AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ಗಂಭೀರ ಆರೋಪ ಮಾಡಿದ್ದಾರೆ.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ
ನವಾಬ್ ಮಲಿಕ್, ಯಾಸ್ಮಿನ್ ವಾಂಖೆಡೆ
TV9 Web
| Updated By: ಮದನ್​ ಕುಮಾರ್​|

Updated on: Oct 28, 2021 | 10:23 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಅವರ ಮೇಲೆ ಹಲವು ಅರೋಪಗಳನ್ನೂ ಹೊರಿಸಲಾಗಿದೆ. ಈ ಡ್ರಗ್ಸ್​ ಪ್ರಕರಣದ ತನಿಖೆ ಪಾರದರ್ಶಕವಾಗಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ, ಇದರ ಹಿಂದೆ ಯಾರದ್ದೋ ಪಿತೂರಿ ಇದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಟೀಕೆಗಳ ನಡುವೆ ಸಮೀರ್​ ವಾಂಖೆಡೆ ಅವರ ಫ್ಯಾಮಿಲಿ ವಿಚಾರವನ್ನೂ ಎಳೆದು ತರಲಾಗುತ್ತಿದೆ. ಅದು ಅತಿರೇಕಕ್ಕೆ ಕೂಡ ಹೋಗಿದೆ. ಈಗ ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ಅವರು ಸಮೀರ್​ ವಾಂಖೆಡೆಯ ಸಹೋದರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ವಾಂಖೆಡೆ ಅವರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ನವಾಬ್​ ಮಲಿಕ್​ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಮ್ಮ ಖಾಸಗಿ ಫೋಟೋಗಳನ್ನು ಲೀಕ್​ ಮಾಡುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ ಎಂದು ಯಾಸ್ಮಿನ್​ ವಾಂಖೆಡೆ ಅವರು ಈ ಪತ್ರದಲ್ಲಿ ತಿಳಿಸಿದ್ದಾರೆ.

‘ನನ್ನ ಮೇಲೆ ನವಾಬ್​ ಮಲಿಕ್​ ಅವರು ಆಧಾರವಿಲ್ಲದ ಅನೇಕ ಆರೋಪಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ನನ್ನ ಸಹೋದರ ಸಮೀರ್​ ವಾಂಖೆಡೆಗೆ ತೊಂದರೆ ನೀಡಲು ಈ ರೀತಿ ಮಾಡಲಾಗಿದೆ. ಆನ್​ಲೈನ್​ನಲ್ಲಿ ನನ್ನ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ನನ್ನ ಖಾಸಗಿ ಫೋಟೋಗಳನ್ನು ಮಾಧ್ಯಮಗಳಲ್ಲಿ ಲೀಕ್​ ಮಾಡಿಸುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮಹಿಳಾ ಆಯೋಗಕ್ಕೆ ಯಾಸ್ಮಿನ್​​ ಪತ್ರ ಬರೆದಿದ್ದಾರೆ.

ಸಮೀರ್​ ವಾಂಖೆಡೆ ಮತ್ತು ಅವರ ಕುಟುಂಬದವರ ಮೇಲೆ ಈ ರೀತಿ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಅದನ್ನು ಅವರು ಖಂಡಿಸಿದ್ದಾರೆ.

ಇದನ್ನೂ ಓದಿ:

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ