ಈಗಾಗಲೇ ಚಿತ್ರರಂಗದಲ್ಲಿ ‘ರಾಮಾಯಣ’ (Ramayana Movie) ಆಧರಿಸಿ ಹಲವು ಸಿನಿಮಾ ಹಾಗೂ ಧಾರಾವಾಹಿಗಳು ಸಿದ್ಧಗೊಂಡಿವೆ. ಕಳೆದ ವರ್ಷ ರಿಲೀಸ್ ಆದ ‘ಆದಿಪುರುಷ್’ ಸಿನಿಮಾ ಟೀಕೆಗೆ ಒಳಗಾಯಿತು. ಆದಾಗ್ಯೂ ಪ್ರಯೋಗ ನಿಂತಿಲ್ಲ. ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಆಧರಿಸಿ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ. ರಾಮನ ಪಾತ್ರದಲ್ಲಿ ನಟ ರಣಬೀರ್ ಕಪೂರ್ ನಟಿಸಲಿದ್ದಾರೆ. ಉಳಿದ ಪಾತ್ರಗಳ ಆಯ್ಕೆಯೂ ಭರದಿಂದ ಸಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ರಾಮಾಯಣ’ದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ನಟಿಸಲಿದ್ದಾರೆ. ಇತ್ತೀಚೆಗೆ ಅವರು ಕ್ಲೀನ್ ಶೇವ್ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಎಲ್ಲರೂ ಇದು ರಾಮನ ಲುಕ್ ಎಂದೇ ಭಾವಿಸುತ್ತಿದ್ದಾರೆ. ಇದರ ಜೊತೆಗೆ ಸೀತೆ, ಹನುಮಂತ ಮತ್ತು ರಾವಣನ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿತ್ತು. ಇದೀಗ ಚಿತ್ರದ ತಾರಾಬಳಗದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಯಾವ ಪಾತ್ರವನ್ನು ಯಾರು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ.
ಹನುಮಂತನ ಪಾತ್ರವನ್ನು ನಟ ಸನ್ನಿ ಡಿಯೋಲ್ ಮಾಡಲಿದ್ದರಂತೆ. ರಣಬೀರ್ ಜೊತೆಗೆ ಸೀತೆಯ ಪಾತ್ರದಲ್ಲಿ ನಟಿ ಆಲಿಯಾ ಭಟ್ ನಟಿಸಬೇಕಿತ್ತು. ಆದರೆ, ಅವರು ಸೀತೆ ಪಾತ್ರ ಮಾಡುತ್ತಿಲ್ಲ. ದಕ್ಷಿಣದ ನಟಿ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೇ ಚಿತ್ರದ ಇತರೆ ಪಾತ್ರಗಳಿಗೆ ಕಲಾವಿದರ ಆಯ್ಕೆ ನಡೆದಿದೆ. ನಟ ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸುತ್ತಿದ್ದು, ಲಾರಾ ದತ್ತಾ ಕೈಕೇಯಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ವಿಭೀಷಣನ ಪಾತ್ರವನ್ನು ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ವರದಿಗಳ ಪ್ರಕಾರ ನಟ ಸನ್ನಿ ಡಿಯೋಲ್ ಹನುಮಾನ್ ಪಾತ್ರಕ್ಕಾಗಿ ಸಂಪೂರ್ಣವಾಗಿ ತಯಾರಿ ನಡೆಸುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ತುಂಬಾ ಉತ್ಸುಕರಾಗಿದ್ದಾರೆ. ‘ಗದರ್ 2’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ.
ಇನ್ನು, ರಾವಣನ ಪಾತ್ರಕ್ಕೆ ಯಶ್ ಹೆಸರು ಅಂತಿಮ ಆಗಿದೆ. ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ‘ಟಾಕ್ಸಿಕ್’ ಜೊತೆ ‘ರಾಮಾಯಣ’ ಸಿನಿಮಾಗಳಲ್ಲೂ ಬ್ಯುಸಿ ಆಗಲಿದ್ದಾರೆ. ಅವರನ್ನು ರಾವಣನ ಅವತಾರದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಓಂ ರಾವತ್ ನಿರ್ದೇಶನ ಮಾಡಿದ್ದ ‘ಆದಿಪುರುಷ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಫ್ಲಾಪ್ ಆದ ನಂತರ, ನಿತೇಶ್ ತಿವಾರಿ ಅವರ ‘ರಾಮಾಯಣ’ ಹಾಟ್ ಟಾಪಿಕ್ ಆಗಿದೆ. ರಣಬೀರ್ ಮತ್ತು ಅವರ ಪತ್ನಿ ಆಲಿಯಾ ಭಟ್ ಇಬ್ಬರೂ ರಾಮ-ಸೀತೆಯ ಪಾತ್ರಗಳನ್ನು ನಿರ್ವಹಿಸುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ಈಗ ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿಯನ್ನು ಆಯ್ಕೆ ಮಾಡಲು ನಿತೇಶ್ ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್ ನ್ಯೂಸ್
ರಣಬೀರ್ ಕೂಡ ಶ್ರೀರಾಮನ ಪಾತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ. ಶೂಟಿಂಗ್ ಪೂರ್ಣಗೊಳ್ಳುವವರೆಗೆ ಅವರು ಮಾಂಸ, ಮದ್ಯ ಮತ್ತು ಸಿಗರೇಟ್ ತ್ಯಜಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವಿಚಾರ ಇಟ್ಟುಕೊಂಡು ನಟಿ ಕಂಗನಾ ರಣಾವತ್ ಅವರು ರಣಬೀರ್ ಅವರನ್ನು ಟೀಕಿಸಿದ್ದರು. ಈ ಟೀಕೆಗಳಿಗೆ ಅವರು ಉತ್ತರ ಕೊಟ್ಟಂತೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ