AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ

Vedat Marathe Veer Daudale Saat: ಅಕ್ಷಯ್​ ಕುಮಾರ್​ ಅವರು ಶಿವಾಜಿ ಪಾತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆರಂಭದಲ್ಲೇ ಈ ಪರಿ ಟ್ರೋಲ್​ ಆಗಿರುವುದರಿಂದ ಅವರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
ಅಕ್ಷಯ್ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Dec 07, 2022 | 3:00 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ ಟೈಮ್​ ಚೆನ್ನಾಗಿಲ್ಲ ಎಂದೇ ಹೇಳಬಹುದು. ಈ ವರ್ಷ ಅವರು ನಟಿಸಿದ ಯಾವ ಸಿನಿಮಾ ಕೂಡ ಕೈ ಹಿಡಿದಿಲ್ಲ. ಗಲ್ಲಾಪೆಟ್ಟಿಗೆಯಲ್ಲಿನ ಸೋಲು ಒಂದು ಕಡೆಯಾದರೆ, ಅವರು ಹಿಗ್ಗಾಮುಗ್ಗಾ ಟ್ರೋಲ್​ (Akshay Kumar Troll) ಆಗುತ್ತಿರುವುದು ಇನ್ನೊಂದು ಕಡೆ. ಸೂಕ್ತ ತಯಾರಿ ಇಲ್ಲದೇ ಅವರು ಚಿತ್ರೀಕರಣದ ಸೆಟ್​ಗೆ ಬರುತ್ತಾರೆ ಎಂಬುದು ಪದೇಪದೇ ಸಾಬೀತಾಗುತ್ತಿದೆ. ಅವರು ನಟಿಸುತ್ತಿರುವ ಮರಾಠಿ ಸಿನಿಮಾ ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್’ ನಿನ್ನೆಯಷ್ಟೇ (ಡಿ.6) ಶೂಟಿಂಗ್​ ಆರಂಭಿಸಿದೆ. ಫಸ್ಟ್​ ಲುಕ್​ ಕೂಡ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಅವರು ಛತ್ರಪತಿ ಶಿವಾಜಿ (Chhatrapati Shivaji) ಪಾತ್ರವನ್ನು ಮಾಡುತ್ತಿದ್ದಾರೆ. ಆದರೆ ಜನರು ಸಖತ್​ ಟ್ರೋಲ್​ ಮಾಡುತ್ತಿದ್ದಾರೆ. ಅದಕ್ಕೆ ಒಂದಷ್ಟು ಕಾರಣಗಳಿವೆ.

ಅಕ್ಷಯ್​ ಕುಮಾರ್​ ಅವರಿಗೆ ಈಗ 55 ವರ್ಷ ವಯಸ್ಸು. ತಮ್ಮ ವಯಸ್ಸಿಗೆ ಒಪ್ಪುವಂತಹ ಪಾತ್ರಗಳನ್ನು ಮಾಡುವುದು ಬಿಟ್ಟು, ಬಿಸಿ ರಕ್ತದ ವೀರ ಯೋಧರ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದೇ ಅಕ್ಷಯ್​ ಕುಮಾರ್​ ಅವರಿಗೆ ಮುಳುವಾಗುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಒಂದಷ್ಟು ಮಂದಿ ಕಾಲೆಳೆಯುತ್ತಿದ್ದಾರೆ. ಛತ್ರಪತಿ ಶಿವಾಜಿ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಸೂಕ್ತ ಆಯ್ಕೆ ಅಲ್ಲ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಇದನ್ನೂ ಓದಿ: Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಇನ್ನು, ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್’ ಸಿನಿಮಾದ ನಿರ್ದೇಶನ ತಂಡದವರು ಸರಿಯಾಗಿ ಅಧ್ಯಯನ ನಡೆಸಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ. ಫಸ್ಟ್​ ಲುಕ್​ ಬಿಡುಗಡೆ ಮಾಡುವುದರ ಜೊತೆಗೆ ಅಕ್ಷಯ್​ ಕುಮಾರ್​ ಅವರು ಒಂದು ಚಿಕ್ಕ ವಿಡಿಯೋ ಕೂಡ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ವಿದ್ಯುತ್​ ಬಲ್ಬ್​ಗಳು ಕಾಣಿಸಿವೆ. ಛತ್ರಪತಿ ಶಿವಾಜಿ ಕಾಲದಲ್ಲಿ ವಿದ್ಯುತ್​ ಬಲ್ಬ್​ ಹೇಗೆ ಇರಲು ಸಾಧ್ಯ ಎಂದು ಜನರು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

ಅಕ್ಷಯ್​ ಕುಮಾರ್​ ನಟಿಸಿದ್ದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲೂ ಕೂಡ ಇಂಥ ತಪ್ಪುಗಳು ಸಾಕಷ್ಟಿದ್ದವು. ಅವುಗಳನ್ನು ಇಟ್ಟುಕೊಂಡು ಜನರು ಸಿಕ್ಕಾಪಟ್ಟೆ ಟೀಕೆ ಮಾಡಿದ್ದರು. ಶಿವಾಜಿ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಮೀಸೆ-ಗಡ್ಡ ಫೇಕ್​ ಅನಿಸುತ್ತದೆ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಈ ರೀತಿ ಮಾಡಿದರೆ ಛತ್ರಪತಿ ಶಿವಾಜಿ ಪಾತ್ರಕ್ಕೆ ಅವರು ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಜನರಿಂದ ಕೇಳಿಬಂದಿದೆ.

ಮಹೇಶ್ ಮಂಜ್ರೇಕರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆರಂಭದಲ್ಲೇ ಈ ಪರಿ ಟ್ರೋಲ್​ ಆಗಿರುವುದರಿಂದ ಅವರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅಕ್ಷಯ್​ ಕುಮಾರ್​ ಅವರು ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವ ಗುರಿ ಇಟ್ಟುಕೊಳ್ಳುವ ಬದಲು ನಿಖರತೆಗೆ ಹೆಚ್ಚಿನ ಗಮನ ನೀಡಬೇಕಿದೆ ಎಂಬ ಅಭಿಪ್ರಾಯ ಸಿನಿಪ್ರಿಯರಿಂದ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!