Samrat Prithviraj: ಅಕ್ಷಯ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ಗೆ ಹಿನ್ನಡೆ; ಈ ದೇಶಗಳಲ್ಲಿ ಚಿತ್ರ ಬ್ಯಾನ್​

Akshay Kumar | Manushi Chillar: ಜೂನ್ 3ರಂದು ವಿಶ್ವಾದ್ಯಂತ ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ರಿಲೀಸ್ ಆಗಲಿದ್ದು, ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ ಇದೆ. ಆದರೆ ರಿಲೀಸ್​ಗೆ ಒಂದು ದಿನವಿರುವಾಗ ಚಿತ್ರತಂಡಕ್ಕೆ ಹಿನ್ನಡೆಯಾಗಿದೆ.

Samrat Prithviraj: ಅಕ್ಷಯ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ಗೆ ಹಿನ್ನಡೆ; ಈ ದೇಶಗಳಲ್ಲಿ ಚಿತ್ರ ಬ್ಯಾನ್​
‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದ ಪೋಸ್ಟರ್
Follow us
TV9 Web
| Updated By: shivaprasad.hs

Updated on:Jun 01, 2022 | 7:20 PM

ಅಕ್ಷಯ್ ಕುಮಾರ್ (Akshay Kumar) ನಟನೆಯ ಬಹುನಿರೀಕ್ಷಿತ ಚಿತ್ರ ‘ಸಾಮ್ರಾಟ್ ಪೃಥ್ವಿರಾಜ್’ (Samrat Prithviraj) ತೆರೆಗೆ ಬರಲು ಸಿದ್ಧವಾಗಿದೆ. ಜೂನ್ 3ರಂದು ವಿಶ್ವಾದ್ಯಂತ ಈ ಸಿನಿಮಾ ರಿಲೀಸ್ ಆಗಲಿದ್ದು, ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ ಇದೆ. ಆದರೆ ರಿಲೀಸ್​ಗೆ ಒಂದು ದಿನವಿರುವಾಗ ಚಿತ್ರತಂಡಕ್ಕೆ ಹಿನ್ನಡೆಯಾಗಿದೆ. ವರದಿಗಳ ಪ್ರಕಾರ ಓಮನ್​ ಮತ್ತು ಕುವೈತ್​ನಲ್ಲಿ ‘ಸಾಮ್ರಾಟ್ ಪೃಥ್ವಿರಾಜ್‘ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಆ ದೇಶಗಳು ಈ ಚಿತ್ರವನ್ನು ಬ್ಯಾನ್ ಮಾಡಿವೆ. ಐತಿಹಾಸಿಕ ಕಥಾನಕ ಹೊಂದಿರುವ ಚಿತ್ರವನ್ನು ಬ್ಯಾನ್ ಮಾಡಿದ್ದೇಕೆ ಎಂಬುದರ ಬಗ್ಗೆ ಇನ್ನೂ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಆದರೆ ಬಲ್ಲಮೂಲಗಳನ್ನು ಉಲ್ಲೇಖಿಸಿ ‘ಬಾಲಿವುಡ್​ ಹಂಗಾಮಾ’ ಓಮನ್ ಮತ್ತು ಕುವೈತ್​ನಲ್ಲಿ ಅಕ್ಷಯ್ ನಟನೆಯ ಚಿತ್ರ ಬ್ಯಾನ್ ಆಗಿರುವುದರ ಬಗ್ಗೆ ವರದಿ ಮಾಡಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

ಪೃಥ್ವಿರಾಜ್ ಚೌಹಾಣ್ ಕಥಾನಕವನ್ನು ಆಧರಿಸಿ ತಯಾರಾಗಿರುವ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರೊಂದಿಗೆ ವಿಶ್ವ ಸುಂದರಿ ಮಾನುಷಿ  ಚಿಲ್ಲರ್ ಬಣ್ಣಹಚ್ಚುತ್ತಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿದೆ. ಸಂಜಯ್ ದತ್, ಸೋನು ಸೂದ್ ಮೊದಲಾದ ತಾರೆಯರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶಿಸುತ್ತಿರುವ ಈ ಚಿತ್ರ ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

ಇದನ್ನೂ ಓದಿ
Image
KK’s funeral: ಜೂನ್ 2ರಂದು ಮುಂಬೈನಲ್ಲಿ ಗಾಯಕ ಕೆಕೆ ಅಂತ್ಯಕ್ರಿಯೆ
Image
Hansika Motwani: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್​
Image
‘ರಾಷ್ಟ್ರಭಾಷೆ ಕುರಿತ ಚರ್ಚೆ ಪ್ರಧಾನಿ ಮಾತಿನೊಂದಿಗೆ ಮುಕ್ತಾಯವಾಗಿರುವುದು ಸಂತಸ ತಂದಿದೆ’: ಸುದೀಪ್​
Image
Suriya in Vikram: ಹೊಸ ಟ್ವಿಸ್ಟ್​​ ನೀಡಿದ ‘ವಿಕ್ರಮ್’ ಚಿತ್ರತಂಡ; ಕಮಲ್, ವಿಜಯ್ ಸೇತುಪತಿ​, ಫಹಾದ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಸ್ಟಾರ್ ನಟ 

ದೊಡ್ಡ ಬಜೆಟ್​ನಲ್ಲಿ ತಯಾರಾಗಿರುವ ಈ ಚಿತ್ರವು 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕತೆಯನ್ನು ಆಧರಿಸಿದೆ. ಈ ಮೊದಲು ಚಿತ್ರಕ್ಕೆ ‘ಪೃಥ್ವಿರಾಜ್’ ಎಂಬ ಶೀರ್ಷಿಕೆ ಇಡಲಾಗಿತ್ತು. ಕರಣಿ ಸೇನ ಸಂಘಟನೆಯು ಹೆಸರನ್ನು ಬದಲಾಯಿಸುವಂತೆ ಕೋರಿಕೊಂಡಿತ್ತು. ಹೀಗಾಗಿ ಮೇ 27ರಂದು ‘ಸಾಮ್ರಾಟ್ ಪೃಥ್ವಿರಾಜ್’ ಎಂದು ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲಾಗಿತ್ತು.

ಇದನ್ನೂ ಓದಿ: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಯಶ್​ ರಾಜ್ ಫಿಲ್ಮ್ಸ್​​ ಬಂಡವಾಳ ಹೂಡುತ್ತಿರುವ ಈ ಚಿತ್ರವನ್ನು ಸುಮಾರು 300 ಕೋಟಿ ರೂ ವೆಚ್ಚದಲ್ಲಿ ತಯಾರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 1 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ