No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ

No Entry Mein Entry: ‘ನೋ ಎಂಟ್ರಿ ಮೇ ಎಂಟ್ರಿ’ ಸಿನಿಮಾದಲ್ಲಿ ಸಲ್ಮಾನ್​ ಖಾನ್​, ಅನಿಲ್​ ಕಪೂರ್​, ಫರ್ದೀನ್​ ಖಾನ್​ ನಟಿಸಲಿದ್ದಾರೆ. ಅಚ್ಚರಿ ಏನೆಂದರೆ ಈ ಚಿತ್ರದಲ್ಲಿ 10 ಹೀರೋಯಿನ್ಸ್ ಇರಲಿದ್ದಾರೆ.

No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ
ರಶ್ಮಿಕಾ ಮಂದಣ್ಣ, ಸಲ್ಮಾನ್​ ಖಾನ್​, ಸಮಂತಾ ರುತ್​ ಪ್ರಭು​
Follow us
TV9 Web
| Updated By: ಮದನ್​ ಕುಮಾರ್​

Updated on:Jun 22, 2022 | 1:55 PM

ಟಾಲಿವುಡ್​ನ ಟಾಪ್​ ನಟಿಯರು ಯಾರು ಎಂದರೆ ರಶ್ಮಿಕಾ ಮಂದಣ್ಣ ಮತ್ತು ಸಮಂತಾ ರುತ್​ ಪ್ರಭು (Samantha Ruth Prabhu) ಅವರ ಹೆಸರು ಥಟ್​ ಅಂತ ನೆನಪಾಗುತ್ತದೆ. ಅನೇಕ ಸಿನಿಮಾಗಳಲ್ಲಿ ಈ ಬೆಡಗಿಯರು ಬ್ಯುಸಿ ಆಗಿದ್ದಾರೆ. ಕೈ ತುಂಬ ಸಂಭಾವನೆ ಪಡೆಯುವ ರಶ್ಮಿಕಾ ಮಂದಣ್ಣ ಹಾಗೂ ಸಮಂತಾ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ. ಆದರೆ ಅವರು ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಸಖತ್​ ಕಾಳಜಿ ವಹಿಸುತ್ತಿದ್ದಾರೆ. ಈಗ ಅವರಿಗೆ ಸಲ್ಮಾನ್​ ಖಾನ್​ (Salman Khan) ಜೊತೆ ನಟಿಸುವ ಅವಕಾಶ ಒದಗಿಬಂದಿದೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ರಶ್ಮಿಕಾ ಮಂದಣ್ಣ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈಗಾಗಲೇ ತಿಳಿದಿರುವಂತೆ ಸಲ್ಮಾನ್​ ಖಾನ್​ ಅವರು ‘ನೋ ಎಂಟ್ರಿ’ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ‘ನೋ ಎಂಟ್ರಿ ಮೇ ಎಂಟ್ರಿ’ (No Entry Mein Entry) ಶೀರ್ಷಿಕೆಯಲ್ಲಿ ಈ ಸಿನಿಮಾ ಮೂಡಿಬರಲಿದೆ. ಅದರಲ್ಲಿ ನಟಿಸಲು ಸಮಂತಾ ಮತ್ತು ರಶ್ಮಿಕಾ ಮಂದಣ್ಣಗೆ ಆಫರ್​ ನೀಡಲಾಗಿದೆ ಎಂಬ ಗುಸುಗುಸು ಕೇಳಿಬಂದಿದೆ.

‘ನೋ ಎಂಟ್ರಿ ಮೇ ಎಂಟ್ರಿ’ ಸಿನಿಮಾದಲ್ಲಿ ಸಲ್ಮಾನ್​ ಖಾನ್​, ಅನಿಲ್​ ಕಪೂರ್​, ಫರ್ದೀನ್​ ಖಾನ್​ ನಟಿಸಲಿದ್ದಾರೆ. ಅಚ್ಚರಿ ಏನೆಂದರೆ ಈ ಚಿತ್ರದಲ್ಲಿ 10 ಹೀರೋಯಿನ್ಸ್ ಇರಲಿದ್ದಾರೆ. ಅದಕ್ಕಾಗಿ ಭಾರತೀಯ ಚಿತ್ರರಂಗದ ಹಲವು ಖ್ಯಾತ ನಟಿಯರಿಗೆ ಆಫರ್​ ನೀಡಲಾಗಿದೆ. ಆ ಪೈಕಿ ರಶ್ಮಿಕಾ ಮಂದಣ್ಣ, ಸಮಂತಾ ರುತ್​ ಪ್ರಭು ಅವರ ಹೆಸರು ಕೂಡ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ‘ಬಾಲಿವುಡ್​ ಲೈಫ್​’ ವರದಿ ಮಾಡಿದೆ.

ಇದನ್ನೂ ಓದಿ: ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ರಶ್ಮಿಕಾ ಮಂದಣ್ಣ, ಸಮಂತಾ ರುತ್​ ಪ್ರಭು ಮಾತ್ರವಲ್ಲದೇ ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಅವರಿಗೂ ಆಫರ್​ ನೀಡಲಾಗಿದೆಯಂತೆ. ಈ ಮೊದಲು ‘ನೋ ಎಂಟ್ರಿ’ ಚಿತ್ರದಲ್ಲಿ ನಟಿಸಿದ್ದ ಬಿಪಾಶಾ ಬಸು, ಲಾರಾ ದತ್ತ, ಇಶಾ ಡಿಯೋಲ್​ ಅವರಿಗೆ ಸೀಕ್ವೆಲ್​ನಲ್ಲಿ ಅವಕಾಶ ಇಲ್ಲ ಎನ್ನಲಾಗುತ್ತಿದೆ. ಆದರೆ ಈ ಎಲ್ಲ ವಿಚಾರಗಳ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಅನೀಸ್​​ ಬಾಜ್ಮಿ ಅವರು ‘ನೋ ಎಂಟ್ರಿ ಮೇ ಎಂಟ್ರಿ’ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿದ್ದು, ಸಲ್ಮಾನ್​ ಖಾನ್​ ಅವರು ಕಥೆ ಕೇಳಿ ಇಷ್ಟಪಟ್ಟಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:55 pm, Wed, 22 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ