‘ಛಾವ’ ಎಫೆಕ್ಟ್: ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನದ ವಿಷಯ ಸೇರಿಸಲು ಒತ್ತಾಯ
‘ಛಾವ’ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಈ ಸಿನಿಮಾ ನೋಡಿದ ನಂತರ ಪ್ರೇಕ್ಷಕರಿಗೆ ಛತ್ರಪತಿ ಸಂಭಾಜಿ ಮಹಾರಾಜ್ ಜೀವನದ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಾಗಿದೆ. ಆದರೆ ಶಾಲಾ ಪಠ್ಯದಲ್ಲಿ ಸಂಭಾಜಿ ಬಗ್ಗೆ ಯಾಕೆ ವಿಷಯ ಇಲ್ಲ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ವಿಕ್ಕಿ ಕೌಶಲ್ ನಟನೆಯ ‘ಛಾವ’ ಸಿನಿಮಾ ಸಕ್ಸಸ್ ಆಗಿದೆ. ಇತಿಹಾಸದ ಕಹಾನಿ ಇರುವ ಈ ಸಿನಿಮಾವನ್ನು ಲಕ್ಷ್ಮಣ್ ಉಟೇಕರ್ ಅವರು ನಿರ್ದೇಶಿಸಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿರುವ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿ ‘ಛಾವ’ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನೆಟ್ಟಿಗರು ಹೊಸ ಬೇಡಿಕೆ ಇಟ್ಟಿದ್ದಾರೆ. ಶಾಲಾ ಪಠ್ಯದಲ್ಲಿ ಕೂಡ ಸಂಭಾಜಿ ಜೀವನದ ವಿವರವನ್ನು ಸೇರಿಸಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ.
ಶಾಲೆಯ ಮಕ್ಕಳು ಇತಿಹಾಸದ ಪಠ್ಯದಲ್ಲಿ ಅನೇಕ ರಾಜರ ಬಗ್ಗೆ ಓದಿ ತಿಳಿದುಕೊಂಡಿದ್ದಾರೆ. ಆದರೆ ಛತ್ರಪತಿ ಸಂಭಾಜಿ ಮಹಾರಾಜ್ ಬದುಕಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಠ್ಯದಲ್ಲಿ ಸೇರಿಸಿಲ್ಲ. ‘ಛಾವ’ ಸಿನಿಮಾ ನೋಡಿದ ಬಳಿಕ ಸಂಭಾಜಿ ಬಗ್ಗೆ ಜನರಿಗೆ ತಿಳಿಯುವಂತಾಗಿದೆ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ‘ಉರಿ’ ಸಿನಿಮಾದ ಕಲೆಕ್ಷನ್ ಹಿಂದಿಕ್ಕಿದ ‘ಛಾವ’: ಹೆಚ್ಚಿತು ವಿಕ್ಕಿ ಕೌಶಲ್ ಚಾರ್ಮ್
ಭಾರತದಲ್ಲಿ ಆಳ್ವಿಕೆ ನಡೆದಿದೆ ಮೊಘಲ್ ರಾಜರ ಬಗ್ಗೆ ಹಲವು ವಿಷಯವನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ. ಬಾಬರ್, ಅಕ್ಬರ್, ಜಹಂಗೀರ್, ಔರಂಗಜೇಬ್ ಸೇರಿದಂತೆ ಹಲವರ ಬಗ್ಗೆ ಶಾಲಾ ಮಕ್ಕಳು ಓದುತ್ತಾರೆ. ಆದರೆ ಸಂಭಾಜಿ ಬಗ್ಗೆ ಪಠ್ಯದಲ್ಲಿ ಸೇರಿಸದೇ ಇರುವುದು ಸರಿಯಲ್ಲ ಎಂಬ ಚರ್ಚೆ ಶುರುವಾಗಿದೆ. ಮಕ್ಕಳಿಗೆ ನಮ್ಮ ನೆಲೆದ ರಾಜರ ಬಗ್ಗೆ ತಿಳಿಸಿಕೊಡಬೇಕಿದೆ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಛಾವ ಸಿನಿಮಾ ಸಕ್ಸಸ್; ರಶ್ಮಿಕಾ, ವಿಕ್ಕಿಗೆ ಖುಷಿಯೋ ಖುಷಿ
‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ಮಾಡಿ ಜನಮನ ಗೆದ್ದಿದ್ದಾರೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಬಳಿಕ ವಿಕ್ಕಿ ಕೌಶಲ್ ಅವರಿಗೆ ‘ಛಾವ’ ಸಿನಿಮಾ ಮೂಲಕ ದೊಡ್ಡ ಗೆಲುವು ಸಿಕ್ಕಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ 10 ದಿನಕ್ಕೆ 334.51 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಅನೇಕರು ಎಮೋಷನಲ್ ಆಗುತ್ತಿದ್ದಾರೆ. ಅಂತಹ ಅನೇಕ ವಿಡಿಯೋಗಳು ವೈರಲ್ ಆಗುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.