AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದಾಂಪತ್ಯದ ಬಗ್ಗೆ ಆಗಾಗ ಕೆಲವು ವದಂತಿಗಳು ಹರಿದಾಡುತ್ತಲೇ ಇರುತ್ತವೆ. ಈ ದಂಪತಿ ವಿಚ್ಛೇದನ ಪಡೆದಿದ್ದಾರೆ ಎಂದು ಕೆಲವರು ಹೇಳಿದರೆ,ಇನ್ನೂ ಕೆಲವರು ಇದನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Oct 21, 2024 | 1:26 PM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಇವರು ಈವೆಂಟ್​ಗಳಿಗೆ ಪ್ರತ್ಯೇಕವಾಗಿಯೇ ತೆರಳುತ್ತಿದ್ದಾರೆ ಎನ್ನಲಾಗಿದೆ. ಈಗ ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ. ಅವರು ಯಾರು ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಐಶ್ವರ್ಯಾ ಅವರು ಅಭಿಷೇಕ್ ಬಚ್ಚನ್ ಅವರಿಂದ ದೂರವಾಗಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ.  ಐಶ್ವರ್ಯಾ ಮಗಳು ಆರಾಧ್ಯಾ ಜೊತೆ ತಮ್ಮ ತಾಯಿ ಮನೆಯಲ್ಲಿ ಇದ್ದಾರೆ ಎನ್ನಲಾಗಿದೆ. ಆದರೆ, ಇವರು ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯೋ ಆಲೋಚನೆಯಲ್ಲಿ ಇಲ್ಲವಂತೆ. ಐಶ್ವರ್ಯಾಗೆ ಸಮಸ್ಯೆ ಆಗುತ್ತಿರುವುದು ಪತಿಯಿಂದಲೇ ಎನ್ನಲಾಗಿದೆ.

ಅಭಿಷೇಕ್ ಬಚ್ಚನ್​ಗೆ ತಮ್ಮ ನಟನಾ ವೃತ್ತಿಯ ಬಗ್ಗೆ ಅಭದ್ರತೆ ಕಾಡುತ್ತಿದೆ. ಇದೇ ವೇಳೆ ಅವರು ನಟಿ ನಮೃತ್ ಕೌರ್ ಜೊತೆ ರಿಲೇಶನ್​ಶಿಪ್ ಹೊಂದಿದ್ದಾರೆ ಎಂದು ಕೂಡ ವರದಿ ಆಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಇದು ನಿಜ ಆಗದೇ ಇರಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಅಭಿಷೇಕ್ ಬಚ್ಚನ್ ಅವರು ತಮ್ಮ ಫೇಲ್ಯೂವರ್​ಗಳ ಬಗ್ಗೆ ಬೇಸರದಲ್ಲಿ ಇದ್ದಾರೆ. ಅವರ ಯಾವ ಸಿನಿಮಾಗಳೂ ಹಿಟ್ ಆಗುತ್ತಿಲ್ಲ. ‘ದಾಸ್ವಿ’ ಸಿನಿಮಾದ ಶೂಟ್ ವೇಳೆ ಅವರು ನಮೃತ್​ ಕೌರ್ ಜೊತೆ ಆಪ್ತತೆ ಬೆಳೆ ಸಿಕೊಂಡಿದ್ದರು. ನಮೃತಾ ಅವರು ಅಭಿಷೇಕ್ ವಿಚಾರದಲ್ಲಿ ಗಂಭೀರವಾಗಿದ್ದರು.  ಆ ಬಳಿಕ ತಪ್ಪು ಅರಿತ ಅಭಿಷೇಕ್ ಅವರು ನಮೃತಾರನ್ನು ಕೈಬಿಟ್ಟರು.

ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣವಾಗಿ ಸತ್ಯ ಎಂದು ಒಪ್ಪಿಕೊಳ್ಳಲೂ ಆಗುತ್ತಿಲ್ಲ. ಇದು ಸದ್ಯಕ್ಕೆ ಹರಿದಾಡುತ್ತಿರುವ ಅಂತೆ-ಕಂತೆ ಅಷ್ಟೇ. ಈ ಬಗ್ಗೆ ದಂಪತಿ ಅಧಿಕೃತವಾಗಿ ಮಾಹಿತಿ ನೀಡಲಿ ಎಂದು ಫ್ಯಾನ್ಸ್ ಕಾಡುತ್ತಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ನಡುವಿನ ವಯಸ್ಸಿನ ಅಂತರವೆಷ್ಟು? ಅಭಿಷೇಕ್ ಹಿರಿಯರಲ್ಲ

ಐಶ್ವರ್ಯಾ ಅವರಿಗೆ ಅನಾರೋಗ್ಯ ಉಂಟಾಗಿದೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರ ದೇಹದ ತೂಕ ಹೆಚ್ಚುತ್ತಿದೆಯಂತೆ. ಅವರು ಮೊದಲಿಗಿಂತ ದಪ್ಪ ಆಗಿದ್ದಾರೆ ಎಂದು ಕೆಲವರು ಹೇಳಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ