KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?

Brahmastra | Kamaal R Khan Arrest: ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದುಂಟು.

KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
ಬ್ರಹ್ಮಾಸ್ತ್ರ ಸಿನಿಮಾ ಪೋಸ್ಟರ್​, ಕಮಾಲ್ ಆರ್. ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 08, 2022 | 2:28 PM

ಬಾಯಿಗೆ ಬಂದಂತೆ ಮಾತನಾಡುತ್ತ, ಅನೇಕ ಸಿನಿಮಾಗಳನ್ನು ಕಟುವಾಗಿ ಹೀಯಾಳಿಸುತ್ತಿದ್ದ ಕಮಾಲ್​ ಆರ್​. ಖಾನ್ (Kamaal R Khan)​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಎರಡು ಕೇಸ್​ಗಳು ಅವರ ಮೇಲೆ ದಾಖಲಾಗಿವೆ. ಸೆಲೆಬ್ರಿಟಿಗಳ ವಿರುದ್ಧ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದು ಹಾಗೂ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಗಳು ಅವರ ಮೇಲಿವೆ. ಒಂದು ಕೇಸ್​ನಲ್ಲಿ ಜಾಮೀನು ಸಿಕ್ಕಿದ್ದರೂ ಕೂಡ ಇನ್ನೊಂದು ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿ ಇರುವಂತೆ ಆಗಿದೆ. ಇದಕ್ಕೆಲ್ಲ ಬ್ರಹ್ಮಾಸ್ತ್ರ’ (Brahmastra) ಸಿನಿಮಾ ತಂಡ ಕಾರಣ ಎಂದು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ. ತೀರಾ ವಿಲಕ್ಷಣವಾದ ಪೋಸ್ಟ್​ಗಳನ್ನು ಕೆಲವರು ಹಾಕುತ್ತಿದ್ದಾರೆ. ಈ ವಿವಾದದಲ್ಲಿ ಕರಣ್​ ಜೋಹರ್​ (Karan Johar) ಅವರ ಹೆಸರನ್ನು ಕೂಡ ಎಳೆದು ತರಲಾಗಿದೆ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ. ರಿಲೀಸ್​ ಆಗುವುದಕ್ಕೂ ಮುನ್ನವೇ ಎಷ್ಟೋ ಚಿತ್ರಗಳನ್ನು ಫ್ಲಾಪ್​ ಎಂದು ಘೋಷಿಸಿದ್ದಾರೆ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗುತ್ತಿದೆ. ಸೆಪ್ಟೆಂಬರ್​ 9ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಕಮಾಲ್​ ಆರ್​. ಖಾನ್​ ಅವರ ಕೆಟ್ಟ ವಿಮರ್ಶೆಯನ್ನು ತಡೆಯುವ ಸಲುವಾಗಿಯೇ ಅವರನ್ನು ಅರೆಸ್ಟ್​ ಮಾಡಿಸಲಾಗಿದೆ ಎಂದು ಒಂದು ವರ್ಗದ ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ತೆರೆಕಾಣುತ್ತಿದೆ. ಹಿಂದಿಯ ಈ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿದೆ. ರಣಬೀರ್​ ಕಪೂರ್​, ಆಲಿಯಾ ಭಟ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಅಯಾನ್​ ಮುಖರ್ಜಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾದ ನಿರ್ಮಾಪಕರಲ್ಲಿ ಕರಣ್​ ಜೋಹರ್​ ಕೂಡ ಒಬ್ಬರು. ಅವರು ಬಾಲಿವುಡ್​ನಲ್ಲಿ ಪ್ರಭಾವಿ ವ್ಯಕ್ತಿ. ತಮ್ಮ ಈ ಸಿನಿಮಾವನ್ನು ಕೆಟ್ಟ ವಿಮರ್ಶೆಯಿಂದ ಬಚಾವ್​ ಮಾಡಿಕೊಳ್ಳಲು ಅವರು ಕಮಾಲ್​ ಆರ್​. ಖಾನ್​ರನ್ನು ಅರೆಸ್ಟ್​ ಮಾಡಿಸಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರ ರಿಲೀಸ್​ ಆಗಿ ಸೂಪರ್​ ಹಿಟ್​ ಎನಿಸಿಕೊಳ್ಳುವವರೆಗೂ ಜೈಲಿನಿಂದ ಕೆಆರ್​ಕೆ ಹೊರಗೆ ಬರುವುದಿಲ್ಲ ಎಂದು ಹಲವರು ಊಹಿಸುತ್ತಿದ್ದಾರೆ.

ಇಂಥ ಆರೋಪಗಳಿಗೆಲ್ಲ ಚಿತ್ರತಂಡ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಿಲ್ಲ. ಚಿತ್ರದ ಪ್ರಚಾರದಲ್ಲಿ ತಂಡ ನಿರತವಾಗಿದೆ. ಮೂರು ಪಾರ್ಟ್​ಗಳಲ್ಲಿ ಮೂಡಿಬರಲಿರುವ ಈ ಸಿನಿಮಾದ ಮೊದಲ ಪಾರ್ಟ್​ ಈಗ ಬಿಡುಗಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ