AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ; ಜಾಗತಿಕ ಮಟ್ಟದಲ್ಲಿ ಅಬ್ಬರ

Ramayana Trailer: ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ನಟನೆಯ, ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಚಿತ್ರದ ಅಧಿಕೃತ ಟ್ರೇಲರ್ ಜುಲೈ 24 ರಂದು ಜಾಗತಿಕವಾಗಿ ಬಿಡುಗಡೆಯಾಗಲಿದೆ. ಭಾರಿ ಬಜೆಟ್‌ನ ಈ ಪೌರಾಣಿಕ ಚಿತ್ರವು ದೀಪಾವಳಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಲು ಸಜ್ಜಾಗಿದೆ.

'ರಾಮಾಯಣ' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ; ಜಾಗತಿಕ ಮಟ್ಟದಲ್ಲಿ ಅಬ್ಬರ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on:Jul 30, 2026 | 10:07 AM

Share

ಮುಖ್ಯಾಂಶಗಳು

  • ಜುಲೈ 24 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ 'ರಾಮಾಯಣ'
  • ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್
  • 4000 ಕೋಟಿ ಬಜೆಟ್‌ನ ಭಾರತೀಯ ಚಿತ್ರರಂಗದ ದೃಶ್ಯ ಕಾವ್ಯ

ಭಾರತೀಯ ಚಿತ್ರರಂಗದಲ್ಲೇ ಹಿಂದೆಂದೂ ಕಾಣದ ಅತ್ಯಂತ ವಿಶಿಷ್ಟ ಹಾಗೂ ಬೃಹತ್ ಮಟ್ಟದಲ್ಲಿ ‘ರಾಮಾಯಣ’ ಸಿನಿಮಾ ಸಿದ್ಧವಾಗುತ್ತಿದೆ. ಭಾರತದ ಹೆಮ್ಮೆಯ ಪೌರಾಣಿಕ ಮಹಾಕಾವ್ಯವನ್ನು ಜಾಗತಿಕ ಮಟ್ಟದ ಪ್ರೇಕ್ಷಕರಿಗೆ ತಲುಪಿಸುವ ಸಲುವಾಗಿ, ಅದ್ದೂರಿ ಮೇಕಿಂಗ್ ಹಾಗೂ ತಂತ್ರಜ್ಞಾನದೊಂದಿಗೆ ಈ ಚಿತ್ರವನ್ನು ಜಗತ್ತಿನಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಭರದಿಂದ ಸಿದ್ಧತೆ ನಡೆಸುತ್ತಿದೆ. ಈಗ ಸಿನಿಮಾದ ಟ್ರೇಲರ್ ರಿಲೀಸ್ ದಿನಾಂಕ ರಿವೀಲ್ ಆಗಿದೆ.

‘ರಾಮಾಯಣ’ ಟ್ರೇಲರ್ ರಿಲೀಸ್ ದಿನಾಂಕದ ಬಗ್ಗೆ ಇತ್ತೀಚೆಗೆ ಹಲವು ಸುದ್ದಿ ಹರಡಿತ್ತು. ಈಗ ಬಿಗ್ ಅಪ್ಡೇಟ್ ಅನ್ನು ಚಿತ್ರತಂಡ ಅಧಿಕೃತವಾಗಿ ಹೊರಹಾಕಿದೆ. ಚಿತ್ರದ ಟ್ರೇಲರ್ ಜುಲೈ 24ರಂದು ವಿಶ್ವಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದು ತಂಡ ಘೋಷಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ವಿಶೇಷ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಈ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಖಚಿತಪಡಿಸಿದೆ.

ಸಿನಿಮಾ ಘೋಷಣೆಯಾದ ದಿನದಿಂದಲೂ ಪ್ರೇಕ್ಷಕರಲ್ಲಿ ಚಿತ್ರದ ದೃಶ್ಯ ವೈಭವದ ಬಗ್ಗೆ ಸಾಕಷ್ಟು ಕುತೂಹಲ ಮನೆಮಾಡಿದೆ. ಈ ಟ್ರೇಲರ್ ಮೂಲಕ ಚಿತ್ರದ ಭವ್ಯ ಲೋಕ, ಪಾತ್ರಗಳ ವಿವರ ಹಾಗೂ ಹಾಲಿವುಡ್ ಮಟ್ಟದ ಗ್ರಾಫಿಕ್ಸ್ ಝಲಕ್ ಕಾಣ ಸಿಗಲಿದೆ ಎಂಬ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ಈ ಟ್ರೇಲರ್ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯಲಿದೆ ಎಂದು ಸಿನಿವಿಶ್ಲೇಷಕರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಮೆಗಾ ಬಜೆಟ್ ಚಿತ್ರದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮಾರು 4,000 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಮಹಾಕಾವ್ಯದ ಮೊದಲ ಭಾಗವು ಇದೇ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಐಮ್ಯಾಕ್ಸ್ ಪರದೆಗಳ ಮೇಲೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:29 pm, Sat, 11 July 26

Follow Us