ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?

OMG 2 Trailer: ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?
ಅಕ್ಷಯ್

Updated on: Aug 03, 2023 | 12:55 PM

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್​ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ. ಅವರು ‘ಒಹ್ ಮೈ ಗಾಡ್ 2’ ಚಿತ್ರದ (OMG 2) ಮೇಲೆ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್ 11ರಂದು ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಇಂದು (ಆಗಸ್ಟ್ 3) ರಿಲೀಸ್ ಆಗಿದೆ. ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ.

ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಲೈಂಗಿಕ ಶಿಕ್ಷಣದ ಬಗ್ಗೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್ ಉದ್ದಕ್ಕೂ ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ವಿಚಾರಗಳನ್ನು ಹೇಳುವಾಗ ಹೆಚ್ಚು ಎಚ್ಚರಿಕೆ ಬೇಕು. ಹೀಗಾಗಿ, ‘ಒಎಂಜಿ 2’ ಸಿನಿಮಾ ವಿವಾದ ಸೃಷ್ಟಿ ಮಾಡಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದೆ. ಅಂದರೆ, ವಯಸ್ಕರು ಮಾತ್ರ ಈ ಚಿತ್ರ ವೀಕ್ಷಿಸಬಹುದು. ನಾಗ ಸಾಧುಗಳ ದೃಶ್ಯವೊಂದು ಸಿನಿಮಾದಲ್ಲಿ ಬರುತ್ತದೆ. ನಾಗ ಸಾಧುಗಳು ಬಟ್ಟೆ ಹಾಕುವುದಿಲ್ಲ. ಆ ದೃಶ್ಯವನ್ನು ತೋರಿಸದಂತೆ ಸೆನ್ಸಾರ್ ಮಂಡಳಿಯವರು ಸೂಚಿಸಿದ್ದಾರೆ. ದೃಶ್ಯವೊಂದರ ಬ್ಯಾಕ್​ಗ್ರೌಂಡ್​ನಲ್ಲಿ ಕಾಂಡೋಮ್ ಜಾಹೀರಾತು ಕಾಣಿಸುತ್ತದೆ. ಅದನ್ನು ತೆಗೆಯುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ತಪ್ಪಿನಿಂದ ಬದಲಾವಣೆ ಕಂಡ ಅಕ್ಷಯ್ ಕುಮಾರ್; ಸತತ ಸೋಲಿನ ಬಳಿಕ ಬದಲಾದ ಸ್ಟಾರ್ ಹೀರೋ

‘ಒಎಂಜಿ 2’ ಸಿನಿಮಾದಲ್ಲಿ 25 ಕಡೆಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ. ‘ಆದಿಪುರುಷ್’ ಚಿತ್ರ ಸಾಕಷ್ಟು ವಿವಾದ ಮಾಡಿತ್ತು. ಈ ವಿವಾದದಿಂದ ಸೆನ್ಸಾರ್ ಮಂಡಳಿ ಎಚ್ಚೆತ್ತುಕೊಂಡಿದೆ. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯು ರಿವೈಸಿಂಗ್ ಕಮಿಟಿಗೆ ಚಿತ್ರವನ್ನು ಕಳುಹಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Thu, 3 August 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us