AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ

ನೋರಾ ಫತೇಹಿ 2026ರ FIFA ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಅದ್ಭುತ ನೃತ್ಯದಿಂದ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಇದರ ಪರಿಣಾಮವಾಗಿ, ಅವರು Google ಟ್ರೆಂಡ್ಸ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ಹೊರಹೊಮ್ಮಿದ್ದಾರೆ. ಅವರ ವೈರಲ್ ಡ್ಯಾನ್ಸ್ ಸೋಶಿಯಲ್ ಮೀಡಿಯಾ ಮತ್ತು ಯೂಟ್ಯೂಬ್‌ನಲ್ಲಿ ಕೋಟ್ಯಂತರ ವೀಕ್ಷಣೆಗಳನ್ನು ಪಡೆದು ದಾಖಲೆ ನಿರ್ಮಿಸಿದೆ. ಈ ಐತಿಹಾಸಿಕ ಸಾಧನೆಗೆ ನೋರಾ ಸಂತಸ ವ್ಯಕ್ತಪಡಿಸಿದ್ದಾರೆ.

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ
ನೋರಾ ಫತೇಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 20, 2026 | 7:56 AM

Share

2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ತಮ್ಮ ಹೈ-ವೋಲ್ಟೇಜ್ ನೃತ್ಯದ ಮೂಲಕ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಈ ಬೆನ್ನಲ್ಲೇ ಗೂಗಲ್ ಟ್ರೆಂಡ್ಸ್‌ನಲ್ಲಿ ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿ, ಸದ್ಯ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ನೋರಾ (Nora Fatehi) ಹೊರಹೊಮ್ಮಿದ್ದಾರೆ.

ಜೂನ್ 12ರ ಧಮಾಕಾ, ಸೋಶಿಯಲ್ ಮೀಡಿಯಾ ಉಡೀಸ್

ಜೂನ್ 12ರಂದು ನಡೆದ ಫಿಫಾ ಉದ್ಘಾಟನಾ ಪಂದ್ಯದ ವೇಳೆ ನೋರಾ ಸ್ಟೇಜ್ ಮೇಲೆ ಬರುತ್ತಿದ್ದಂತೆ ಕ್ರೀಡಾಂಗಣದಲ್ಲಿ ಉತ್ತಮ ವೈಬ್ ಸೃಷ್ಟಿಯಾಗಿತ್ತು. ಅವರ ಪರ್ಫಾಮೆನ್ಸ್‌ನ ಸಣ್ಣ ಸಣ್ಣ ಕ್ಲಿಪ್‌ಗಳು ಇಂಟರ್ನೆಟ್‌ಗೆ ಲಗ್ಗೆ ಇಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಬಿರುಗಾಳಿಯೇ ಎದ್ದಿತು. ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳು ಈ ವಿಡಿಯೋಗಳನ್ನು ಶೇರ್ ಮಾಡಿದ್ದಲ್ಲದೆ, ನೋರಾ ನೃತ್ಯಕ್ಕೆ ಫಿದಾ ಆಗಿದ್ದಾರೆ.

ಈ ಐತಿಹಾಸಿಕ ಸಾಧನೆಯ ಬೆನ್ನಲ್ಲೇ ನೋರಾ ಫತೇಹಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಯಶಸ್ಸಿನ ಹಿಂದಿರುವ ಆಪ್ತರ ಚಿತ್ರಗಳನ್ನು ಪೋಸ್ಟ್ ಮಾಡಿರುವ ಅವರು, ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ

ಯೂಟ್ಯೂಬ್‌ನಲ್ಲೂ ರೆಕಾರ್ಡ್ ಬ್ರೇಕ್ ಗಳಿಕೆ

ನೋರಾ ಫತೇಹಿ ಅವರಿಗೆ ಫಿಫಾ ವೇದಿಕೆ ಹೊಸದೇನಲ್ಲ. ಇದಕ್ಕೂ ಮುನ್ನ 2022ರ ವಿಶ್ವಕಪ್‌ನಲ್ಲೂ ಅವರು ಕಾಣಿಸಿಕೊಂಡು ಭಾರಿ ಸದ್ದು ಮಾಡಿದ್ದರು. ಆದರೆ ಈ ಬಾರಿ ಕೆನಡಾದ ಟೊರಾಂಟೊದಲ್ಲಿರುವ ‘ಬಿಎಂಒ ಫೀಲ್ಡ್’ ಮೈದಾನದಲ್ಲಿ ಅವರು ನೀಡಿದ ಪ್ರದರ್ಶನ ನೆಕ್ಸ್ಟ್ ಲೆವೆಲ್‌ನಲ್ಲಿದೆ. ವಿಶೇಷವೆಂದರೆ, ಅವರ ‘ಸೀರ್ ಸೀರ್’ ಟ್ರ್ಯಾಕ್ ಪ್ರದರ್ಶನ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ ಯೂಟ್ಯೂಬ್‌ನಲ್ಲಿ ಬರೊಬ್ಬರಿ 2 ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆದು ಡಿಜಿಟಲ್ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ