AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹ ತಂಡಕ್ಕೆ ಸಂಕಷ್ಟ: ಎದುರಾಗಿದೆ ಬಂಧನ ಭೀತಿ

Sonakshi Sinha: ಬಾಲಿವುಡ್ ನಟಿ ಸೊನಾಕ್ಷಿ ಸಿನ್ಹ ಅವರ ತಂಡ ಕಾನೂನು ಸಂಕಷ್ಟ ಎದುರಿಸುತ್ತಿದೆ. ವಂಚನೆ ಪ್ರಕರಣದಲ್ಲಿ ಅವರ ತಂಡದ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

ಸೋನಾಕ್ಷಿ ಸಿನ್ಹ ತಂಡಕ್ಕೆ ಸಂಕಷ್ಟ: ಎದುರಾಗಿದೆ ಬಂಧನ ಭೀತಿ
ಮಂಜುನಾಥ ಸಿ.
|

Updated on: Feb 08, 2024 | 9:00 PM

Share

ಬಾಲಿವುಡ್​ನ (Bollywood) ಜನಪ್ರಿಯ ನಟಿ ಸೊನಾಕ್ಷಿ ಸಿನ್ಹರಿಂದಾಗಿ (Sonakshi Sinha) ಅವರ ತಂಡ ಇಕ್ಕಟ್ಟಿಗೆ ಸಿಲುಕಿದೆ. ವಂಚನೆ ಪ್ರಕರಣವೊಂದರಲ್ಲಿ ಸೊನಾಕ್ಷಿ ಸಿನ್ಹ ಅವರ ಮ್ಯಾನೇಜರ್ ಸೇರಿದಂತೆ ಅವರದ್ದೇ ತಂಡದ ಆರು ಮಂದಿಯ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಸೊನಾಕ್ಷಿ ಸಿನ್ಹ ಪ್ರಸ್ತುತ ಈ ಪ್ರಕರಣದಿಂದ ತಾತ್ಕಾಲಿಕ ರಿಲೀಫ್ ಪಡೆದುಕೊಂಡಿದ್ದಾರಾದರೂ ವಿಚಾರಣೆ ಮುಂದುವರೆದಂತೆ ಅವರಿಗೂ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

2018ರಲ್ಲಿ ನಟಿ ಸೊನಾಕ್ಷಿ ಸಿನ್ಹ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೊನಾಕ್ಷಿ ಸಿನ್ಹ ಹಣ ಸಹ ಪಡೆದಿದ್ದರು. ಆದರೆ ಆ ಕಾರ್ಯಕ್ರಮಕ್ಕೆ ಅವರು ಗೈರಾದರು. ಇದರಿಂದಾಗಿ ಕಾರ್ಯಕ್ರಮ ಆಯೋಜಿಸಿದವರಿಗೆ ಭಾರಿ ನಷ್ಟವಾಗಿತ್ತು. ಸೊನಾಕ್ಷಿ ಸಿನ್ಹ, ಕಾರ್ಯಕ್ರಮಕ್ಕೆ ಹಾಜರಾಗಲು ಪಡೆದ ಹಣವನ್ನು ಸಹ ಹಿಂದಿರುಗಿಸಿರಲಿಲ್ಲ. ಇದರಿಂದಾಗಿ ಕಾರ್ಯಕ್ರಮ ಆಯೋಜಕರು ನ್ಯಾಯಾಲಯದಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೊನಾಕ್ಷಿಯ ಮ್ಯಾನೇಜರ್​ಗಳು ಹಾಗೂ ಅವರ ತಂಡದ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಇದನ್ನೂ ಓದಿ:ಮುಂಬೈನಲ್ಲಿ ಹೊಸ ಮನೆ ಖರೀದಿಸಿದ ಸೊನಾಕ್ಷಿ ಸಿನ್ಹಾ: ಬೆಲೆ ಎಷ್ಟು ಕೋಟಿ?

ಸೊನಾಕ್ಷಿ ಸಿನ್ಹ ಪರವಾಗಿ ಅವರ ತಂಡದ ಮಾಳವಿಕ ಪಂಜಾಬಿ, ಧುಮಿಲ್ ಠಕ್ಕರ್, ಎಡ್ಗರ್ ಸಕರಿಯಾ, ಅಭಿಷೇಕ್ ಸಿನ್ಹ ಅವರುಗಳು ಕಾರ್ಯಕ್ರಮ ಆಯೋಜಕ ಪ್ರಮೋದ್ ಶರ್ಮಾ ಎಂಬುವರಿಂದ ಹಣ ಪಡೆದಿದ್ದರು. 2018ರ ಸೆಪ್ಟೆಂಬರ್ 30ರಂದು ನಡೆದ ಕಾರ್ಯಕ್ರಮಕ್ಕೆ ಸೊನಾಕ್ಷಿ ಹಾಜರಾಗಬೇಕಿತ್ತು, ಆದರೆ ಸೊನಾಕ್ಷಿ ಆ ಕಾರ್ಯಕ್ರಮಕ್ಕೆ ಬರಲಿಲ್ಲ. ಇದರಿಂದ ಆಯೋಜಕರಿಗೆ ನಷ್ಟವಾಗಿ ಅವರು ಮುರಾದಾಬಾದ್ ನ್ಯಾಯಾಲಯದಲ್ಲಿ ಸೊನಾಕ್ಷಿ ಸಿನ್ಹ ಹಾಗೂ ತಂಡದ ವಿರುದ್ಧ 2019ರ ಫೆಬ್ರವರಿ ತಿಂಗಳಿನಲ್ಲಿ ವಂಚನೆ ಪ್ರಕರಣ ದಾಖಲಿಸಿದರು.

ಪ್ರಕರಣದ ವಿರುದ್ಧ ಅಲಹಾಬಾದ್ ಹೈಕೋರ್ಟ್ ಮೊರೆ ಹೋದ ನಟಿ ಸೊನಾಕ್ಷಿ ಸಿನ್ಹ ಅರ್ಜಿ ಹಾಕಿ ಪ್ರಕರಣದಲ್ಲಿ ತಮ್ಮ ವಿರುದ್ಧ ಕಾರ್ಯಾಚರಣೆ ಹಾಗೂ ವಿಚಾರಣೆಗೆ ಸ್ಟೇ ತಂದರು. ಆದರೆ ಅವರ ತಂಡದವರ ವಿರುದ್ಧ ತನಿಖೆ ಜಾರಿಯಲ್ಲಿತ್ತು. ಇದೀಗ ಅವರ ತಂಡದ ಸದಸ್ಯರ ವಿರುದ್ಧ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 28ಕ್ಕೆ ನಡೆಯಲಿದೆ.

ಸೊನಾಕ್ಷಿ ಸಿನ್ಹ ಪ್ರಸ್ತುತ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಕಕುಡಾ’, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಹಾಗೂ ‘ನಿಖಿತಾ ರಾಯ್ ಆಂಡ್ ದಿ ಬುಕ್ ಆಫ್ ಡಾರ್ಕ್​ನೆಸ್’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಒಂದು ವೆಬ್ ಸರಣಿಯಲ್ಲಿಯೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು