ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು

ಸಿದ್ದಾರ್ಥ್​ ಶುಕ್ಲಾ ಮತ್ತು ಸುಶಾಂತ್​ ಸಿಂಗ್​ ರಜಪೂತ್​ ನಡುವೆ ಹಲವು ಗುಣಗಳು ಒಂದೇ ರೀತಿ ಇದ್ದವು. ಸುಶಾಂತ್​ ರೀತಿಯೇ ಸಿದ್ದಾರ್ಥ್​ ಅವರನ್ನು ಕೂಡ ಎಲ್ಲರೂ ಇಷ್ಟಪಡುತ್ತಿದ್ದರು.

ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು
ಸಿದ್ದಾರ್ಥ್​ ಶುಕ್ಲಾ, ಸುಶಾಂತ್​ ಸಿಂಗ್​ ರಜಪೂತ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 03, 2021 | 3:37 PM

ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ಅವರ ಸಾವಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಜನರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ಸುಶಾಂತ್​ ಸಿಂಗ್​ ರಜಪೂತ್​ ಅವರನ್ನೂ ನೆನಪಿಸಿಕೊಳ್ಳಲಾಗುತ್ತಿದೆ. 2020ರ ಜೂನ್​ 14ರಂದು ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಸುದ್ದಿ ಹೊರಬಿದ್ದಿತ್ತು. ಆಗ ಅಭಿಮಾನಿಗಳಿಗೆ ಆಘಾತ ಉಂಟಾಗಿತ್ತು. ಇಂದು ಸಿದ್ದಾರ್ಥ್​ ಶುಕ್ಲಾ ಅಭಿಮಾನಿಗಳು ಕೂಡ ಅದೇ ಸ್ಥಿತಿಯಲ್ಲಿ ಇದ್ದಾರೆ. ಸಿದ್ದಾರ್ಥ್​ ನಮ್ಮೊಂದಿಗೆ ಇಲ್ಲ ಎಂಬುದನ್ನು ಅಭಿಮಾನಿಗಳಿಂದ ನಂಬೋಕೆ ಸಾಧ್ಯವಾಗುತ್ತಿಲ್ಲ.

ಅನುಮಾನ ಮೂಡಿಸಿದ ಸಾವುಗಳು:

ಸುಶಾಂತ್​ ಸಿಂಗ್​ ರಜಪೂತ್​ ತುಂಬ ಪಾಸಿಟಿವ್​ ವಿಚಾರಗಳನ್ನು ಇಟ್ಟುಕೊಂಡಂತಹ ವ್ಯಕ್ತಿ ಆಗಿದ್ದರು. ಆದರೆ ಅಂಥ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರು ಎಂದಾಗ ಜನರಿಗೆ ನಂಬೋದು ಕಷ್ಟ ಆಯಿತು. ಅದೇ ರೀತಿ ಸಿದ್ದಾರ್ಥ್​ ಶುಕ್ಲಾ ಕೂಡ ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತಹ ವ್ಯಕ್ತಿ. ಅಂಥವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬುದನ್ನು ಜನರು ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ಕೂಪರ್​ ಆಸ್ಪತ್ರೆ ಮೇಲೆ ಅಸಮಾಧಾನ:

ಸುಶಾಂತ್​ ಸಿಂಗ್ ರಜಪೂತ್​ ಅವರ ಶವವನ್ನು ಮುಂಬೈನ ಕೂಪರ್​ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಅವರ ಮರಣೋತ್ತರ ಪರೀಕ್ಷೆ ಬಗ್ಗೆ ಇನ್ನೂ ಹಲವು ಅನುಮಾನಗಳಿವೆ. ಹೀಗಿರುವಾಗ ಸಿದ್ದಾರ್ಥ್​ ಅವರನ್ನು ಕೂಡ ಮತ್ತದೇ ಕೂಪರ್​ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಯಾಕೆ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರೇಯಸಿಯರಿಗೆ ಸಂಕಷ್ಟ:

ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಬಳಿಕ ಅವರ ಪ್ರೇಯಸಿ ರಿಯಾ ಚಕ್ರವರ್ತಿಗೆ ಸಂಕಷ್ಟ ಶುರುವಾಗಿತ್ತು. ಸುಶಾಂತ್​ ಸಾವಿಗೂ ರಿಯಾ ಚಕ್ರವರ್ತಿಗೂ ಏನಾದರೂ ಸಂಬಂಧ ಇದೆಯೇ ಎಂಬ ಅನುಮಾನ ಹುಟ್ಟುಕೊಂಡಿತ್ತು. ಈಗ ಸಿದ್ದಾರ್ಥ್ ಪ್ರೇಯಸಿ ಎನ್ನಲಾದ ಶೆಹನಾಜ್​ ಗಿಲ್​ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಿದ್ದಾರ್ಥ್​ಗೆ ಹೃದಯಾಘಾತವಾದ ದಿನ ಶೆಹನಾಜ್ ಕೂಡ ಅವರ ಜೊತೆ ಇದ್ದರು ಎಂಬ ಮಾಹಿತಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸದ್ಯಕ್ಕೆ ಶೆಹನಾಜ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅಜಾತಶತ್ರುಗಳಾಗಿದ್ದ ಹೀರೋಗಳು:

ಸಿದ್ದಾರ್ಥ್​ ಶುಕ್ಲಾ ಮತ್ತು ಸುಶಾಂತ್​ ಸಿಂಗ್​ ರಜಪೂತ್​ ನಡುವೆ ಹಲವು ಗುಣಗಳು ಒಂದೇ ರೀತಿ ಇದ್ದವು. ಸುಶಾಂತ್​ ರೀತಿಯೇ ಸಿದ್ದಾರ್ಥ್​ ಅವರನ್ನು ಕೂಡ ಎಲ್ಲರೂ ಇಷ್ಟಪಡುತ್ತಿದ್ದರು. ಅನಗತ್ಯವಾಗಿ ಅವರು ಯಾರೊಂದಿಗೂ ಕಾಲು ಕೆರೆದು ಜಗಳಕ್ಕೆ ಹೋಗುತ್ತಿರಲಿಲ್ಲ. ಬಾಲಿವುಡ್​ನಲ್ಲಿ ಮಿಂಚಬೇಕಾಗಿದ್ದ ಈ ಪ್ರತಿಭಾವಂತರು ಅಕಾಲಿಕ ಮರಣ ಹೊಂದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ.

ಇದನ್ನೂ ಓದಿ:

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ