Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

Rashmika Mandanna Viral Video: ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅವರನ್ನು ಕಂಡ ತಕ್ಷಣ ಕೆಲವು ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು.

Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Aug 28, 2022 | 10:31 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸದ್ಯಕ್ಕಂತೂ ಅವರು ಸಿನಿಮಾ ಕೆಲಸಗಳ ಸಲುವಾಗಿ ಮುಂಬೈನಲ್ಲಿ ಸೆಟಲ್​​ ಆಗಿದ್ದಾರೆ. ಅವರು ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಹಿಂಬಾಲಿಸುತ್ತಾರೆ. ಅಷ್ಟೇ ಅಲ್ಲ, ಅಭಿಮಾನಿಗಳು (Rashmika Mandanna Fans) ಕೂಡ ಸೆಲ್ಫಿ ಸಲುವಾಗಿ ಮುತ್ತಿಕೊಳ್ಳುತ್ತಾರೆ. ಆದರೂ ಕೂಡ ರಶ್ಮಿಕಾ ಕಿರಿಕಿರಿ ಮಾಡಿಕೊಂಡಿಲ್ಲ. ಎಲ್ಲವನ್ನೂ ಅವರು ನಗುಮುಖದಿಂದಲೇ ನಿಭಾಯಿಸುತ್ತಿದ್ದಾರೆ. ಅವರ ಈ ಗುಣ ಕಂಡು ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಗುಣಕ್ಕೆ ಸಾಕ್ಷಿ ಎಂಬಂತೆ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ಅಭಿಮಾನಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಬಹುತೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಫೋಟೋಗಾಗಿ ಜನರು ಮುಗಿಬಿದ್ದಾಗ ಸೆಲೆಬ್ರಿಟಿಗಳು ಕೆಲವೊಮ್ಮೆ ಸಿಟ್ಟಾಗುವುದುಂಟು. ಕೆಲವು ನಟ-ನಟಿಯರು ತುಂಬ ದುರಹಂಕಾರದಿಂದ ನಡೆದುಕೊಂಡಿದ್ದೂ ಇದೆ. ಆದರೆ ರಶ್ಮಿಕಾ ಮಂದಣ್ಣ ಆ ರೀತಿ ಮಾಡಿಲ್ಲ. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅವರನ್ನು ಕಂಡ ತಕ್ಷಣ ಕೆಲವು ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು. ಎಲ್ಲರನ್ನೂ ಆತ್ಮೀಯತೆಯಿಂದ ಮಾತನಾಡಿಸಿ, ಸೆಲ್ಫಿಗೆ ಪೋಸ್​ ನೀಡಿ ರಶ್ಮಿಕಾ ಮುಂದೆ ಸಾಗಿದರು.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಹಲವು ಪ್ರಾಜೆಕ್ಟ್​ಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಆಗಿದ್ದಾರೆ. ಸಹಜವಾಗಿಯೇ ಅವರ ದಿನಚರಿಯಲ್ಲಿ ತುಂಬ ಒತ್ತಡ ಇರುತ್ತದೆ. ಹಲವು ಕಡೆಗಳಿಗೆ ಅವರು ಪ್ರಯಾಣ ಮಾಡಬೇಕಿರುತ್ತದೆ. ಈ ನಡುವೆಯೂ ಅವರನ್ನು ಅಭಿಮಾನಿಗಳು ಮುತ್ತಿಕೊಂಡಾಗ ತಾಳ್ಮೆಯಿಂದ ನಡೆದುಕೊಂಡಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಫೋಟೋ ಕ್ಲಿಕ್ಕಿಸಿಕೊಳ್ಳಲು ಬಂದ ಮಕ್ಕಳನ್ನು ಅವರು ಪ್ರೀತಿಯಿಂದ ಮಾತನಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ನೆಲೆ ಕಂಡುಕೊಳ್ಳಲು ರಶ್ಮಿಕಾ ಮಂದಣ್ಣ ಸಕಲ ರೀತಿಯಲ್ಲಿ ಪ್ಲ್ಯಾನ್​ ಮಾಡಿದ್ದಾರೆ. ಅಮಿತಾಭ್​ ಬಚ್ಚನ್ ಜೊತೆ ‘ಗುಡ್​ ಬೈ’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗಳೆಲ್ಲವೂ ಬಿಡುಗಡೆಗೆ ಸಜ್ಜಾಗುತ್ತಿವೆ. ರಣಬೀರ್​ ಕಪೂರ್​ ಜೊತೆ ‘ಅನಿಮಲ್​’ ಸಿನಿಮಾದಲ್ಲಿ ನಟಿಸುವ ಅವಕಾಶವೂ ರಶ್ಮಿಕಾಗೆ ಒದಗಿಬಂದಿದೆ.

ಹಿಂದಿ ಪ್ರೇಕ್ಷಕರಿಗೆ ರಶ್ಮಿಕಾ ಮಂದಣ್ಣ ಅವರು ಈಗಾಗಲೇ ಪರಿಚಿತರಾಗಿದ್ದಾರೆ. ಅಲ್ಲು ಅರ್ಜುನ್​ ಜೊತೆ ಅವರು ನಟಿಸಿದ್ದ ‘ಪುಷ್ಪ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿತ್ತು. ಉತ್ತರ ಭಾರತದಲ್ಲಿ ಆ ಚಿತ್ರ ಧೂಳೆಬ್ಬಿಸಿತ್ತು. ಆ ಮೂಲಕ ಹಿಂದಿ ಸಿನಿಪ್ರಿಯರ ವಲಯದಲ್ಲಿ ರಶ್ಮಿಕಾ ಮಂದಣ್ಣ ಫೇಮಸ್​ ಆಗಿದ್ದಾರೆ. ಅವರ ಮುಂಬರುವ ಸಿನಿಮಾಗಳಿಗಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ