AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಫಸ್ಟ್‌ ಲುಕ್: ರಣಬೀರ್, ಯಶ್ ಭಾಗಿ

ನಿರ್ದೇಶಕ ನಿತೇಶ್ ತಿವಾರಿ ಅವರ 'ರಾಮಾಯಣ' ಸಿನಿಮಾ ಕಾಮಿಕ್ ಕಾನ್ 2026ರಲ್ಲಿ ಜಾಗತಿಕವಾಗಿ ಅನಾವರಣಗೊಳ್ಳಲು ಸಜ್ಜಾಗಿದೆ. ಜುಲೈ 23 ರಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಲಿದ್ದು, ನಟರಾದ ರಣಬೀರ್ ಕಪೂರ್ ಮತ್ತು ಯಶ್ ಭಾಗವಹಿಸಲಿದ್ದಾರೆ. ಬರೋಬ್ಬರಿ 4,000 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ದೃಶ್ಯ ಕಾವ್ಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೈಪ್ ಸೃಷ್ಟಿಸುತ್ತಿದ್ದು, ಚಿತ್ರದ ಮೊದಲ ಭಾಗವು 2026ರ ದೀಪಾವಳಿಗೆ ಜಗತ್ತಿನಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ.

ಅಂತಾರಾಷ್ಟ್ರೀಯ ವೇದಿಕೆಯಲ್ಲಿ 'ರಾಮಾಯಣ' ಫಸ್ಟ್‌ ಲುಕ್: ರಣಬೀರ್, ಯಶ್ ಭಾಗಿ
ಯಶ್-ರಣಬೀರ್
ರಾಜೇಶ್ ದುಗ್ಗುಮನೆ
|

Updated on:Jul 30, 2026 | 10:08 AM

Share

ಮುಖ್ಯಾಂಶಗಳು

  • ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ನಲ್ಲಿ 'ರಾಮಾಯಣ' ಆರ್ಭಟ
  • ಜಾಗತಿಕ ವೇದಿಕೆಯಲ್ಲಿ ಫಸ್ಟ್ ಲುಕ್ ಅನಾವರಣ
  • 4,000 ಕೋಟಿ ರೂಪಾಯಿ ಬಜೆಟ್‌ನ ಸಿನಿಮಾ

ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಈ ಸಿನಿಮಾ ಪ್ರತಿಷ್ಠಿತ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ 2026ರಲ್ಲಿಸ್ಥಾನ ಪಡೆದಿದೆ. ಜುಲೈ 23 ರಂದು ಚಿತ್ರದ ಫಸ್ಟ್‌ ಲುಕ್ ಜಾಗತಿಕ ವೇದಿಕೆಯಲ್ಲಿ ಬಿಡುಗಡೆ ಆಗಲಿದೆ. ಈ ಕಾರ್ಯಕ್ರಮದಲ್ಲಿ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ, ನಟರಾದ ರಣಬೀರ್ ಕಪೂರ್ ಮತ್ತು ಯಶ್ ಭಾಗವಹಿಸಲಿದ್ದಾರೆ ಎಂಬುದು ವಿಶೇಷ. ಇದಕ್ಕೂ ಮುನ್ನ ಜುಲೈ 18 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಚಿತ್ರದ ಭವ್ಯವಾದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

ಕಾಮಿಕ್ ಕಾನ್‌ನಲ್ಲಿ ಭಾರತೀಯ ಸಿನಿಮಾ ದಾಖಲೆ

‘ಕಲ್ಕಿ 2898 ಎಡಿ’ ಚಿತ್ರದ ನಂತರ ಕಾಮಿಕ್ ಕಾನ್ ವೇದಿಕೆಗೆ ಪ್ರವೇಶಿಸುತ್ತಿರುವ ಎರಡನೇ ಭಾರತೀಯ ಸಿನಿಮಾ ‘ರಾಮಾಯಣ’. ಹಾಲಿವುಡ್ ಸಿನಿಮಾಗಳೇ ಹೆಚ್ಚಾಗಿ ರಾರಾಜಿಸುವ ಈ ವೇದಿಕೆಯಲ್ಲಿ ರಾಮಾಯಣ ಪ್ರದರ್ಶನಗೊಳ್ಳುತ್ತಿರುವುದು ದೊಡ್ಡ ಸಾಧನೆ. ಸುಮಾರು 4,800 ಜನರು ಕುಳಿತುಕೊಳ್ಳಬಹುದಾದ ಬೃಹತ್ ಸಭಾಂಗಣದಲ್ಲಿ ಈ ಚಿತ್ರದ ಝಲಕ್ ಅನಾವರಣಗೊಳ್ಳಲಿದೆ. ಇದನ್ನು ಕೇವಲ ಭಾರತೀಯ ಸಿನಿಮಾವಾಗಿ ಅಲ್ಲದೆ ಜಾಗತಿಕ ಮಟ್ಟದ ಅದ್ಭುತ ದೃಶ್ಯ ಕಾವ್ಯವಾಗಿ ಪ್ರಸ್ತುತಪಡಿಸಲು ಮೇಕರ್ಸ್ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿಯ ಭಾರತ್ ಮಂಟಪದಲ್ಲಿ ರಣಬೀರ್ ಕಪೂರ್ ನಟನೆಯ ರಾಮಾಯಣ ಟ್ರೇಲರ್ ಲಾಂಚ್?

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರ

ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಹೈಪ್ ಕ್ರಿಯೇಟ್ ಮಾಡಲು ನಿರ್ಮಾಪಕರು ಭರ್ಜರಿ ತಯಾರಿ ನಡೆಸಿದ್ದಾರೆ. ಚಿತ್ರಕ್ಕೆ ಸಂಗೀತ ನೀಡುತ್ತಿರುವ ಖ್ಯಾತ ಸಂಯೋಜಕರಾದ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಅವರ ಲೈವ್ ಮ್ಯೂಸಿಕ್ ಶೋಗಳನ್ನು ವಿದೇಶಗಳಲ್ಲಿ ಆಯೋಜಿಸಲು ಚರ್ಚೆಗಳು ನಡೆಯುತ್ತಿವೆ.

ಬಿಗ್ ಬಜೆಟ್ ಹಾಗೂ ತಾರಾಗಣ

‘ರಾಮಾಯಣ’ ಸಿನಿಮಾ ಬರೋಬ್ಬರಿ 4,000 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಇನ್ನು ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ಲಕ್ಷ್ಮಣನಾಗಿ ರವಿ ದುಬೆ ನಟಿಸುತ್ತಿದ್ದಾರೆ. ಈ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಹಾಗೂ ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:06 pm, Fri, 10 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ