AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಖಿ ಸಾವಂತ್​​ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್

ರಾಖಿ ಸಾವಂತ್ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. 2010 ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ವಿರುದ್ಧ ಇದೀಗ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ನ್ಯಾಯಾಲಯವೊಂದು ರಾಖಿ ವಿರುದ್ಧ ಬಂಧನದ ವಾರೆಂಟ್ ಹೊರಿಡಿಸಿದ್ದು, ಪ್ರಕರಣದ ವಿವರ ಇಲ್ಲಿದೆ...

ರಾಖಿ ಸಾವಂತ್​​ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್
Raakhi Sawant
ಮಂಜುನಾಥ ಸಿ.
|

Updated on: Oct 18, 2026 | 4:42 PM

Share

ಮುಖ್ಯಾಂಶಗಳು

  • ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್
  • 2010ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿ
  • ರಾಖಿ ಸಾವಂತ್ ಬಂಧನಕ್ಕೊಳಗಾಗುವ ಸಾಧ್ಯತೆ

ನಟಿ, ಸೋಷಿಯಲ್ ಮೀಡಿಯಾ ಇನ್​​ಫ್ಲಯೆನ್ಸರ್ ರಾಖಿ ಸಾವಂತ್, ವಿವಾದಗಳಿಂದ, ಚಿತ್ರ ವಿಚಿತ್ರ ಹೇಳಿಕೆಗಳಿಂದ ಸುದ್ದಿಯಲ್ಲಿರುವ ನಟಿ ರಾಖಿ ಸಾವಂತ್ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. 2010 ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ವಿರುದ್ಧ ಇದೀಗ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ನ್ಯಾಯಾಲಯವೊಂದು ರಾಖಿ ವಿರುದ್ಧ ಬಂಧನದ ವಾರೆಂಟ್ ಹೊರಿಡಿಸಿದ್ದು, ಪ್ರಕರಣದ ವಿವರ ಇಲ್ಲಿದೆ…

2010ರಲ್ಲಿ ಟಿವಿ ಶೋ ಒಂದರಲ್ಲಿ ಸ್ಥಳೀಯ ನಿವಾಸಿಯೊಬ್ಬರ ವಿರುದ್ಧ ಆಕ್ಷೇಪಾರ್ಹ ಹಾಗೂ ಅವಮಾನಕರ ಹೇಳಿಕೆಗಳನ್ನು ನೀಡಿದ ಹಾಗೂ ಆ ಮೂಲಕ ಆತ್ಮಹತ್ಯೆಗೆ ಪ್ರೇರೆಪಣೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಜಾಮೀನು ರಹಿತ ವಾರೆಂಟ್ ಅನ್ನು ನ್ಯಾಯಾಲಯ ಹೊರಡಿಸಿದೆ. ‘ರಾಕಿ ಕಾ ಇನ್ಸಾಫ್’ ಹೆಸರಿನ ಶೋನ ನಿರೂಪಣೆಯನ್ನು ರಾಖಿ ಸಾವಂತ್ ಮಾಡುತ್ತಿದ್ದರು, ಆ ಶೋನಲ್ಲಿ ನೀಡಿದ ಹೇಳಿಕೆ ಇಂದಾಗಿ ಇದೀಗ ಕಾನೂನು ತೊಡಕಿನಲ್ಲಿ ರಾಖಿ ಸಾವಂತ್ ಸಿಲುಕಿಕೊಂಡಿದ್ದಾರೆ.

ಪ್ರಕರಣದ ವಿಚಾರಣೆ ವರ್ಷಗಳಿಂದಲೂ ನಡೆಯುತ್ತಿದ್ದು, ರಾಖಿ ಸಾವಂತ್ ನ್ಯಾಯಾಲಯದ ವಿಚಾರಣೆಗೆ ರಾಖಿ ಸಾವಂತ್ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಸಿವಿಲ್ ಜಡ್ಜ್ ಅಂಜಲಿ ಅವರು ಶುಕ್ರವಾರ ಈ ವಾರೆಂಟ್ ಜಾರಿಗೊಳಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ಮೃದುಲ್ ಕಾಂತ್ ಶ್ರೀವಾಸ್ತವ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಝಾನ್ಸಿಯ ಹನ್ಸಾರಿ ಪ್ರೇಮ್ ನಗರ ಪ್ರದೇಶದ ನಿವಾಸಿ ಲಕ್ಷ್ಮಣ್ ಅಹಿರ್‌ವಾರ್ ಎಂಬವರು, ‘ರಾಖಿ ಕಾ ಇನ್ಸಾಫ್’ ಟಿವಿ ಶೋನಲ್ಲಿ ಭಾಗಿ ಆಗಿದ್ದರು, ಆ ಬಳಿಕ ಲಕ್ಷ್ಮಣ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಲಕ್ಷ್ಮಣ್ ಅವರು, ರಾಖಿ ನೀಡಿದ ಹೇಳಿಕೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ:ಆಮಿರ್ ಖಾನ್ ಮದುವೆಯಾಗಲು ರೆಡಿ, ಮತಾಂತರಗೊಳ್ಳಲು ಸಿದ್ಧ; ರಾಖಿ ಸಾವಂತ್

ಲಕ್ಷ್ಮಣ್ ಅವರ ತಾಯಿ ಸಾವಿತ್ರಿ ಅವರು ಪ್ರೇಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 2010ರ ಅಕ್ಟೋಬರ್‌ನಲ್ಲಿ ಪ್ರಸಾರವಾದ ಶೋನ ಸಂಚಿಕೆಯೊಂದರಲ್ಲಿ ರಾಕಿ ತನ್ನ ಮಗನ ವಿರುದ್ಧ ಅವಮಾನಕರ ಮತ್ತು ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ, ಅದರಿಂದಲೇ ಮನನೊಂದು ತಮ್ಮ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದರು.

ರಾಜಗಢ ಮೂಲದ ಲಕ್ಷ್ಮಣ್ ಮತ್ತು ಅವರ ಪತ್ನಿ ಅನಿತಾ ಅವರ ನಡುವೆ ಕೌಟುಂಬಿಕ ಕಲಹವಿದ್ದ ಕಾರಣ ಅವರನ್ನು ಈ ಶೋಗೆ ಆಹ್ವಾನಿಸಲಾಗಿತ್ತು. ದಂಪತಿಗಳ ನಡುವೆ ಇದ್ದ ಜಗಳವನ್ನು ಸರಿ ಮಾಡಲು ರಾಖಿ ಪ್ರಯತ್ನಿಸಿದ್ದರು. ಈ ವೇಳೆ ಪತಿ ಲಕ್ಷ್ಮಣ್ ವಿರುದ್ಧ ರಾಖಿ ಕೆಲ ಮಾತುಗಳನ್ನಾಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಲಕ್ಷ್ಮಣ್ ಆತ್ಮಹತ್ಯೆ ಮಾಡಿಕೊಂಡಿದ್ದ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ