾರುಖ್​ ಖಾನ್​ ಉತ್ತರ ನೀಡಿದ್ದಾರೆ. ಇದಕ್ಕೆ ನಯನತಾರಾ ಅವರು ಏನಾದರೂ ಪ್ರತಿಕ್ರಿಯೆ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕು. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಯನತಾರಾ ಭಾಗವಹಿಸಿಲ್ಲ. ಚಿತ್ರದ ಸಕ್ಸಸ್​ ಸೆಲೆಬ್ರೇಷನ್​ನಲ್ಲೂ ಅವರು ಕಾಣಿಸಿಕೊಳ್ಳಲಿಲ್ಲ. ‘ಜವಾನ್​’ ಗೆಲುವಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದ್ದು, ಹಲವು ಅವಕಾಶಗಳು ಹರಿದುಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ